ಕಲಬುರಗಿ| ಗಂಗಾ ಕಲ್ಯಾಣ ಬಿಲ್ ಪಾಸ್ ಮಾಡುವುದಕ್ಕಾಗಿ 2 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಜೆಸ್ಕಾಂ ಅಧಿಕಾರಿ

Date:

Share post:

ಕಲಬುರಗಿ: ವಿದ್ಯುತ್ ಹೆಚ್ಚುವರಿ ಟಿಸಿ, ಲೈನ್ ಮೈಂಟೆನನ್ಸ್, ಹೊಸ ಟಿಸಿಗಳು ಮತ್ತು ಗಂಗಾ ಕಲ್ಯಾಣ ಯೋಜನೆಗಳ ಬಿಲ್ಲುಗಳು ಪಾಸ್ ಮಾಡೋದಕ್ಕೆ ಲಂಚಕ್ಕೆ ಬಿಡಿಕೆಟ್ಟಿದ್ದ ಜೆಸ್ಕಾಂ ಎಂಜಿನಿಯರ್ ಒಬ್ಬರು 2 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರಿಗೆ ಬಿದ್ದಿರುವ ಘಟನೆ ಮಂಗಳವಾರ ನಡೆದಿದೆ.

ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿಯ (ಗು.ವಿ.ಸ.ಕಂ.ನಿ) ಗ್ರಾಮೀಣ ವಿಭಾಗ-2ರ ಕಾರ್ಯನಿರ್ವಾಹಕ ಅಭಿಯಂತರ ಶೇಖರ್ ಬಹುರೂಪಿ ಎಂಬಾತರೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಅಧಿಕಾರಿ ಎಂದು ತಿಳಿದುಬಂದಿದೆ.

ಜೇವರ್ಗಿಯ ಕಾಂಟ್ರಾಕ್ಟರ್ ಸಾಯಬಣ್ಣ ಪೂಜಾರಿ ಲೋಕಾಯುಕ್ತಕ್ಕೆ ದೂರು ನೀಡಿದ ಮೇರೆಗೆ ಲೋಕಾಯುಕ್ತ ಪೊಲೀಸರು ಪ್ರತ್ಯೇಕ ತಂಡವನ್ನು ರಚಿಸಿ ಚುರುಕು ಕಾರ್ಯಾಚರಣೆಯಲ್ಲಿ ಆರೋಪಿ ಎಂಜಿನಿಯರ್ ಶೇಖರ್ ಅವರನ್ನು ಲಂಚದ ಹಣ ಸ್ವೀಕರಿಸುತ್ತಿದ್ದಾಗಲೇ ರೆಡ್ ಹ್ಯಾಂಡ್ ನಲ್ಲಿ ಸೆರೆ ಹಿಡಿದಿದ್ದಾರೆ.

ಲೋಕಾಯುಕ್ತ ಎಸ್ಪಿ ಬಿಕೆ. ಉಮೇಶ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಗೀತಾ ಬೆನಾಳ ಅವರ ನೇತೃತ್ವದ ತಂಡದಲ್ಲಿ ದಾಳಿ ನಡೆಸಲಾಗಿದೆ. ತಂಡದಲ್ಲಿ ಪೊಲೀಸ್ ಸಿಬ್ಬಂದಿಯವರಾದ ಬಸವರಾಜ್, ಎಂ. ಜಿ. ರಾಣುಜಿ, ಪ್ರದೀಪ್, ಹಣಮಂತ, ವಸಂತ್ ಮತ್ತಿತರರು ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮಕ್ಕಾಗಿ ಮುಖ್ಯಮಂತ್ರಿಗಳಿಂದ ಕಾಫಿ ಟೇಬಲ್ ಪುಸ್ತಕ, ಬ್ರೋಶರ್ ಬಿಡುಗಡೆ

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮವನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರಪಡಿಸಲು...

ಕಲಬುರಗಿ| ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಿ,ಹೆಚ್ಚು ಅಂಕ ಪಡೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿ: ಭಂವರ್ ಸಿಂಗ್ ಮೀನಾ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...

ಕಲಬುರಗಿ| ಸೆಂಟ್ರಲ್ ಜೈಲಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹ ಹಾಗೂ ಕಡಗಂಚಿ ಕಾರ್ಮೇಲ್ ಜ್ಯೋತಿ ಪಬ್ಲಿಕ್...

ಕಲಬುರಗಿ| ಎಸ್ಸೆಸ್ಸೆಲ್ಸಿ ಪರೀಕ್ಷೆ: ಒತ್ತಡ ಬಿಟ್ಟು ಸಂತೋಷದಿಂದ ಪರೀಕ್ಷೆ ಬರೆಯುವಂತೆ ಜಿಲ್ಲಾಧಿಕಾರಿ ಪತ್ರ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...