ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ರಿಯಾಯಿತಿ ದರದಲ್ಲಿ ಪುಸ್ತಕ ಲಭ್ಯ

Date:

Share post:

ಬೆಂಗಳೂರು: ಪತ್ರಿಕೋದ್ಯಮಕ್ಕೆ ಹಾಗೂ ಮಾಧ್ಯಮ ಜಗತ್ತಿಗೆ ಸಂಬಂಧಿಸಿದ 40 ಕ್ಕೂ ಹೆಚ್ಚು ಪುಸ್ತಕಗಳು ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯವಿದ್ದು, ಆಸಕ್ತರು, ವಿಶೇಷವಾಗಿ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಶಾ ಖಾನಂ ಅವರು ತಿಳಿಸಿದ್ದಾರೆ.

ಕರ್ನಾಟಕ ಮಾಧ್ಯಮ ಅಕಾಡೆಮಿಯು ಕೆಲವು ದಶಕಗಳಿಂದ ಹಲವಾರು ಪುಸ್ತಕಗಳನ್ನು ಪ್ರಕಟಿಸಿದ್ದು, ಮಾರಾಟಕ್ಕೆ ಲಭ್ಯವಿವೆ. ಹಿರಿಯ ಪತ್ರಕರ್ತರು, ಪರಿಣತರು ಬರೆದಿರುವ ಈ ಪುಸ್ತಕಗಳು ಯುವ ಪತ್ರಕರ್ತರು ಹಾಗೂ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಅತ್ಯಂತ ಉಪಯುಕ್ತವಾಗಿವೆ. ಈ ಪುಸ್ತಕಗಳ ಮೇಲೆ ಶೇ. 20 ರ ವರೆಗೆ ರಿಯಾಯಿತಿಯೂ ನೀಡಲಾಗುತ್ತಿದೆ.

ಆಸಕ್ತರು ಪುಸ್ತಕಗಳ ಕುರಿತ ಮಾಹಿತಿಯನ್ನು X, instagram ಮತ್ತು ಫೇಸ್ಬುಕ್ ಗಳಲ್ಲಿನ ಅಕಾಡೆಮಿಯ ಖಾತೆ @karmediaacademy/ Karnataka Media Academy ಗಳಲ್ಲಿ ಪಡೆಯಬಹುದಾಗಿದೆ. ಆಸಕ್ತರು, ಪತ್ರಿಕೋದ್ಯಮ ಬೋಧಿಸುವ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳ ಗ್ರಂಥಾಲಯಗಳಿಗೆ ಸಗಟು ಖರೀದಿ ಮಾಡಲು ಬಯಸುವವರು ಅಕಾಡೆಮಿಯ ಕಚೇರಿಯನ್ನು ದೂರವಾಣಿ ಸಂಖ್ಯೆ 080 22860264 ನಲ್ಲಿ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ನುಡಿದಂತೆ ನಡೆಯುವ ಸರ್ಕಾರ‌ ನಮ್ಮದು, ಇದೂವರೆಗೆ 243 ಭರವಸೆ ಈಡೇರಿಸಿದ್ದೇವೆ: ಸಿದ್ದರಾಮಯ್ಯ

ಕಲಬುರಗಿ: ಚುನಾವಣೆ ಪೂರ್ವ ನೀಡಿದ ಭರವಸೆಯಂತೆ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆ...

ಕಲಬುರಗಿ| ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಕಲಬುರಗಿ: "ನಮ್ಮ ಪಕ್ಷ ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನ...

ಕಲಬುರಗಿ| ಸುಗಮ ಆಡಳಿತಕ್ಕಾಗಿ ಪ್ರಜಾಸೌಧಗಳ ನಿರ್ಮಾಣ: ಡಾ.ಅಜಯ್ ಧರ್ಮಸಿಂಗ್

ಕಲಬುರಗಿ: ಸುಗಮ ಆಡಳಿತಕ್ಕಾಗಿ ಹೊಸ ತಾಲ್ಲೂಕುಗಳನ್ನು ಘೋಷಣೆ ಮಾಡಲಾಗಿದೆ. ಈ ಭಾಗದ...

ಕಲಬುರಗಿ| ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ನೇಮಕಾತಿ ಮಾಡಿ: ಮಲ್ಲಿಕಾರ್ಜುನ ಖರ್ಗೆ  

ಕಲಬುರಗಿ: ಕಲ್ಯಾಣ ಕರ್ನಾಟಕ ಶೈಕ್ಷಣಿಕವಾಗಿ ಹಿಂದುಳಿಯಲು ಮುಖ್ಯ ಕಾರಣ ಈ ಭಾಗದಲ್ಲಿ...