ಕಲಬುರಗಿ| ಕೊಲೆ ಆರೋಪಿಯ ಭೀಕರ ಹತ್ಯೆ; ಮತ್ತೊಂದೆಡೆ ಯುವಕನಿಗೆ ಮಾರಣಾಂತಿಕ ಹಲ್ಲೆ

Date:

Share post:

ಕಲಬುರಗಿ: ಗುರುವಾರ ರಾತ್ರಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ಕೊಲೆ ಆರೋಪಿಯ ಬರ್ಬರ ಹತ್ಯೆಯಾಗಿದ್ದು, ಇನ್ನೊಂದೆಡೆ ಯುವಕನೋರ್ವ ನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಬಗ್ಗೆ ವರದಿಯಾಗಿದೆ.

ಫರಹತಾಬಾದ್ ಪೊಲೀಸ್ ಠಾಣೆಯ ವ್ಯಾಪ್ತಿಯ ಕೂಡಿ ದರ್ಗಾದ ಸಮೀಪ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ನಡೆಸಿದ ದಾಳಿಯಲ್ಲಿ ಕೊಲೆ ಆರೋಪಿಯೊಬ್ಬ ಭೀಕರವಾಗಿ ಹತ್ಯೆಯಾಗಿದ್ದಾನೆ.

 

ಕಲಬುರಗಿ ನಗರದ ಮಿಲ್ಲತ್ ನಗರದ ನಿವಾಸಿ ನಜಮುದ್ದೀನ್ ಅಬ್ದುಲ್ ಸತ್ತಾರ್ (44) ಮೃತ ಆರೋಪಿ ಎಂದು ತಿಳಿದುಬಂದಿದೆ.

ಕೊಲೆಯಾದ ನಜಮುದ್ದೀನ್, ಕೆಲವು ತಿಂಗಳ ಹಿಂದಷ್ಟೇ ರೌಡಿಶೀಟರ್ ಆಗಿದ್ದ ಖಲೀಲ್ ಎಂಬಾತನನ್ನು ಹತ್ಯೆ ಮಾಡಿರುವ ಪ್ರಕರಣದಲ್ಲಿ 4ನೆಯ ಆರೋಪಿಯಾಗಿ ಜೈಲು ಸೇರಿದ್ದ. ಕೆಲವು ದಿನಗಳ ಹಿಂದಷ್ಟೇ ಜೈಲಿನಿಂದ ಹೊರಬoದಿದ್ದ ನಜಮುದ್ದೀನ್ ಈಗ ಶೇಡಿಗೆ ಬಲಿಯಾಗಿದ್ದಾನೆ ಎಂದು ಪೊಲೀಸ್ ಮೂಲಗಳು ಹೇಳಿವೆ.

ಇನ್ನೊಂದು ಕಡೆ ರೋಜಾ ಪೊಲೀಸ್ ಠಾಣೆಯ ವ್ಯಾಪ್ತಿಯ ಇಸ್ಲಾಮಾಬಾದ್ ಕಾಲೋನಿಯಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಯುವಕನೋರ್ವನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ.

ಮಹೀಬೂಬ್ ನಗರದ ನಿವಾಸಿ ಅಬ್ದುಲ್ ರಹೀಂ ಅಬ್ಬಾಸ್ ಅಲಿ (23) ಹಲ್ಲೆಗೊಳಗಾದ ಯುವಕ ಎಂದು ಗುರುತಿಸಲಾಗಿದೆ. ಸದ್ಯ ಆತನನ್ನು ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಆತನ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕ್ಷುಲ್ಲಕ ಕಾರಣಕ್ಕಾಗಿ ಅಬ್ದುಲ್ ರಹೀಂ ಮೇಲೆ ಹಾಗರಗಾ ಕ್ರಾಸ್ ಸಮೀಪದ ನಿವಾಸಿ ಎಂ.ಡಿ ಇಸ್ಮಾಯಿಲ್ ಅಹ್ಮದ್ ಅಲಿ ಮತ್ತಿತರರು ಸೇರಿ ಹಲ್ಲೆ ನಡೆಸಿದ್ದಾರೆಂದು ಪೋಲಿಸ್ ಮೂಲಗಳು ತಿಳಿಸಿವೆ.

ಪ್ರತ್ಯೇಕ ಘಟನೆಗಳಲ್ಲಿ ಆಯಾ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ.

Share post:

spot_imgspot_img

Popular

More like this
Related

ಕಲಬುರಗಿ| ಆದಿವಾಸಿ ತಾಂಡಾಗಳಲ್ಲಿ ಮೂಲಸೌಕರ್ಯ ಕೊರತೆ: ಲತಾ ಮೋಹನ್ ಪರಿಶೀಲನೆ

ಕಲಬುರಗಿ: ಜಿಲ್ಲೆಯ ವಿವಿಧ ಆದಿವಾಸಿ ತಾಂಡಾಗಳಿಗೆ ಭೇಟಿ ನೀಡಿದ ಕರ್ನಾಟಕ ರಾಜ್ಯ...

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...