ಕಲಬುರಗಿ| ವಿವಿಧ ಕಲ್ಯಾಣ ಕಾರ್ಯಕ್ರಮಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

Date:

Share post:

ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯ ಶೇ. 24.10ರ ಅನುಮೋದಿತ ಕ್ರಿಯಾ ಯೋಜನೆ 2012-13 ಮತ್ತು 2014-15ನೇ ಸಾಲಿನ ಪಾಲಿಕೆ ನಿಧಿ ಹಾಗೂ 2009-10 ರಿಂದ 2015-16ನೇ ಸಾಲಿನ ಪರಿಷ್ಕøತ ಕ್ರೀಯಾ ಯೋಜನೆಯಡಿ ನಿಗದಿಪಡಿಸಿದ ಕೆಳಕಂಡ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಕಲ್ಯಾಣ ಕಾರ್ಯಕ್ರಮಗಳಡಿ 2025-26 ನೇ ಸಾಲಿಗೆ ಕೆಳಕಂಡ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಮಹಾನಗರ ಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ.

2012-13 ಮತ್ತು 2014-15ನೇ ಸಾಲಿನ ಪಾಲಿಕೆ ನಿಧಿಯಡಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಸಮುದಾಯ ಭವನಗಳಿಗೆ ಆಟದ ಸಾಮಗ್ರಿಗಳು ಒದಗಿಸಲು, 2009-10 ರಿಂದ 2015-16 ನೇ ಸಾಲಿನ ಪರಿಷ್ಕøತ ಕ್ರೀಯಾ ಯೋಜನೆಯಡಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಸಮುದಾಯ ಭವನಗಳಿಗೆ ಶವಪೆಟ್ಟಿಗೆ (ಫ್ರೀಜರ) ಒದಗಿಸಲು ಹಾಗೂ 2015-16ನೇ ಸಾಲಿನ ಎಸ್.ಎಫ್.ಸಿ ಕ್ರಿಯಾ ಯೋಜನೆ ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡದ ಜನರಿಗೆ ಬ್ಯಾಂಡಸೆಟ್ ವಿತರಿಸಲಾಗುತ್ತಿದೆ.

ಅರ್ಹ ಫಲಾನುಭವಿಗಳು ಕಲಬುರಗಿ ಮಹಾನಗರ ಪಾಲಿಕೆಯ ಶೇ. 24.10 ಮತ್ತು ಆವಕ ಶಾಖೆಯಿಂದ ನಿಗದಿತ ಅರ್ಜಿ ನಮೂನೆಯನ್ನು ಕಚೇರಿ ಸಮಯದಲ್ಲಿ 2025ರ ಜೂನ್ 26 ರೊಳಗಾಗಿ  ಪಡೆದು ಭರ್ತಿ ಮಾಡಿ ಅವಶ್ಯಕಗಳನ್ನು ಕಡ್ಡಾಯವಾಗಿ ದೃಢೀಕರಣದೊಂದಿಗೆ  2025ರ ಜೂನ್ 26ರ ಸಂಜೆ 4.30 ಗಂಟೆಯೊಳಗಾಗಿ ಸದರಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು.

ಈ ಮೊದಲು ಮಹಾನಗರ ಪಾಲಿಕೆಯಿಂದ ಅಥವಾ ಸರ್ಕಾರದ ವಿವಿಧ ಯೋಜನೆಯಡಿ ಸೌಲಭ್ಯ  ಪಡೆದವರು ಪುನಃ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವಂತಿಲ್ಲ.  ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಮಹಾನಗರ  ಪಾಲಿಕೆಯ ಶೇ. 24.10ರ ಶಾಖೆಯನ್ನು ಹಾಗೂ ಮಹಾನಗರ ಪಾಲಿಕೆಯ  http://www.kalaburagicity.mrc.gov  ವೆಬ್‍ಸೈಟ್‍ನ್ನು ಸಂಪರ್ಕಿಸಬೇಕು.

Share post:

spot_imgspot_img

Popular

More like this
Related

ಕಲಬುರಗಿ| ಏ.15 ರಿಂದ 17ರ ವರೆಗೆ ಹೀಟ್ ವೇವ್ ಆರೆಂಜ್ ಅಲರ್ಟ್: ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ 

ಕಲಬುರಗಿ: ಕಲಬುರಗಿ ಜಿಲ್ಲೆಯಾದ್ಯಂತ ಇದೇ ಏಪ್ರೀಲ್ 15 ರಿಂದ 17ರ ವರೆಗೆ...

ಕಲಬುರಗಿ| ಅಂಬೇಡ್ಕರ್ ಜಯಂತಿ: ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ: ಡಿಸಿ ಆದೇಶ

ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಯಾವುದೇ ಅಹಿತಕರ...

ಕಲಬುರಗಿ| ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಡಾ.ಅಂಬೇಡ್ಕರ್ ಜಯಂತಿ

ಕಲಬುರಗಿ: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಾಬಾ ಸಾಹೇಬ ಅಂಬೇಡ್ಕರ್...

ಕಲಬುರಗಿ| ಕಲಾ ವಿಭಾಗದಲ್ಲಿ ಸೃಷ್ಟಿ ಮಲ್ಲಿನಾಥ ರಾಜ್ಯಕ್ಕೆ ಪ್ರಥಮ

ಕಲಬುರಗಿ: ಪ್ರಸಕ್ತ ದ್ವಿತೀಯ ಪಿ.ಯು.ಸಿ-1 ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಕಲಬುರಗಿಯ...