ಕಲಬುರಗಿ| ಕಾಲ್ತುಳಿತಕ್ಕೆ ಕಾಂಗ್ರೆಸ್ ಸರಕಾರವೇ ನೇರಹೊಣೆ: ಮರತೂರಕರ್ ಆರೋಪ

Date:

Share post:

ಕಲಬುರಗಿ: ಹದಿನೆಂಟು ವರ್ಷದ ನಂತರ ಆರ್‌ಸಿಬಿ ಟ್ರೋಫಿ ಗೆದ್ದಿರುವುದು ನಾಡಿನ ಜನತೆಗೆ ಖುಷಿ ಇದೆ. ಆದರೆ, ಈ ಸಂಭ್ರಮ ಸಾರ್ವಜನಿಕರಿಗೆ ತೊಂದರೆಯಾಗದಂತೆ  ರಾಜ್ಯ ಕಾಂಗ್ರೆಸ್ ಸರಕಾರ ಮುನ್ನೆಚರಿಕೆ ವಹಿಸಬೇಕಿತ್ತು. ಈಗ ಆಗಿರುವ ಕಾಲ್ತುಳಿತಕ್ಕೆ ರಾಜ್ಯ ಸರಕಾರವೇ ನೇರ ಹೊಣೆ ಎಂದು ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಆರೋಪಿಸಿದ್ದಾರೆ.

    ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಬೆಂಗಳೂರಿನಲ್ಲಿ ಬುಧವಾರ ನಡೆದ ಆರ್‌ಸಿಬಿ ತಂಡದ ಆಟಗಾರರ ಅಭಿನಂದನಾ ಸಮಾರಂಭದಲ್ಲಿ ಕಾಲ್ತುಳಿತಕ್ಕೆ 11 ಜನರು ಬಲಿಯಾದ ಘಟನೆಗೆ ರಾಜ್ಯ ಸರಕಾರವೇ ನೇರ ಹೊಣೆ ಹೊರಬೇಕು. ಇಷ್ಟು ಅವಸರದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿ ಬಂದ ಜನರನ್ನು ನಿಯಂತ್ರಿಸುವಲ್ಲಿ ವಿಫಲವಾಗಿದ್ದೆ ಈ ಭಯಾನಕ ಘಟನೆಗೆ ಕಾರಣವಾಗಿದೆ ಎಂದರು.

 ಮೃತರ ಕುಟುಂಬಕ್ಕೆ ಘೋಷಣೆ ಮಾಡಿದ ಪರಿಹಾರದ ಮೊತ್ತ ಹೆಚ್ಚಿಸಬೇಕು. ಘಟನೆ ಬಗ್ಗೆ ಉನ್ನತ ಮಟ್ಟದ ತನಿಖೆ ಮಾಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳ ವಿತರಣೆ

ಕಲಬುರಗಿ: ಹೌಸಿಂಗ್ ಆಂಡ್ ಅರ್ಬನ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ...

ಕಲಬುರಗಿ| ಲಾರಿ – ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು; ಇನ್ನೋರ್ವ ಗಂಭೀರ ಗಾಯ

ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್...

ಕಲಬುರಗಿ| ರಾಮನವಮಿ ಆಚರಣೆ; ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ

ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ...

ಕಲಬುರಗಿ| ಬೇಸಿಗೆಯ ಸವಾಲುಗಳ ಎದುರಿಸಲು ಸಿದ್ಧ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

ಕಲಬುರಗಿ: ಕಲಬುರಗಿ ಜಿಲ್ಲಾಡಳಿತವು ಬೇಸಿಗೆಯ ಸವಾಲುಗಳನ್ನು ಎದುರಿಸಲು ಸಂಪೂರ್ಣ ಸನ್ನದ್ಧವಾಗಿದ್ದು, ಸಾರ್ವಜನಿಕರು...