ಕಲಬುರಗಿ| ನಳದ ನೀರು ಪೋಲಾಗದಂತೆ ಬಳಸಿ: ಸಿ.ಇ.ಓ. ಭಂವರ್ ಸಿಂಗ್ ಮೀನಾ

Date:

Share post:

ಕಲಬುರಗಿ: ಗ್ರಾಮ ಪಂಚಾಯತ ಮಟ್ಟದಲ್ಲಿ ನಳದ ನೀರು ಅವಶ್ಯಕತೆಗೆ ಅನುಗುಣವಾಗಿ ಬಳಸಿ, ನೀರು ಪೋಲಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ ಹೇಳಿದರು.

ಮಂಗಳವಾರದಂದು ಕಲಬುರಗಿ ನಗರದ ಜಿಟಿಟಿಸಿ ತರಬೇತಿ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕರ್ನಾಟಕ ಕೌಶಲ್ಯಾಬಿವೃದ್ಧಿ ನಿಗಮ, ಜಿಲ್ಲಾ ಪಂಚಾಯತ್ ಕಲಬುರಗಿ ಹಾಗೂ ಜಿಟಿಟಿಸಿ ಸಹಯೋಗದೊಂದಿಗೆ ನಲ್-ಜಲ್, ಯೋಜನೆಯಡಿ ನೀರು ವಿತರಣಾ ನಿರ್ವಾಹಕರು ಜಾಬಾ ರೋಲ್ ಕುರಿತು ಪ್ರತಿ ಗ್ರಾಮ ಪಂಚಾಯತಿಯಿಂದ ಆಯ್ಕೆಯಾಗಿರುವ 2 ಮಹಿಳಾ ನಲ್ ಜಲ್ ಮಿತ್ರ ರವರಿಗೆ ಆಯೋಜಿಸಿದ 40 ದಿನಗಳ ತರಬೇತಿಯ ಕಾರ್ಯಕ್ರಮ ಉದ್ಫಾಟಿಸಿ ಅವರು ಮಾತನಾಡಿದರು.

ಭಾರತ ಸರ್ಕಾರದ ಜಲಶಕ್ತಿ ಸಚಿವಾಲಯ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತಾ ಸಚಿವಾಲಯದಿಂದ “ಜಲಜೀವನ ಮಿಷನ್” ಅಡಿ ನಲ್‍ಜಲ್ ಮಿತ್ರ ಯೋಜನೆ ಜಾರಿ ತರಲಾಗಿದೆ ಎಂದರು.

ಸ್ವ-ಸಹಾಯ ಸಂಘದ ಇಬ್ಬರು ಅಭ್ಯರ್ಥಿಗಳಂತೆ ಅಲ್ಪಾವಧಿ ತರಬೇತಿ ನೀಡಲು ಉದ್ದೇಶಿಸಲಾಗಿದೆ. ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ಈ ತರಬೇತಿಯಲ್ಲಿ ನಲ್ಲಿ ಜೋಡಣೆ, ಪೈಪ್ ರೀಪೇರಿ, ಎಲೇಕ್ಟ್ರಿಕ್ ಹಾಗೂ ಬಹುಕೌಶಲ್ಯದ ತಾಂತ್ರಿಕತೆಯ ಬಗ್ಗೆ 17 ದಿನಗಳ ಪಠ್ಯ ತರಬೇತಿ ಮತ್ತು 22 ದಿನಗಳ ಕೆಲಸದ ಜೊತೆಯಲ್ಲಿ ತರಬೇತಿ ಇದ್ದು ಉದ್ಯಮಿದಾರರಾಗಿ ತರಬೇತಿ ಪಡೆಯಬೇಕು ಎಂದರು.

ತರಬೇತಿಯ ನಂತರ ಗ್ರಾಮೀಣ ಭಾಗದಲ್ಲಿ ಉದ್ಯಮಿಗಳ ರೀತಿಯಲ್ಲಿ ಸೇವೆ ನೀಡಿ ಕೆಲಸದ ಆಧಾರಿತ ಬಳಕೆದಾರರ ಶುಲ್ಕವನ್ನು ಪಡೆಯುವುದರೊಂದಿಗೆ ಗ್ರಾಮದಲ್ಲಿ ಉದ್ಯೋಗ ಜೊತೆ ಉದ್ಯೋಗ ಸುಷ್ಠಿಸುವರಾಗಬೇಕು ಎಂದು ತಿಳಿಸಿದರು.

ಕಲಬುರಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಗಂಗೂಬಾಯಿ ಅವರು ಮಾತನಾಡಿ, ಇಂದಿನ ಜೀವನದಲ್ಲಿ ಬುದ್ದಿವಂತರಿಗಿಂತ ಕೌಶಲ್ಯವಂತರಿಗೆ ಹೆಚ್ಚಿನ ಮಹತ್ವ ಇದ್ದು, ಮಹಿಳೆಯರ ಸಬಲಿಕರಣಕ್ಕಾಗಿ ನಲ್‍ಜಲ್ ಮಿತ್ರ ಕಾರ್ಯಕ್ರಮದಡಿ ಕೌಶಲ್ಯದೊಂದಿಗೆ ಆತ್ಮವಿಶ್ವಾಸ ಬೆಳೆಸಲು ಸಹಕಾರಿಯಾಗಿದೆ ಎಂದು ತಿಳಿಸಿದರು.

ಕಲಬುರಗಿ ಜಿಟಿಟಿಸಿ ಪ್ರಾಚಾರ್ಯರಾದ ಅನೀಲ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ಯೋಜನೆಯ ಕುರಿತು ಸಾರ್ವಜನಿಕರಿಗೆ ಸೂಕ್ತ ತಿಳುವಳಿಕೆ ನೀಡಬೇಕು ಹಾಗೂ ನೀರು ಅನಾವಶ್ಯಕವಾಗಿ ಪೋಲಾಗದಂತೆ ತಡೆಗಟ್ಟಲು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಡಿಆರ್‍ಡಿಎ ಯೋಜನಾ ನಿರ್ದೇಶಕ ಜಗದೇವಪ್ಪ, ಬೆಂಗಳೂರಿನ ಜಿಟಿಟಿಸಿ ವ್ಯವಸ್ಥಾಪಕ ರಾಜಕುಮಾರ ಮತ್ತು ಡಿಜಿಎಂ ರಾದ ಲಕ್ಷ್ಮಣ ನಾಯಕ್, ಸೇರಿದಂತೆ ಬೆಂಗಳೂರಿನ ಪ್ರಾಂಶುಪಾಲರು, ಬೆಂಗಳೂರಿನ ಜಿ.ಟಿ.ಟಿ.ಸಿ. ಕಾಲೇಜಿನ ಮುಖ್ಯ ಕಛೇರಿಯ ವ್ಯವಸ್ಥಾಪಕರು ಮತ್ತು ಉಪ-ವ್ಯವಸ್ಥಾಪಕರು ಹಾಗೂ ಎನ್‍ಆರ್‍ಎಲ್‍ಎಮ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ನುಡಿದಂತೆ ನಡೆಯುವ ಸರ್ಕಾರ‌ ನಮ್ಮದು, ಇದೂವರೆಗೆ 243 ಭರವಸೆ ಈಡೇರಿಸಿದ್ದೇವೆ: ಸಿದ್ದರಾಮಯ್ಯ

ಕಲಬುರಗಿ: ಚುನಾವಣೆ ಪೂರ್ವ ನೀಡಿದ ಭರವಸೆಯಂತೆ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆ...

ಕಲಬುರಗಿ| ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಕಲಬುರಗಿ: "ನಮ್ಮ ಪಕ್ಷ ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನ...

ಕಲಬುರಗಿ| ಸುಗಮ ಆಡಳಿತಕ್ಕಾಗಿ ಪ್ರಜಾಸೌಧಗಳ ನಿರ್ಮಾಣ: ಡಾ.ಅಜಯ್ ಧರ್ಮಸಿಂಗ್

ಕಲಬುರಗಿ: ಸುಗಮ ಆಡಳಿತಕ್ಕಾಗಿ ಹೊಸ ತಾಲ್ಲೂಕುಗಳನ್ನು ಘೋಷಣೆ ಮಾಡಲಾಗಿದೆ. ಈ ಭಾಗದ...

ಕಲಬುರಗಿ| ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ನೇಮಕಾತಿ ಮಾಡಿ: ಮಲ್ಲಿಕಾರ್ಜುನ ಖರ್ಗೆ  

ಕಲಬುರಗಿ: ಕಲ್ಯಾಣ ಕರ್ನಾಟಕ ಶೈಕ್ಷಣಿಕವಾಗಿ ಹಿಂದುಳಿಯಲು ಮುಖ್ಯ ಕಾರಣ ಈ ಭಾಗದಲ್ಲಿ...