ಕಲಬುರಗಿ | ಕಸಾಪದಿಂದ ನಾಲ್ವಡಿ ಕೃಷ್ಣರಾಜ ಒಡೇಯರ್ ಜನ್ಮದಿನಾಚರಣೆ

Date:

Share post:

ಕಲಬುರಗಿ : ಶಿಕ್ಷಣ ಮತ್ತು ಸರ್ವಜ ನರ ಅಭಿವೃದ್ಧಿಗಾಗಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೇಯರ್ ಅವರು ಅಪಾರವಾಗಿ ಶ್ರಮಿಸಿದ್ದಾರೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಹೇಳಿದರು.

ನಗರದ ಕನ್ನಡ ಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಡೆಸಲಾದ ಪರಿಷತ್ತಿನ ಸಂಸ್ಥಾಪಕರಾದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೇಯರ್ ಅವರ ಜನ್ಮದಿನಾಚರಣೆಯಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಸಲ್ಲಿಸಿ ಮಾತನಾಡಿದ ಅವರು, ಸಾಹಿತ್ಯ, ಸಂಗೀತ, ವಾಸ್ತು ಶಿಲ್ಪಗಳ ಅಭಿವೃದ್ಧಿಗೆ ಹೆಚ್ಚು ಪ್ರಾಮುಖ್ಯತೆಯನ್ನು ಕೊಟ್ಟು 1915 ರಲ್ಲಿ ಕನ್ನಡ ಸಾಹಿತ್ಯ ಪರಿಷತ್ ನ್ನು ಸ್ಥಾಪಿಸಿ ಕನ್ನಡ ಭಾಷೆ ಮತ್ತು ಸಾಹಿತ್ಯ ಬೆಳವಣಿಗೆಯನ್ನು ಪ್ರೋತ್ಸಾಹಿಸಿದರು. ಕನ್ನಡಿಗರ ಒಗ್ಗೂಡಿಕೆಗಾಗಿ ಪರಿಷತ್ತು ಹಗಲಿರುಳು ಶ್ರಮಿಸುತ್ತಿದೆ. ಪರಿಷತ್ತಿನ ಮೂಲ ಆಶಯವನ್ನು ಈಡೇರಿಸಲು ಜಿಲ್ಲಾ ಕಸಾಪ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿದೆ ಎಂದ ಅವರು, ಪರಿಷತ್ತಿನ ಅಧ್ಯಕ್ಷನಾಗಿ ಕನ್ನಡದ ಸೇವೆ ಮಾಡುವುದು ಅಂದರೆ ಹೆತ್ತ ತಾಯಿಯ ಸೇವೆ ಮಾಡಿದಂತೆ ಎಂಬ ಭಾವನೆ ನಮ್ಮದ್ದಾಗಿದೆ ಎಂದು ಮಾರ್ಮಿಕವಾಗಿ ಹೇಳಿದರು.

ಜಿಲ್ಲಾ ಕಸಾಪ ದ ಗೌರವ ಕಾರ್ಯದರ್ಶಿ ಶಿವರಾಜ ಅಂಡಗಿ, ಕೋಶಾಧ್ಯಕ್ಷ ಶರಣರಾಜ ಛಪ್ಪರಬಂದಿ, ಪ್ರಮುಖರಾದ ರಮೇಶ ಡಿ ಬಡಿಗೇರ, ರಾಜೇಂದ್ರ ಮಾಡಬೂಳ, ಪ್ರಭವ ಪಟ್ಟಣಕರ್, ಸಂತೋಷ ಕುಡಳ್ಳಿ, ಶಿವಾನಂದ ಮಠಪತಿ, ರೇವಣಸಿದ್ದಪ್ಪ ಜೀವಣಗಿ, ನರಸಿಂಗರಾವ ಹೇಮನೂರ, ಚಂದ್ರಕಾಂತ ಸೂರನ್, ಎಂ.ಎನ್. ಸುಗಂಧಿ, ಗಣೇಶ ಚಿನ್ನಾಕಾರ, ಧರ್ಮರಾಜ ಜವಳಿ, ಕಲ್ಯಾಣಕುಮಾರ ಶೀಲವಂತ, ಶಕುಂತಲಾ ಪಾಟೀಲ, ಡಾ. ರೆಹಮಾನ ಪಟೇಲ್, ದಿನೇಶ ಮದಕರಿ, ರವಿಕುಮಾರ ಶಹಾಪುರಕರ, ಸೈಯ್ಯದ್ ನಜಿರುದ್ದೀನ್ ಮುತ್ತವಲಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...