ಕಲಬುರಗಿ| ಅಮೃತ್‌ ಮಿತ್ರ ಅಭಿಯಾನಕ್ಕೆ ಜಿಲ್ಲಾಧಿಕಾರಿಗಳಿಂದ ಚಾಲನೆ

Date:

Share post:

ಕಲಬುರಗಿ: ವಿಶ್ವ ಪರಿಸರ ದಿನಾಚರಣೆ ಹಿನ್ನೆಲೆಯಲ್ಲಿ ಗುರುವಾರ ಜಿಲ್ಲಾಡಳಿತ, ಮಹಾನಗರ ಪಾಲಿಕೆ ಹಾಗೂ ಅರಣ್ಯ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದ ಶಹಾಬಜಾರ್ ಪ್ರದೇಶದ ಗೋಕುಲ ನಗರ ಜಿ.ಡಿ.ಎ. ಬಡಾವಣೆಯ ಸಾರ್ವಜನಿಕ ಉದ್ಯಾನವನದಲ್ಲಿ ಸಸಿ ನೆಡೆಯುವ ಮೂಲಕ “ಅಮೃತ್ ಮಿತ್ರ” ಅಭಿಯಾನಕ್ಕೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಚಾಲನೆ ನೀಡಿದರು.

ವುಮೆನ್ ಫಾರ್ ಟ್ರೀಸ್ ಘೋಷವಾಕ್ಯದ ಈ ಕಾರ್ಯಕ್ರಮದಲ್ಲಿ ಕಲಬುರಗಿ ಮಹಾನಗರದ ಸಾರ್ವಜನಿಕ ಉದ್ಯಾನವನ, ಮೈದಾನಗಳಲ್ಲಿ ಸುಮಾರು 2,000 ಸಸಿ ನೆಡಲಾಗುತ್ತಿದೆ. ಸಸಿಗಳನ್ನು ನಲ್ಮ್ ಯೋಜನೆಯಡಿ ನೊಂದಾಯಿತ ಮಹಿಳಾ ಸ್ವ-ಸಹಾಯ ಗುಂಪುಗಳ ಸದಸ್ಯರಿಗೆ ನೀಡಲಾಗುತ್ತಿದ್ದು, ಅವರು ಆಗಸ್ಟ್ 31ರೊಳಗೆ ಸಸಿ ನೆಟ್ಟು ವರದಿ ನೀಡಲಿದ್ದಾರೆ. ಮುಂದೆ 2 ವರ್ಷದ ವರೆಗೆ ಈ ಸಸಿಗಳ ನಿರ್ವಹಣೆ ಜವಾಬ್ದಾರಿ ಸಹ ಮಹಿಳಾ ಸದಸ್ಯರಿಗೆ ನೀಡಿದ್ದು, ನಿರ್ವಹಣಾ ವೆಚ್ಚ ಕೇಂದ್ರ ಸರ್ಕಾರದಿಂದ ಡಿ.ಬಿ.ಟಿ ಮೂಲಕ ಪಾವತಿಸಲಾಗುತ್ತದೆ.

ಕಾರ್ಯಕ್ರಮದಲ್ಲಿ ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸುಮಿತ್ ಪಾಟೀಲ, ಪಾಲಿಕೆ ಉಪ ಆಯುಕ್ತ ಆರ್.ಪಿ. ಜಾಧವ, ಉಪ ಆಯುಕ್ತ (ಆಡಳಿತ) ರಾಜೇಂದ್ರ ಭಾಲ್ಕಿ, ಎ.ಇ.ಇ (ಪರಿಸರ) ಅಭಯಕುಮಾರ, ವಲಯ ಆಯುಕ್ತ ಪ್ರದೀಪ್ ಸೇರಿದಂತೆ ಪಾಲಿಕೆ, ಅರಣ್ಯ ಸಿಬ್ಬಂದಿಗಳು ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಏ.15 ರಿಂದ 17ರ ವರೆಗೆ ಹೀಟ್ ವೇವ್ ಆರೆಂಜ್ ಅಲರ್ಟ್: ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ 

ಕಲಬುರಗಿ: ಕಲಬುರಗಿ ಜಿಲ್ಲೆಯಾದ್ಯಂತ ಇದೇ ಏಪ್ರೀಲ್ 15 ರಿಂದ 17ರ ವರೆಗೆ...

ಕಲಬುರಗಿ| ಅಂಬೇಡ್ಕರ್ ಜಯಂತಿ: ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ: ಡಿಸಿ ಆದೇಶ

ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಯಾವುದೇ ಅಹಿತಕರ...

ಕಲಬುರಗಿ| ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಡಾ.ಅಂಬೇಡ್ಕರ್ ಜಯಂತಿ

ಕಲಬುರಗಿ: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಾಬಾ ಸಾಹೇಬ ಅಂಬೇಡ್ಕರ್...

ಕಲಬುರಗಿ| ಕಲಾ ವಿಭಾಗದಲ್ಲಿ ಸೃಷ್ಟಿ ಮಲ್ಲಿನಾಥ ರಾಜ್ಯಕ್ಕೆ ಪ್ರಥಮ

ಕಲಬುರಗಿ: ಪ್ರಸಕ್ತ ದ್ವಿತೀಯ ಪಿ.ಯು.ಸಿ-1 ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಕಲಬುರಗಿಯ...