ಕಲಬುರಗಿ| ಬೈಕ್ ಕವರ್ ನಲ್ಲಿದ್ದ 1.50 ಲಕ್ಷ ಕದ್ದ ಕಳ್ಳರು; ಸಿಸಿಟಿವಿಯಲ್ಲಿ ದೃಶ್ಯ ಸೆರೆ

Date:

Share post:

ಕಲಬುರಗಿ: ಚಿತ್ತಾಪುರ ಪಟ್ಟಣದ ಬಸ್ ನಿಲ್ದಾಣದ ಎದುರುಗಡೆಯ ಅನಮೂಲ್ ಹೋಟೇಲ್ ಹತ್ತಿರ ಬೈಕ್’ನ ಕವರ್’ನಲ್ಲಿದ್ದ 1 ಲಕ್ಷ 50 ಸಾವಿರ ರೂಪಾಯಿಯನ್ನು ಕದ್ದು ಕಳ್ಳರು ಪರಾರಿಯಾಗಿರುವ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.

ಮಂಜುನಾಥ ಕಾಶಿ ಎಂಬಾತನೇ ಹಣ ಕೇದುಕೊಂಡ ದುರ್ದೈವಿ ಎಂದು ತಿಳಿದುಬಂದಿದೆ.

ಮಂಜುನಾಥ ಕಾಶಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನಿಂದ 1 ಲಕ್ಷ 50 ಸಾವಿರ ರೂ. ತೆಗೆದುಕೊಂಡು ಬೈಕ್ ಮೇಲೆ ಹೋಗುತ್ತಿದ್ದಾಗ, ಹಿಂದುಗಡೆಯಿಂದ ಬೈಕ್ ಮೇಲಿಂದ ಬಂದ ಓರ್ವ ಕಳ್ಳ ನಿಮ್ಮ ಹಣ ಬಿದ್ದಿವೆ ನೋಡಿ ಎಂದು ಹೇಳಿದ ಕೂಡಲೇ ಮಂಜುನಾಥ ಅವರು ಬೈಕ್ ಮೇಲಿಂದ ಇಳಿದು 50 ರೂ. ಮೂರು ನೋಟುಗಳನ್ನು ಎತ್ತಿಕೊಳ್ಳಲು ಹೋಗಿದ್ದಾರೆ. ಎದರುಗಡೆ ನಿಂತಿದ್ದ ಇನ್ನೂ ಇಬ್ಬರು ಕಳ್ಳರ ಪೈಕಿ ಓರ್ವ ಕಳ್ಳ ಹಣವನ್ನು ತೆಗೆದುಕೊಂಡು ಬೈಕ್ ಮೇಲೆ ಕುಳಿತು ಪರಾರಿಯಾಗಿರುವ ದೃಶ್ಯ ಸಿಸಿಟಿವಿ ದೃಶ್ಯದಲ್ಲಿ ಸೆರೆಯಾಗಿದೆ.

ಸುದ್ದಿ ತಿಳಿಯುತ್ತಿದ್ದಂತೆ ಪಿಎಸ್ಐ ಶ್ರೀಶೈಲ್ ಅಂಬಾಟಿ, ಸಿಬ್ಬಂದಿಗಳಾದ ಸವಿಕುಮಾರ, ಬಸವರಾಜ, ರವಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ಆದಿವಾಸಿ ತಾಂಡಾಗಳಲ್ಲಿ ಮೂಲಸೌಕರ್ಯ ಕೊರತೆ: ಲತಾ ಮೋಹನ್ ಪರಿಶೀಲನೆ

ಕಲಬುರಗಿ: ಜಿಲ್ಲೆಯ ವಿವಿಧ ಆದಿವಾಸಿ ತಾಂಡಾಗಳಿಗೆ ಭೇಟಿ ನೀಡಿದ ಕರ್ನಾಟಕ ರಾಜ್ಯ...

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...