ಕಲಬುರಗಿ: ವಿದ್ಯುತ್ ಟ್ರಾನ್ಸ್ಫಾರ್ಮರ್‌ಗೆ ತಗಲಿ ಆಕಳು ಸಾವು

Date:

Share post:

ಕಲಬುರಗಿ: ಆಳಂದ ಪಟ್ಟಣದ ಹನುಮಾನ್ ದೇವಸ್ಥಾನ ಬಳಿಯ ಡಿಗ್ರಿ ಕಾಲೇಜ್ ಮಾರ್ಗದಲ್ಲಿ ವಿದ್ಯುತ್ ಟ್ರಾನ್ಸ್ಫಾರ್ಮರ್‌ನ ವಿದ್ಯುತ್ ತಗಲಿ ಆಕಳೊಂದು ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.

ಆಳಂದ ಪಟ್ಟಣದ ಹತ್ಯಾನ ಗಲ್ಲಿಯ ನಿವಾಸಿ ರೇವಣಸಿದ್ದಪ್ಪ ನಾಗದೇ ಎಂಬುವರಿಗೆ ಸೇರಿದ ಆಕಳು ಹೊಲಕ್ಕೆ ಹೋಗುವ ವೇಳೆ ಈ ದುರ್ಘಟನೆ ಸಂಭವಿಸಿದೆ.

ಮುಖ್ಯವಾದ ರಸ್ತೆಯ ಪಕ್ಕದಲ್ಲೇ ಇರುವ ವಿದ್ಯುತ್ ಟ್ರಾನ್ಸಫಾರಂಗೆ ಯಾವುದೇ ಸುರಕ್ಷತೆ ಇಲ್ಲದಿರುವುದು ಆಕಳ ಸಾವಿಗೆ ಕಾರಣವಾಗಿದೆ. ಸಾರ್ವಜನಿಕರ ಓಡಾಟ ಹಾಗೂ ಮಕ್ಕಳ ಆಟವಾಡುವ ಸ್ಥಳದಲ್ಲಿ ವಿದ್ಯುತ್ ಟ್ರಾನ್ಸಫಾರಂಗೆ ಸುರಕ್ಷತೆ ಕಲ್ಪಿಸದೇ ಇರುವುದು ಯಾವುದೇ ಸಂದರ್ಭದಲ್ಲೂ ಜೀವಹಾನಿಯಾಗುವ ಸಾಧ್ಯತೆ ಇದೇ ಮುಂಜಾಗೃತ ಕ್ರಮ ಅನುಸರಿಸುವಂತೆ ಜೆಸ್ಕಾಂ ಅಧಿಕಾರಿಗಳಿಗೆ ಕೊರಿಕೊಂಡರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳಕ್ಕೆ ಪಶುವೈದ್ಯ ಜಗನಾಥ ಕುಂಬಾರ, ಜೆಸ್ಕಾಂ ಸಿಬ್ಬಂದಿ, ಪುರಸಭೆ ಸದಸ್ಯ ಶ್ರೀಶೈಲ್ ಪಾಟೀಲ್, ಹತ್ತಾö್ಯನಗಲ್ಲಿಯ ಹಿರಿಯ ಮುಖಂಡ ಸಂದೇಶ್ ಜವಳಿ ಹಾಗೂ ರೈತರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಟ್ರಾನ್ಸ್ಫಾರ್ಮರ್‌ನಲ್ಲಿ ಸೂಕ್ತ ಸುರಕ್ಷತಾ ಕ್ರಮಗಳನ್ನು ಅಳವಡಿಸದಿರುವುದು ಆಕಳು ಸಾವಿಗೆ ಕಾರಣವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಮುಂದೆ ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ಜೆಸ್ಕಾಂ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡು ಜೀವಹಾನಿ ತಡೆಯಬೇಕೆಂದು ಸ್ಥಳೀಯ ರೈತರು ಮತ್ತು ನಾಗರಿಕರು ಅಧಿಕಾರಿಗಳಲ್ಲಿ ಒತ್ತಾಯಿಸಿ ಆಕಳು ಸಾವಿನಿಂದಾಗಿ ಹಾನಿಯಾದ ರೈತನಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...

ಕಲಬುರಗಿ| ಸರಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕಲಬುರಗಿ: ನಗರದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಫೌಜಿಯಾ...

ಕಲಬುರಗಿ| ಜಿಲ್ಲಾಧಿಕಾರಿಗಳಿಂದ ಸಿಟಿ ರೌಂಡ್: ರಸ್ತೆ ದುರಸ್ತಿ,‌ ಗುಂಡಿ ಮುಚ್ಚುವ ಕಾರ್ಯ ಪರಿಶೀಲನೆ

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮತ್ತು ಮಹಾನಗರ ಪಾಲಿಕೆ ಆಯುಕ್ತ ಅವಿನಾಶ...

ಕಲಬುರಗಿ| ಬಾಲ್ಯ ವಿವಾಹ, ಫೋಕ್ಸೋ ಪ್ರಕರಣಗಳ ಬಗ್ಗೆ ನಿಗಾವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ಸೂಚನೆ

ಕಲಬುರಗಿ: ಬಾಲ್ಯವಿವಾಹ ಮತ್ತು ಫೋಕ್ಸೋ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು...