ಕಲಬುರಗಿ| ಪ್ಲಾಸ್ಟಿಕ್ ಬಳಕೆ ನಿಷೇದಿಸಿ ಪರಿಸರ ಕಾಪಾಡಿ: ಐ.ಕೆ ಪಾಟೀಲ್ 

Date:

Share post:

ಕಲಬುರಗಿ: ಅತಿಯಾದ ಪ್ಲಾಸ್ಟಿಕ್‌ ಬಳಕೆಯಿಂದ ಪರಿಸರಕ್ಕೆ ಹಾನಿಯಾಗುತ್ತಿದೆ. ಆದ್ದರಿಂದ ಪರಿಸರ ಉಳಿಸುವ ನಿಟ್ಟಿನಲ್ಲಿ ಪ್ಲಾಸ್ಟಿಕ್‌ ಬಳಕೆ ನಿಷೇಧಿಸಬೇಕು ಎಂದು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಮಾಧ್ಯಮ ಸಂಯೋಜಕ ಹಾಗೂ ಉಪನ್ಯಾಸಕ ಐ.ಕೆ ಪಾಟೀಲ್ ಹೇಳಿದರು.

ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ ಎಸ್ ಇರಾಣಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅತಿಯಾದ ಪ್ಲಾಸ್ಟಿಕ್‌ ಬಳಕೆಯಿಂದ ಪರಿಸರಕ್ಕೆ ಹಾನಿಯಾಗುತ್ತಿದೆ. ಆದ್ದರಿಂದ ಪರಿಸರ ಉಳಿಸುವ ನಿಟ್ಟಿನಲ್ಲಿ ಪ್ಲಾಸ್ಟಿಕ್‌ ಬಳಕೆ ನಿಷೇಧಿಸಬೇಕು. ಪ್ಲಾಸ್ಟಿಕ್‌ ಬಳಕೆ ಮಾಡಲೇಬೇಕು ಎನ್ನುವಂತಹ ವಸ್ತುಗಳ ಉತ್ಪಾದಕರಿಗೆ ತ್ಯಾಜ್ಯ ಮರುಬಳಕೆ ಮಾಡುವಂತೆ ಆದೇಶ ಮಾಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

ಪ್ಲಾಸ್ಟಿಕ್‌ ಲೋಟ, ಚಮಚ, ಪ್ಲೇಟ್‌ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಬೇಕು. ಚಿಫ್ಸ್‌, ಬಿಸ್ಕೆಟ್‌, ಗುಟ್ಕಾಗಳಿಗೆ ಬಳಕೆ ಮಾಡುವ ಪ್ಲಾಸ್ಟಿಕ್‌ನ್ನು ಮರುಬಳಕೆ ಮಾಡುವಂತೆ ಕಟ್ಟುನಿಟ್ಟಿನ ಆದೇಶ ನೀಡಬೇಕು ಎಂದು ಹೇಳಿದರು

ವಿಶ್ವ ಪರಿಸರ ದಿನವು ಪ್ರತಿ ವರ್ಷ ಜೂನ್ 5 ರಂದು ಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲು ಆಚರಿಸಲಾಗುವ ಒಂದು ಜಾಗತಿಕ ಕಾರ್ಯಕ್ರಮವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯರಾದ ಶಿಲ್ಪಾ ಅಲ್ಲದ, ಉಪನ್ಯಾಸಕರಾದ ಡಾ.ಪಾಂಡುರಂಗ ಚಿಂಚನಸೂರ,ಚಂದ್ರಶೇಖರ ಪಟ್ಟಣಕರ, ಕೃಷ್ಣವೇಣಿ ಪಾಟೀಲ್, ಸಂಗೀತಾ ಸಡಕೀನ , ಅಶ್ವೀನಿ ಪಾಟೀಲ್, ವಿಜಯಲಕ್ಷ್ಮಿ ಶಾಬಾದಿ,ಶ್ವೇತಾ ಶೆಟ್ಟಿ,ಮಲಕಮ್ಮ ಪಾಟೀಲ್ ಪಾಟೀಲ್, ಮಧುಶ್ರೀ ಘಂಟಿ , ರುದ್ರಾಂಬಿಕಾ ಕಿರಾಣಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...

ಕಲಬುರಗಿ| ಸರಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕಲಬುರಗಿ: ನಗರದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಫೌಜಿಯಾ...

ಕಲಬುರಗಿ| ಜಿಲ್ಲಾಧಿಕಾರಿಗಳಿಂದ ಸಿಟಿ ರೌಂಡ್: ರಸ್ತೆ ದುರಸ್ತಿ,‌ ಗುಂಡಿ ಮುಚ್ಚುವ ಕಾರ್ಯ ಪರಿಶೀಲನೆ

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮತ್ತು ಮಹಾನಗರ ಪಾಲಿಕೆ ಆಯುಕ್ತ ಅವಿನಾಶ...

ಕಲಬುರಗಿ| ಬಾಲ್ಯ ವಿವಾಹ, ಫೋಕ್ಸೋ ಪ್ರಕರಣಗಳ ಬಗ್ಗೆ ನಿಗಾವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ಸೂಚನೆ

ಕಲಬುರಗಿ: ಬಾಲ್ಯವಿವಾಹ ಮತ್ತು ಫೋಕ್ಸೋ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು...