ಕಲಬುರಗಿ| ಕಲ್ಯಾಣ ಕರ್ನಾಟಕ ಸರ್ಕಾರಿ ನೌಕರರ ಸಂಘದ ಜಿಲ್ಲಾ ಕಚೇರಿ ಉದ್ಘಾಟನೆ

Date:

Share post:

ಕಲಬುರಗಿ: ನಗರದ ಪೂಜಾರಿ ಚೌಕ್ ನಲ್ಲಿ ಕಲ್ಯಾಣ ಕರ್ನಾಟಕ ಸರ್ಕಾರಿ ನೌಕರರ ಸಂಘದ ಜಿಲ್ಲಾ ಕಚೇರಿಯನ್ನು ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ ಉದ್ಘಾಟನೆ ನೆರವೇರಿಸಿದರು.

ಬಳಿಕ ಕಲ್ಯಾಣ ಕರ್ನಾಟಕ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳನ್ನ ಉದ್ದೇಶಿಸಿ ಮಾತನಾಡಿದ ಅವರು, ನಮ್ಮ ಭಾಗದಲ್ಲಿ ಶಿಕ್ಷಣ ಕ್ರಾಂತಿಯಾಗಬೇಕು, ಮಕ್ಕಳು ಉತ್ತಮ ಅಂಕ ಗಳಿಸುವುದರ ಜೊತೆಗೆ ಮಾನವೀಯ ಮೌಲ್ಯಗಳು ಬೆಳೆಸಿಕೊಳ್ಳಬೇಕು. ಸಂಘಟನೆಗಳು ಸಮಾಜದ ಬೆನ್ನೆಲುಬಾಗಿ ನಿಂತು ಸಮಾನತೆ, ಬ್ರಾತೃತ್ವ, ಶಿಕ್ಷಣದ ಅಭಿವೃದ್ಧಿಗಾಗಿ ದುಡಿಯಬೇಕು ಎಂದು ಹೇಳಿದರು.

ಸಂಘದ ಗೌರವ ಅಧ್ಯಕ್ಷ ಅನಿಲಕುಮಾರ್ ಬಿರಾದಾರ್  ಪ್ರಾಸ್ತವಿಕ ಮಾತಾಡಿ ಸಂಘದ ಗುರಿ ಉದ್ದೇಶ ತಿಳಿಸಿದರು.

ಸಂಘದ ಸಂಸ್ಥಾಪಕ ಅಧ್ಯಕ್ಷ ರವಿ ಡೊಳೆ  ಪದಾಧಿಕಾರಿಗಳಿಗೆ ಆದೇಶ ಪ್ರತಿ ವಿತರಿಸಿ ಸಂಘಟನೆ ಬಲಪಡಿಸಿ ನಮ್ಮ ಭಾಗದಲ್ಲಿ ನೌಕರರ ಹಿತ ರಕ್ಷಣೆ ಮಾಡುವಂತೆ ತಿಳಿಸಿದರು.

ಜಿಲ್ಲಾ ಅಧ್ಯಕ್ಷ ಮಹೇಶಕುಮಾರ್ ಹೆಬ್ಬಾಳೆ ಮಾತನಾಡಿ, ಸಮಾಜಕ್ಕೆ ಸಹಕಾರಿಯಾಗಲು ಸಂಘಟನೆಗೆ ಬನ್ನಿ, ಶಾಲು, ಹಾರ, ಪದವಿಗಳಿಗಾಗಿ ಬರಬೇಡಿ ಎಂದು ತಿಳಿಸಿದರು.

ಆಳಂದ, ಚಿತ್ತಾಪುರ, ಕಮಲಾಪುರ, ಕಲಬುರಗಿ ಉತ್ತರ ಮತ್ತು ದಕ್ಷಿಣ ತಾಲೂಕಿನ ಅಧ್ಯಕ್ಷರುಗಳಿಗೆ ಸನ್ಮಾನಿಸಿ ತಾಲೂಕ ಸಂಘ ಬಲಪಡಿಸಲು ಕೋರಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಸಂಘದ ಶ್ರೀನಿವಾಸ್ ಗುತ್ತೇದಾರ್, ಅಂಬಿಕಾ ತಡಕಲ್, ಹೈದರ್ ಅಲಿ,  ಅಣವೀರಪ್ಪ ಯಾಕಾಪುರ್, ಗಂಗಾಧರ್ ಮ್ಯಾಕೇರಿ, ಪ್ರಭು  ಹಾಗೂ ತಾಲೂಕಿನ ಪದಾಧಿಕಾರಿಗಳು ಹಾಜರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...