ಕಲಬುರಗಿ | ಬಾವಿಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಮಕ್ಕಳ ಸಾವು!

Date:

Share post:

ಕಲಬುರಗಿ: ಕುರಿ ಕಾಯಲು ಹೊಗಿದ್ದ ಇಬ್ಬರು ಮಕ್ಕಳು ಬಾವಿಯಲ್ಲಿ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಚಿತ್ತಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ನೂತನ ಮಿನಿ ವಿಧಾನಸೌಧದ ಪಕ್ಕದಲ್ಲಿ ಗುರುವಾರ ನಡೆದಿದೆ.

ಕುಶಾಲ್ ಚನ್ನಪ್ಪ (8), ರಾಜು ಚನ್ನಪ್ಪ (14) ಮೃತಪಟ್ಟ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಒಂಟಿ ಕಮಾನ್’ಯಿಂದ ಕುರಿ ಕಾಯಲು ಮಿನಿ ವಿಧಾನಸೌದದ ಹತ್ತಿರ ಬಂದಾಗ ಬಾವಿಯಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿ ಶವಗಳನ್ನು ಹೊರಗಡೆ ತೆಗೆದಿದ್ದಾರೆ.

ಸ್ಥಳಕ್ಕೆ ತಹಶೀಲ್ದಾರ್ ನಾಗಯ್ಯ ಹಿರೇಮಠ, ಪಿಎಸ್ಐ ಶ್ರೀಶೈಲ್ ಅಂಬಾಟಿ, ವಿಜಯ ಕುಮಾರ, ಸವಿಕುಮಾರ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಕುರಿತು ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...

ಕಲಬುರಗಿ| ಸರಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕಲಬುರಗಿ: ನಗರದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಫೌಜಿಯಾ...

ಕಲಬುರಗಿ| ಜಿಲ್ಲಾಧಿಕಾರಿಗಳಿಂದ ಸಿಟಿ ರೌಂಡ್: ರಸ್ತೆ ದುರಸ್ತಿ,‌ ಗುಂಡಿ ಮುಚ್ಚುವ ಕಾರ್ಯ ಪರಿಶೀಲನೆ

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮತ್ತು ಮಹಾನಗರ ಪಾಲಿಕೆ ಆಯುಕ್ತ ಅವಿನಾಶ...

ಕಲಬುರಗಿ| ಬಾಲ್ಯ ವಿವಾಹ, ಫೋಕ್ಸೋ ಪ್ರಕರಣಗಳ ಬಗ್ಗೆ ನಿಗಾವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ಸೂಚನೆ

ಕಲಬುರಗಿ: ಬಾಲ್ಯವಿವಾಹ ಮತ್ತು ಫೋಕ್ಸೋ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು...