ಕಲಬುರಗಿ| ಪಂಚಮಸಾಲಿ ಹೋರಾಟದ ವಿರುದ್ಧ ಹಲ್ಲೆ ಮಾಡಿದ್ದನ್ನು ಸರಕಾರ ಮುಚ್ಚಿಹಾಕಲು ಯತ್ನ: ಜಯಮೃತ್ಯುಂಜಯ ಸ್ವಾಮೀಜಿ ಆರೋಪ

Date:

Share post:

ಕಲಬುರಗಿ: ಬೆಳಗಾವಿಯಲ್ಲಿ ಮೀಸಲಾತಿ ನೀಡುವಂತೆ ನಡೆಸಿದ ಹೋರಾಟದ ಸಂದರ್ಭದಲ್ಲಿ ದೀಕ್ಷ ಪಂಚಮಸಾಲಿ ಹೋರಾಟಗಾರರ ಮೇಲೆ ಪೊಲೀಸರು ನಡೆಸಿದ ಮಾರಣಾಂತಿಕ ಹಲ್ಲೆಯ ಪ್ರಕರಣವನ್ನು ಸರಕಾರ ಮುಚ್ಚಿ ಹಾಕಲು ಪ್ರಯತ್ನಿಸುತ್ತಿದೆ ಎಂದು ಪಂಚಮಸಾಲಿ ಮೀಸಲಾತಿ ಹೋರಾಟದ ನಾಯಕತ್ವ ವಹಿಸಿರುವ ಜಯ ಮೃತ್ಯುಂಜಯ ಸ್ವಾಮೀಜಿ ಆರೋಪಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಘಟನೆ ಕುರಿತು ನಾವು ನ್ಯಾಯಾಲಯದ ಮೊರೆ ಹೋಗಿದ್ದೆವು. ನ್ಯಾಯಾಲಯವೂ ಈ ಹಲ್ಲೆ ತಪ್ಪಾಗಿದೆ ಎಂದು ಸ್ಪಷ್ಟ ಹೇಳಿತ್ತು, ನ್ಯಾಯಾಲಯ ನಿವೃತ್ತ ನ್ಯಾಯಮೂರ್ತಿಯ ನೇತೃತ್ವದಲ್ಲಿ ತನಿಖೆ ನಡೆಸಲು ಸರ್ಕಾರಕ್ಕೆ ಆದೇಶ ನೀಡಿತ್ತು. ಆದರೆ ಸರ್ಕಾರ ಈ ತನಿಖೆಯನ್ನು ಇಂದಿಗೂ ಪ್ರಾರಂಭಿಸಿಲ್ಲ ಎಂದು ವಾಗ್ದಾಳಿ ನಡೆಸಿದರು.

ಈ ಸರ್ಕಾರದಲ್ಲಿ ಲಿಂಗಾಯಿತ ಶಾಸಕರಿಗೆ ಬೇಕಾದ ಮಟ್ಟದ ಗೌರವವಿಲ್ಲ. ಶಾಮನೂರು ಶಿವಶಂಕರಪ್ಪ ಅವರು ಕೂಡಾ ಮನವಿ ಮಾಡಿದ್ರು, ಆದರೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕಿಡಿಕಾರಿದರು.

ಈ ಸರಕಾರದಲ್ಲಿ ಲಿಂಗಾಯತ ಶಾಸಕರ ಧ್ವನಿಗೆ ಬೆಲೆನೆ ಇಲ್ಲ. ಲಿಂಗಾಯತ ಶಾಸಕರ ಮಾತನ್ನು ಎಷ್ಟರ ಮಟ್ಟಿಗೆ ಕೇಳುತ್ತದೆ ಎಂಬುವುದನ್ನು ನಂಬಿಕೆನೇ ಇಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಸರಕಾರ ಹೈಕೋರ್ಟ್ ಆದೇಶವನ್ನೇ ಉಲ್ಲಂಘಿಸೋ ನಿರ್ಧಾರದಲ್ಲಿದೆ ಎಂದ ಅವರು, ಘಟನೆ ಕುರಿತಂತೆ ತನಿಖೆಗಾಗಿ ನಿವೃತ್ತ ನ್ಯಾಯಮೂರ್ತಿಯ ನೇತೃತ್ವದಲ್ಲಿ ತನಿಖಾ ತಂಡ ರಚನೆ ಮಾಡುವಂತೆ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಪಂಚ ಸೇನೆ ಜಿಲ್ಲಾಧ್ಯಕ್ಷ ಸೋಮಶಂಕರ ಮೂಲಗೆ, ದೀಕ್ಷ ಸಮಾಜದ ಜಿಲ್ಲಾಧ್ಯಕ್ಷ ಶರಣಬಸಪ್ಪ ಪಪ್ಪಾ, ರವೀಂದ್ರ ಬಬಲೇಶ್ವರ, ಸಂಜೀವಕುಮಾರ ಸುಗುರೆ, ಮಲ್ಲಣ್ಣಗೌಡ ಪಾಟೀಲ್, ರಮೇಶ್ ಬಿರಾದರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

 

Share post:

spot_imgspot_img

Popular

More like this
Related

ಕಲಬುರಗಿ| ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳ ವಿತರಣೆ

ಕಲಬುರಗಿ: ಹೌಸಿಂಗ್ ಆಂಡ್ ಅರ್ಬನ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ...

ಕಲಬುರಗಿ| ಲಾರಿ – ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು; ಇನ್ನೋರ್ವ ಗಂಭೀರ ಗಾಯ

ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್...

ಕಲಬುರಗಿ| ರಾಮನವಮಿ ಆಚರಣೆ; ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ

ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ...

ಕಲಬುರಗಿ| ಬೇಸಿಗೆಯ ಸವಾಲುಗಳ ಎದುರಿಸಲು ಸಿದ್ಧ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

ಕಲಬುರಗಿ: ಕಲಬುರಗಿ ಜಿಲ್ಲಾಡಳಿತವು ಬೇಸಿಗೆಯ ಸವಾಲುಗಳನ್ನು ಎದುರಿಸಲು ಸಂಪೂರ್ಣ ಸನ್ನದ್ಧವಾಗಿದ್ದು, ಸಾರ್ವಜನಿಕರು...