ಕಲಬುರಗಿ| ಕೋವಿಡ್-19: ಜಿಲ್ಲೆಯ ಸಾರ್ವಜನಿಕರು ಮುಂಜಾಗ್ರತಾ ಕ್ರಮಕೈಗೊಳ್ಳುವಂತೆ ಡಿ.ಸಿ ಸೂಚನೆ

Date:

Share post:

ಕಲಬುರಗಿ: 2025ನೇ ಸಾಲಿನಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಕೋವಿಡ್-19ಗೆ ಸಂಬಂಧಿಸಿದಂತೆ ಯಾವುದೇ ಪ್ರಕರಣ ವರದಿಯಾಗಿರುವುದಿಲ್ಲ. ಸಾರ್ವಜನಿಕರು ಭಯಪಡುವ ಅವಶ್ಯಕತೆಯಿಲ್ಲ. ಈ ಕುರಿತು ಆರೋಗ್ಯ ಇಲಾಖೆಯಿಂದ ನೀಡಲಾದ ಕೆಳಕಂಡ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಕಲಬುರಗಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ತಿಳಿಸಿದ್ದಾರೆ.

 

ರಾಜ್ಯದಲ್ಲಿ 2025ರ ಜನವರಿಯಿಂದ ಮೇ 26 ರವರೆಗೆ ಒಟ್ಟು 135 ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ಅದರಲ್ಲಿ 80 ಪ್ರಕರಣಗಳು ಸಕ್ರೀಯವಾಗಿರುತ್ತವೆ ಹಾಗೂ ಒಂದು ಮರಣದ ಪ್ರಕರಣ ವರದಿಯಾಗಿರುತ್ತದೆ. ಈಗಾಗಲೇ ಕಲಬುರಗಿ ಜಿಮ್ಸ್ ಆಸ್ಪತ್ರೆಯಲ್ಲಿ ಒಟ್ಟು 20 ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ. ಅದರಲ್ಲಿ 10 ಸಾಮಾನ್ಯ ಹಾಸಿಗೆಗಳು, 05 ಹೆಚ್.ಡಿ.ಯು ಮತ್ತು 05 ಐ.ಸಿ.ಯು ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ. ಖಚಿತ ಪ್ರಕರಣಗಳಲ್ಲಿ ಅಲ್ಪಪ್ರಮಾಣದ ಲಕ್ಷಣಗಳುಳ್ಳ ರೋಗಿಗಳಿಗೆ ಹೋಮ ಐಸೋಲೇಷನ ಮಾಡಲಾಗುವುದು ಹಾಗೂ ತೀವ್ರತರದ ರೋಗ ಲಕ್ಷಣಗಳುಳ್ಳ ರೋಗಿಗಳಿಗೆ ಕಲಬುರಗಿ ಜಿಮ್ಸ್ ಆಸ್ಪತ್ರೆಯಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತದೆ.

 

ಶೀತ, ನೆಗಡಿ, ಜ್ವರ ಇರುವ ತಮ್ಮ ಮಕ್ಕಳನ್ನು ಪೋಷಕರು ಶಾಲೆಗೆ ಕಳುಹಿಸದಿರುವುದು ಉತ್ತಮ. ಸಾರ್ವಜನಿಕರು ಆಗಾಗೆ ಸಾಬೂನಿನಿಂದ ಅಥವಾ ಸೈನಿಟೈಸರ್‍ ನಿಂದ ಕೈ ತೊಳೆಯಬೇಕು. ಕೆಮ್ಮುವಾಗ ಅಥವಾ ಸೀನುವಾಗ ಕರವಸ್ತ್ರ ಉಪಯೋಗಿಸಬೇಕು. ಯಾವುದೇ ತರಹದ ಕೆಮ್ಮು, ನೆಗಡಿ, ಗಂಟಲು ನೋವು, ಜ್ವರ ಕಂಡುಬಂದಲ್ಲಿ ಹತ್ತಿರದ ಸರಕಾರಿ ಆಸ್ಪತ್ರೆಗೆಹೋಗಿ ಚಿಕಿತ್ಸೆ ಪಡೆಯಬೇಕು. ವಿಶೇಷವಾಗಿ ಮಕ್ಕಳು, ವೃದ್ಧರು, ಗರ್ಭೀಣಿ ಸ್ತ್ರೀಯರಲ್ಲಿ ರೋಗ ಲಕ್ಷಣಗಳು ಕಂಡುಬಂದಲ್ಲಿ ಹೆಚ್ಚಿನ ನಿಗಾ ವಹಿಸಬೇಕು.

 

ರಾಜ್ಯದ ಮಾರ್ಗಸೂಚಿಯಂತೆ ತೀವ್ರ ಉಸಿರಾಟದ ತೊಂದರೆ ಇರುವವರಿಗೆ ಹಾಗೂ ಗರ್ಭೀಣಿಯರು, ಮಕ್ಕಳು, ವೃದ್ದರಲ್ಲಿ ಲಕ್ಷಣಗಳು ಕಂಡುಬಂದಲ್ಲಿ ವೈದ್ಯರ ಸಲಹೆ ಮೇರೆಗೆ ಕೋವಿಡ್-19 ನ ಪರೀಕ್ಷೆ ಮಾಡಲಾಗುತ್ತದೆ. ಕೋವಿಡ್-19 ಸೋಂಕನ್ನು ದೃಢಪಡಿಸಿಕೊಳ್ಳಲು RT-PCR ಪರೀಕ್ಷೆಗೆ ಕಲಬುರಗಿ (VRDL GIMS) ಜಿಮ್ಸ್ ಪ್ರಯೋಗಾಶಾಲೆ ನಿಗದಿಪಡಿಸಿದ್ದು, ಆದ್ದರಿಂದ ಜಿಲ್ಲೆಯ ಎಲ್ಲಾ ಮಾದರಿಗಳು ಅಲ್ಲಿಯೇ ಪರೀಕ್ಷೆಗೆ ಒಳಪಡಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಏ.15 ರಿಂದ 17ರ ವರೆಗೆ ಹೀಟ್ ವೇವ್ ಆರೆಂಜ್ ಅಲರ್ಟ್: ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ 

ಕಲಬುರಗಿ: ಕಲಬುರಗಿ ಜಿಲ್ಲೆಯಾದ್ಯಂತ ಇದೇ ಏಪ್ರೀಲ್ 15 ರಿಂದ 17ರ ವರೆಗೆ...

ಕಲಬುರಗಿ| ಅಂಬೇಡ್ಕರ್ ಜಯಂತಿ: ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ: ಡಿಸಿ ಆದೇಶ

ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಯಾವುದೇ ಅಹಿತಕರ...

ಕಲಬುರಗಿ| ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಡಾ.ಅಂಬೇಡ್ಕರ್ ಜಯಂತಿ

ಕಲಬುರಗಿ: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಾಬಾ ಸಾಹೇಬ ಅಂಬೇಡ್ಕರ್...

ಕಲಬುರಗಿ| ಕಲಾ ವಿಭಾಗದಲ್ಲಿ ಸೃಷ್ಟಿ ಮಲ್ಲಿನಾಥ ರಾಜ್ಯಕ್ಕೆ ಪ್ರಥಮ

ಕಲಬುರಗಿ: ಪ್ರಸಕ್ತ ದ್ವಿತೀಯ ಪಿ.ಯು.ಸಿ-1 ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಕಲಬುರಗಿಯ...