ಕಲಬುರಗಿ | ವಧು-ವರರ ಸಮಾವೇಶಕ್ಕೆ ಶಾಸಕ ಅಲ್ಲಮಪ್ರಭು ಪಾಟೀಲ್ ಚಾಲನೆ

Date:

Share post:

ಕಲಬುರಗಿ: ವಧು- ವರರ ಸಮಾವೇಶಗಳು ವಿಶ್ವಸನೀಯ ಸಂಬಂಧಗಳನ್ನು ಬೆಳೆಸಲು ಸಹಾಯಕ ವಾಗುತ್ತಿವೆ’ ಎಂದು ಶಾಸಕ ಅಲ್ಲಮಪ್ರಭು ಪಾಟೀಲ ಅಭಿಪ್ರಾಯಪಟ್ಟರು.

ನಗರದ ಶರಣಬಸವೇಶ್ವರ ದೇವಸ್ಥಾನದ ಆವರಣದ ಅನುಭವ ಮಂಟಪದಲ್ಲಿ ಶರಣಬಸವೇಶ್ವರ ಸಂಸ್ಥಾನ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಶಿವಪಾರ್ವತಿ ಮ್ಯಾಟ್ರಿಮೋನಿಯಲ್ ಆಯೋಜಿಸಿದ್ದ ರಾಜ್ಯಮಟ್ಟದ ವಧು-ವರರ ಸಮಾವೇಶದಲ್ಲಿ ಅವರು ಮಾತನಾಡಿದರು.

ವೀರಶೈವ ಲಿಂಗಾಯತ ಸಮಾಜದಲ್ಲಿ ವಧು ಮತ್ತು ವರರ ಸಮಸ್ಯೆ ಹೆಚ್ಚಾಗುತ್ತಿದೆ. ಸಮಾವೇಶಗಳು ಸಂಬಂಧಗಳನ್ನು ಬೆಸೆದು ಬಂಧಗಳು ವೃದ್ಧಿಸುವಂತೆ ಆಗಲಿ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ಮುಖಂಡರಾದ ಅರುಣಕುಮಾರ ಪಾಟೀಲ, ಸೋಮಶೇಖರ ಹಿರೇಮಠ, ಕಲ್ಯಾಣಪ್ಪ ಪಾಟೀಲ, ಕಲ್ಯಾಣರಾವ ಯಲಮಡಗಿ, ವೀರೇಶ ಗಂಧದಮಠ, ಗುರುಪಾದಪ್ಪ ಪಲ್ಲಕ್ಕಿ, ಚಂದ್ರಶೇಖರ ಆಕಕ್ಕೇರಿ, ಸಂಜೀವಕುಮಾರ, ರವಿ ಆಲಗೂರ ಸೇರಿದಂತೆ ಇತರರು ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಏ.15 ರಿಂದ 17ರ ವರೆಗೆ ಹೀಟ್ ವೇವ್ ಆರೆಂಜ್ ಅಲರ್ಟ್: ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ 

ಕಲಬುರಗಿ: ಕಲಬುರಗಿ ಜಿಲ್ಲೆಯಾದ್ಯಂತ ಇದೇ ಏಪ್ರೀಲ್ 15 ರಿಂದ 17ರ ವರೆಗೆ...

ಕಲಬುರಗಿ| ಅಂಬೇಡ್ಕರ್ ಜಯಂತಿ: ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ: ಡಿಸಿ ಆದೇಶ

ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಯಾವುದೇ ಅಹಿತಕರ...

ಕಲಬುರಗಿ| ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಡಾ.ಅಂಬೇಡ್ಕರ್ ಜಯಂತಿ

ಕಲಬುರಗಿ: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಾಬಾ ಸಾಹೇಬ ಅಂಬೇಡ್ಕರ್...

ಕಲಬುರಗಿ| ಕಲಾ ವಿಭಾಗದಲ್ಲಿ ಸೃಷ್ಟಿ ಮಲ್ಲಿನಾಥ ರಾಜ್ಯಕ್ಕೆ ಪ್ರಥಮ

ಕಲಬುರಗಿ: ಪ್ರಸಕ್ತ ದ್ವಿತೀಯ ಪಿ.ಯು.ಸಿ-1 ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಕಲಬುರಗಿಯ...