ಕಲಬುರಗಿ| ವಿಮಾನ ದುರಂತ ಪ್ರಕರಣಕ್ಕೆ ಕೇಂದ್ರ ಸಚಿವ ರಾಜೀನಾಮೆ ಕೊಡಬೇಕು: ಖಂಡ್ರೆ 

Date:

Share post:

ಕಲಬುರಗಿ: ಅಹಮದಾಬಾದ್ ವಿಮಾನ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ವಿಮಾನಯಾನ ಸಚಿವ ರಾಜೀನಾಮೆ ಕೊಡಬೇಕು ಎಂದು ಸಚಿವ ಈಶ್ಚರ ಖಂಡ್ರೆ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ಅವರು, ಈ ವಿಮಾನ ದುರಂತ ಘಟನೆಗೆ ಕೇಂದ್ರ ಸರ್ಕಾರ ಹೊಣೆಹೊತ್ತು ಕೂಡಲೇ ಕೇಂದ್ರ ವಿಮಾನಯಾನ ಸಚಿವ ರಾಜೀನಾಮೆ ನೀಡಬೇಕು.‌ ಇದು ಒಂದು ಅತಿದೊಡ್ಡ ದುರಂತವಾಗಿದೆ, ಅತ್ಯಂತ ನೋವಿನ ಸಂಗತಿಯಾಗಿದೆ.

ಇಂತಹ ದುರಂತ ನಡೆಯದಂತೆ ಸರ್ಕಾರ ಕ್ರಮ ಜರುಗಿಸಬೇಕು, ಹೀಗಾಗಿ ಈ ದುರಂತದ ಬಗ್ಗೆ ನಿಸ್ಪಕ್ಷಪಾತವಾಗಿ ತನಿಖೆಯಾಗಿ ಆ ವರದಿ ಜನರ ಮುಂದೆ ಇಡಬೇಕು ಎಂದರು.

ಇನ್ನೂ, ಟಾಟಾ ಗ್ರೂಪ್ ಸಮೂಹದಿಂದ 1 ಕೋಟಿ ಪರಿಹಾರ ಘೋಷಿಸಿದೆ ಆದರೆ ಆ ಪರಿವಾರದವರಿಗೆ ಏಷ್ಟು ಕೋಟಿ ಕೊಟ್ಟರು ಕಡಿಮೆಯೆ ಎಂದು ಹೇಳಿದರು.

ಕಾಲ್ತುಳಿತ ಪ್ರಕರಣಕ್ಕೆ ರಾಜೀನಾಮೆ ಕೊಡಬೇಕು ಎನ್ನುವ ಬಿಜೆಪಿಗರು ಆಗ್ರಹಕ್ಕೆ ಪ್ರತಿಕ್ರಿಯಿಸಿದ ಅವರು, ಕಾಲ್ತುಳಿತಕ್ಕೆ ರಾಜೀನಾಮೆ ಕೇಳುವವರು ಕುಂಭಮೇಳದಲ್ಲಿ ಘಟನೆ ಕುರಿತಾಗಿಯೂ ರಾಜೀನಾಮೆ ಕೇಳಬೇಕು, ಸಾವಿನಲ್ಲಿ ರಾಜಕೀಯ‌ ಮಾಡಬಾರದು ಎಂದರು.

Share post:

spot_imgspot_img

Popular

More like this
Related

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...

ಕಲಬುರಗಿ| ಐರಾವತ – ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ; ಇಬ್ಬರು ಚಾಲಕರ ಮೃತ್ಯು

ಕಲಬುರಗಿ: ಐರಾವತ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ ಸಂಭವಿಸಿ...

ಕಲಬುರಗಿ–ಮೈಸೂರು, ಕಲಬುರಗಿ–ಶಿವಮೊಗ್ಗ ಎಸಿ ಸ್ಲೀಪರ್ ಬಸ್ ಕಾರ್ಯಾಚರಣೆಗೆ ಚಾಲನೆ

ಮೂರು ತಿಂಗಳಲ್ಲಿ‌ 120 ಹೊಸ ಬಸ್ ಸೇರ್ಪಡೆ: ಅರುಣಕುಮಾರ ಪಾಟೀಲ ಕಲಬುರಗಿ: ಕಲ್ಯಾಣ...