ಕಲಬುರಗಿ| ರೌಡಿಶೀಟರ್ ಚೇತನ್ ಕಲಬುರಗಿಯಿಂದ ತುಮಕೂರಿಗೆ ಗಡಿಪಾರು

Date:

Share post:

ಕಲಬುರಗಿ: ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಚೇತನ್ ಚಂದ್ರಕಾಂತ ಹೈಬತ್ತಿ(30) ಎಂಬ ರೌಡಿಶೀಟರ್ ನನ್ನು ಕಲಬುರಗಿಯಿಂದ ತುಮಕೂರು ಟೌನ್ ಪೊಲೀಸ್ ಠಾಣೆಗೆ ಗಡಿಪಾರು ಮಾಡಲಾಗಿದೆ.

ಕಲಬುರಗಿ ನಗರದ ಅಶೋಕ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯ ರೌಡಿ ಶೀಟರದಾರನಾದ ಚೇತನ ವಿರುದ್ಧ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ 03 ಪ್ರಕರಣ, ಸ್ಟೇಷನ್ ಬಜಾರ ಪೊಲೀಸ್ ಠಾಣೆಯಲ್ಲಿ 02 ಪ್ರಕರಣ, ಸಬ್-ಅರ್ಬನ್ ಮತ್ತು ರಾಘವೇಂದ್ರ ನಗರ ಪೊಲೀಸ್ ಠಾಣೆಯಲ್ಲಿ ತಲಾ 01 ಪ್ರಕರಣ ಮತ್ತು ವಡಗೇರಾ ಪೊಲೀಸ್ ಠಾಣೆಯಲ್ಲಿ 01 ಪ್ರಕರಣ ಸೇರಿದಂತೆ ಒಟ್ಟು 08 ಪ್ರಕರಣಗಳು ದಾಖಲಾಗಿರುತ್ತವೆ. 2016 ರಿಂದ 2025 ಸಾಲಿನ ವರೆಗೆ ಭಾರತೀಯ ದಂಡ ಸಂಹಿತೆ ಭಾರತೀಯ ಆಯುಧ ಕಾಯ್ದೆ ಸೇರಿದಂತೆ 08 ಪ್ರಕರಣಗಳು, ಬಿ.ಎನ್.ಎಸ್. ಕಾಯ್ದೆ-2023 ರಲ್ಲಿ 02 ಪ್ರಕರಣ ಮತ್ತು ಭಾರತೀಯ ದಂಡ ಪ್ರಕ್ರಿಯೆ ಅಡಿಯಲ್ಲಿ 04 ಪ್ರಕರಣ ಹೀಗೆ ಒಟ್ಟು 14 ಪ್ರಕರಣಗಳಲ್ಲಿ ಪ್ರಮುಖ ಆರೋಪಿತನಾಗಿರುತ್ತಾನೆ. ರೂಢಿಗತ ಆರೋಪಿ ಆಗಿರುವುದರಿಂದ ಆತನ ವಿರುದ್ಧ ‘ಎ’ ರೌಡಿ ತೆರೆತಲಾಗಿದೆ ಎಂದು ನಗರ ಪೊಲೀಸ್ ಆಯುಕ್ತಾಲಯ ಪ್ರಕಟಣೆ ತಿಳಿಸಿದೆ.

ಆರೋಪಿತನ ಕಾನೂನು ಬಾಹಿರ ಚಟುವಟಿಕೆಗಳನ್ನು ಕಡಿವಾಣ ಹಾಕಲು ಕಾನೂನಿನ ಬಗ್ಗೆ ಸೂಕ್ತ ಗೌರವ ಹೊಂದುವಂತೆ ಮನವರಿಕೆ ಮಾಡಿಕೊಡಲು ಸಮಾಜದಲ್ಲಿ ಆರೋಗ್ಯಕರ ವಾತಾವರಣ ಕಾಯ್ದುಕೊಳ್ಳಲು, ಸಮಾಜ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಕಾನೂನು ಸುವ್ಯವಸ್ಥೆಗೆ ಭಂಗ ಬರದಂತೆ ಕಾಯ್ದುಕೊಳ್ಳುವ ಹಿತದೃಷ್ಟಿಯಿಂದ ಸದರಿ ಆರೋಪಿತನನ್ನು ಗಡಿಪಾರು ಮಾಡುವುದು ಸೂಕ್ತ ಮತ್ತು ಅನಿವಾರ್ಯವಾಗಿದ್ದು ಎಂದು ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ ಅವರು ಹೊರಡಿಸಿದ ಆದೇಶದಲ್ಲಿ ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...

ಕಲಬುರಗಿ| ಕೋಮು ದ್ವೇಷ ಭಾಷಣ ಆರೋಪ; ಬಿಜೆಪಿ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ವಿರುದ್ಧ ಎಫ್ಐಆರ್ ದಾಖಲು

ಕಲಬುರಗಿ: "ಕಲಬುರಗಿಯನ್ನು ಪಾಕಿಸ್ತಾನ ರೀತಿಯಲ್ಲಿ ಮಾಡಲು ಇಲ್ಲಿನ ನಾಯಕರು ಹಾಗೂ ಸರಕಾರ...

ಕಲಬುರಗಿ| ಭೀಕರ ಅಪಘಾತ: ಒಂದೇ ಕುಟುಂಬದ ಐವರು ದುರ್ಮರಣ 

ಕಲಬುರಗಿ: ಕ್ರೂಸರ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಒಂದೇ...

ಕಲಬುರಗಿ| ಆಕಾಶವಾಣಿ  “ಹಲೋ ಪೊಲೀಸ್ ಕಮಿಷನರ್” ನೇರ ಫೋನ್ ಇನ್ ಕಾರ್ಯಕ್ರಮ

ಕಲಬುರಗಿ: ಆಕಾಶವಾಣಿ ಕಲಬುರಗಿ ಕೇಂದ್ರವು ಮೇ 22(ಶುಕ್ರವಾರ) ರ ಬೆಳಗ್ಗೆ 11...