ಕಲಬುರಗಿ| ಸಚಿವ ಪ್ರಿಯಾಂಕ್‌ ಖರ್ಗೆಗೆ ನಿಂದನೆ ಆರೋಪ; ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ವಿರುದ್ಧ ಪ್ರಕರಣ ದಾಖಲು 

Date:

Share post:

ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ನಿಂದಿಸಿರುವ ಆರೋಪದಲ್ಲಿ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ನೀಡಿದ ದೂರಿನ ಮೇರೆಗೆ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ವಿರುದ್ಧ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಂಗ್ರೆಸ್ ಕಾರ್ಯಕರ್ತ ಹಣಮಂತ ಸಂಕನೂರು ಎಂಬಾತರು, ಮಣಿಕಂಠ ರಾಠೋಡ್ ಅವರು ಮೇ 25ರಂದು ತಮ್ಮ ಫೇಸ್ ಬುಕ್‌ ನಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ, ಪೊಲೀಸ್ ಅಧಿಕಾರಿಗಳನ್ನು ಸೇರಿದಂತೆ ಕಾಂಗ್ರೆಸ್ ಮುಖಂಡ ಲಚಪ್ಪ ಜಮಾದಾರ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದಲ್ಲದೆ, ಸಮಾಜದ ಶಾಂತಿಯನ್ನು ಕಡದಿದ್ದಾರೆ. ಅಲ್ಲದೆ ರಾಠೋಡ್ ಸಮಾಜದಲ್ಲಿ ಅಶಾಂತಿ ಮೂಡಿಸುವ ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿ ದೂರು ಕೊಟ್ಟಿದ್ದಾರೆ.

ದೂರಿನ ಆಧಾರದ ಮೇರೆಗೆ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ವಿರುದ್ಧ ಪೊಲೀಸರು ಸೋಮವಾರ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮಕ್ಕಾಗಿ ಮುಖ್ಯಮಂತ್ರಿಗಳಿಂದ ಕಾಫಿ ಟೇಬಲ್ ಪುಸ್ತಕ, ಬ್ರೋಶರ್ ಬಿಡುಗಡೆ

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮವನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರಪಡಿಸಲು...

ಕಲಬುರಗಿ| ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಿ,ಹೆಚ್ಚು ಅಂಕ ಪಡೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿ: ಭಂವರ್ ಸಿಂಗ್ ಮೀನಾ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...

ಕಲಬುರಗಿ| ಸೆಂಟ್ರಲ್ ಜೈಲಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹ ಹಾಗೂ ಕಡಗಂಚಿ ಕಾರ್ಮೇಲ್ ಜ್ಯೋತಿ ಪಬ್ಲಿಕ್...

ಕಲಬುರಗಿ| ಎಸ್ಸೆಸ್ಸೆಲ್ಸಿ ಪರೀಕ್ಷೆ: ಒತ್ತಡ ಬಿಟ್ಟು ಸಂತೋಷದಿಂದ ಪರೀಕ್ಷೆ ಬರೆಯುವಂತೆ ಜಿಲ್ಲಾಧಿಕಾರಿ ಪತ್ರ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...