ಕಲಬುರಗಿ| ಟಾಟಾ ವಾಹನ ಡಿಕ್ಕಿ: ಸ್ಥಳದಲ್ಲೇ ಮಹಿಳೆ ಸಾವು

Date:

Share post:

ಕಲಬುರಗಿ: ರಸ್ತೆ ದಾಟುತ್ತಿದ್ದಾಗ ಐಚರ್‌ ನಮೂನೆಯ ಟಾಟಾ ವಾಹನ ಡಿಕ್ಕಿ ಹೊಡೆದು ಮಹಿಳೆಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಗರದ ಸುಲ್ತಾನಪುರ ರಿಂಗ್ ರೋಡ್ ಕ್ರಾಸ್ ಹತ್ತಿರ ನಡೆದಿದೆ.

ಚಿಟಗುಪ್ಪಾದ ಲಕ್ಷ್ಮೀ ಚೆನ್ನಪ್ಪ ಹುಗ್ಗಿ (29) ಮೃತಪಟ್ಟ ಮಹಿಳೆ ಎಂದು ತಿಳಿದುಬಂದಿದೆ.

ತವರೂರಾದ ತಾಜ್ ಸುಲ್ತಾನಪುರದಲ್ಲಿ ಚೌಡೇಶ್ವರಿ ದೇವಿ ಜಾತ್ರೆ ಇರುವುದರಿಂದ ಇವರು ಪತಿ ಮತ್ತು ಮಕ್ಕಳೊಂದಿಗೆ ಬಸ್ಸಿಗೆ ಬಂದು, ಸುಲ್ತಾನಪುರ ರಿಂಗ್ ರೋಡ್ ಸರ್ಕಲ್ ಹತ್ತಿರ ಇಳಿದಿದ್ದರು. ಈ ವೇಳೆ ಸರ್ಕಲ್ ಮೇಲೆ ನಡೆದುಕೊಂಡು ರಸ್ತೆ ದಾಟುತ್ತಿದ್ದಾಗ ಹುಮನಾಬಾದ ರಿಂಗ್ ರೋಡ್ ಕಡೆಯಿಂದ ಬಂದ ಐಚರ್‌ ನಮೂನೆಯ ಟಾಟಾ ವಾಹನ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಸಂಚಾರ ಪೊಲೀಸ್‌ ಠಾಣೆ-2ರಲ್ಲಿ ಪ್ರಕರಣ ದಾಖಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮಕ್ಕಾಗಿ ಮುಖ್ಯಮಂತ್ರಿಗಳಿಂದ ಕಾಫಿ ಟೇಬಲ್ ಪುಸ್ತಕ, ಬ್ರೋಶರ್ ಬಿಡುಗಡೆ

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮವನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರಪಡಿಸಲು...

ಕಲಬುರಗಿ| ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಿ,ಹೆಚ್ಚು ಅಂಕ ಪಡೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿ: ಭಂವರ್ ಸಿಂಗ್ ಮೀನಾ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...

ಕಲಬುರಗಿ| ಸೆಂಟ್ರಲ್ ಜೈಲಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹ ಹಾಗೂ ಕಡಗಂಚಿ ಕಾರ್ಮೇಲ್ ಜ್ಯೋತಿ ಪಬ್ಲಿಕ್...

ಕಲಬುರಗಿ| ಎಸ್ಸೆಸ್ಸೆಲ್ಸಿ ಪರೀಕ್ಷೆ: ಒತ್ತಡ ಬಿಟ್ಟು ಸಂತೋಷದಿಂದ ಪರೀಕ್ಷೆ ಬರೆಯುವಂತೆ ಜಿಲ್ಲಾಧಿಕಾರಿ ಪತ್ರ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...