ಕಲಬುರಗಿ| ರೈತರ ಬೆಳೆವಿಮೆ ನೋಂದಣಿಗೆ ಜು.31 ಕೊನೆಯ ದಿನ: ಸಮದ್ ಪಟೇಲ್

Date:

Share post:

ಕಲಬುರಗಿ: 2025ರ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಜಿಲ್ಲೆಯಲ್ಲಿ ಬೆಳೆದಿರುವ ಕೆಳಕಂಡ ಬೆಳೆಗಳಿಗೆ ರೈತರು ತಮ್ಮ ಹತ್ತಿರದ ಗ್ರಾಮ್-ಒನ್, ಸಿ.ಎಸ್.ಸಿ ಕೇಂದ್ರ, ಬ್ಯಾಂಕ್ ಅಥವಾ ಪೋಸ್ಟ್ ಆಫೀಸ್‍ಗಳಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕೆಂದು ಕಲಬುರಗಿ ಜಂಟಿ ನಿರ್ದೇಶಕರಾದ ಸಮದ್ ಪಟೇಲ್ ಅವರು ತಿಳಿಸಿದ್ದಾರೆ.

ಬೆಳೆವಾರು ರೈತರು ಪಾವತಿಸಬೇಕಾದ ವಂತಿಕೆ ವಿವರ ಇಂತಿದೆ. ಹೆಸರು (ಮಳೆಆಶ್ರಿತ) ಪ್ರತಿ ಎಕರೆಗೆ 269.13 ರೂ. ವಂತಿಕೆ, ಉದ್ದು (ಮಳೆಆಶ್ರಿತ) ಪ್ರತಿ ಎಕರೆಗೆ ರೂ. 265.08 ವಂತಿಕೆ, ತೊಗರಿ (ಮಳೆಆಶ್ರಿತ) ಪ್ರತಿ ಎಕರೆಗೆ 388.51 ರೂ. ವಂತಿಕೆ, ತೊಗರಿ (ನೀರಾವರಿ) ಪ್ರತಿ ಎಕರೆಗೆ ರೂ. 406.72 ವಂತಿಕೆ, ಹತ್ತಿ (ಮಳೆಆಶ್ರಿತ) ಪ್ರತಿ ಎಕರೆಗೆ ರೂ. 865.75 ವಂತಿಕೆ, ಹತ್ತಿ (ನೀರಾವರಿ) ಪ್ರತಿ ಎಕರೆಗೆ ರೂ. 1492.33 ವಂತಿಕೆ ಹಾಗೂ ಸೂಯಾಅವರೆ (ಮಳೆಆಶ್ರಿತ) ಪ್ರತಿ ಎಕರೆಗೆ ರೂ. 331.85 ವಂತಿಕೆಯನ್ನು ರೈತರು ಪಾವತಿಸಬೇಕು. ರೈತರು ನೋಂದಣಿ ಮಾಡಿಕೊಳ್ಳಲು 2025ರ ಜುಲೈ 31 ಕೊನೆಯ ದಿನವಾಗಿದೆ.

ಕಲಬುರಗಿ ಜಿಲ್ಲೆಯಲ್ಲಿ ಮುಂಗಾರು ಬಿತ್ತನೆ ಭರದಿಂದ ಸಾಗಿದ್ದು, ಅತೀವೃಷ್ಟಿ, ಅನಾವೃಷ್ಟಿ, ಅಕಾಲೀಕ ಮಳೆಯಂತಹ ಪ್ರಕೃತಿ ವಿಕೋಪಗಳು ಹಾಗೂ ಯಾವುದೇ ಹಂತದಲ್ಲಿ ಬೆಳೆನಾಶವಾಗಬಹುದು. ಆದ್ದರಿಂದ ರೈತಭಾಂದವರು ಬಿತ್ತನೆ ಕಾರ್ಯ ಕೈಗೊಳ್ಳುವುದಷ್ಟೇ ಅಲ್ಲದೆ, ಬಿತ್ತಿದ ಬೆಳೆಯ ಕ್ಷೇತ್ರವನ್ನು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ವ್ಯಾಪ್ತಿಗೆ ನೊಂದಾಯಿಸುವುದು ಸಹ ಪ್ರಮುಖವಾಗಿದೆ.

ಕಳೆದ 3 ಮೂರು ವರ್ಷಗಳಲ್ಲಿ ಕಲಬುರಗಿ ಜಿಲ್ಲೆಯಲ್ಲಿ 561082 ಲಕ್ಷ ರೈತರು ಬೆಳೆವಿಮೆ ನೋಂದಣಿ ಮಾಡಿದ್ದು, 59.39 ಕೋಟಿ ರೈತರ ವಂತಿಕೆ ಪಾವತಿ ಮಾಡಿರುತ್ತಾರೆ ಹಾಗೂ 954.61 ಕೋಟಿ ಪರಿಹಾರಧನವನ್ನು ರೈತರ ಖಾತೆಗೆ ಪಾವತಿಸಲಾಗಿದೆ. ಕಳೆದ ಮೂರು ವರ್ಷದ ಮಾಹಿತಿ ನೊಡಿದಾಗ ರೈತರಿಗೆ ಬೆಳೆವಿಮೆ ಯೋಜನೆ ಬಹಳ ಅನುಕೂಲಕರವಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ಶೇ 90 ರಷ್ಟು ಪ್ರದೇಶ ಮಳೆಯಾಶ್ರಿತವಾಗಿರುವುದರಿಂದ ಅತೀವೃಷ್ಟಿ ಹಾಗೂ ಅನಾವೃಷ್ಟಿಗೆ ಸತತವಾಗಿ ಬೆಳೆಗಳು ತುತ್ತಾಗಿರುತ್ತವೆ ಎಂದು ಅವರು ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...

ಕಲಬುರಗಿ| ಸರಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕಲಬುರಗಿ: ನಗರದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಫೌಜಿಯಾ...

ಕಲಬುರಗಿ| ಜಿಲ್ಲಾಧಿಕಾರಿಗಳಿಂದ ಸಿಟಿ ರೌಂಡ್: ರಸ್ತೆ ದುರಸ್ತಿ,‌ ಗುಂಡಿ ಮುಚ್ಚುವ ಕಾರ್ಯ ಪರಿಶೀಲನೆ

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮತ್ತು ಮಹಾನಗರ ಪಾಲಿಕೆ ಆಯುಕ್ತ ಅವಿನಾಶ...

ಕಲಬುರಗಿ| ಬಾಲ್ಯ ವಿವಾಹ, ಫೋಕ್ಸೋ ಪ್ರಕರಣಗಳ ಬಗ್ಗೆ ನಿಗಾವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ಸೂಚನೆ

ಕಲಬುರಗಿ: ಬಾಲ್ಯವಿವಾಹ ಮತ್ತು ಫೋಕ್ಸೋ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು...