ಕಲಬುರಗಿ | ಪೊಲೀಸರಿಗೆ ತುರ್ತು ಸಂದರ್ಭಗಳಲ್ಲಿ ಪ್ರಥಮ ಚಿಕಿತ್ಸೆ ತರಬೇತಿ

Date:

Share post:

ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆಯಲ್ಲಿ ಜಿಲ್ಲೆಯ ಪೊಲೀಸ್ ಸಿಬ್ಬಂದಿಗಳಿಗಾಗಿ ತುರ್ತು ಪರಿಸ್ಥಿತಿಯಲ್ಲಿ ಪ್ರಥಮ ಚಿಕಿತ್ಸೆ ನೀಡುವ ಕುರಿತು ವಿಶೇಷ ತರಬೇತಿ ಕಾರ್ಯಕ್ರಮ ಜರುಗಿತು.

ಸುಮಾರು 1000 ಪೋಲಿಸ್ ಸಿಬ್ಬಂದಿಗಳಿಗೆ ತರಬೇತಿ ನೀಡಲಾಗುವ ಯೋಜನೆ ಇದೆ. ಪ್ರಥಮ ದಿನದ ತರಬೇತಿಯಲ್ಲಿ ಆಸ್ಪತ್ರೆಯ ತುರ್ತು ಸೇವಾ ಘಟಕ ಮುಖ್ಯಸ್ಥರಾದ ಡಾ ಚೈತನ್ಯ ಕೊಂಡಬಾಲ ಅವರು ಜಿಲ್ಲೆಯ ಸುಮಾರು ತೊಂಬತ್ತೈದು ಪೊಲೀಸ್ ಸಿಬ್ಬಂದಿಗಳಿಗೆ ತರಬೇತಿ ನೀಡಿದರು.

 

ಗಲಭೆ, ಅಗ್ನಿ ಅವಘಡ, ದುರಂತ ರಸ್ತೆ ಅಪಘಾತ ಮುಂತಾದ ಸಂದಿಗ್ಧ ಪರಿಸ್ಥಿತಿಗಳನ್ನು ನಿಭಾಯಿಸುವಾಗ ಪೊಲೀಸ್ ಸಿಬ್ಬಂದಿಗಳು ಪ್ರಥಮ ಚಿಕಿತ್ಸೆ ಕೊಡುವ ವಿಧಾನ, ಸ್ಪಂದಿಸುವ ಕ್ರಮ ಅನುಸರಿಸುವ ನೀತಿ ಕುರಿತು ಸವಿಸ್ತಾರವಾಗಿ ಪ್ರಾಯೋಗಿಕ ಪ್ರಾತ್ಯಕ್ಷಿಕೆ ಮೂಲಕ ಉಪನ್ಯಾಸ ನೀಡಿ ತರಭೇತಿ ನೀಡಿದರು.

 

ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಶಶೀಲ್ ಜಿ ನಮೋಶಿ ಉಪಾಧ್ಯಕ್ಷರಾದ ರಾಜಾ ಭಿ ಭೀಮಳ್ಳಿ ಕಾರ್ಯದರ್ಶಿಗಳಾದ ಉದಯಕುಮಾರ್ ಚಿಂಚೋಳಿ ಜಂಟಿ ಕಾರ್ಯದರ್ಶಿಗಳಾದ ಡಾ ಕೈಲಾಸ ಪಾಟೀಲ್ ಆಸ್ಪತ್ರೆಯ ಸಂಚಾಲಕರಾದ ಡಾ ಕಿರಣ್ ದೇಶಮುಖ್ ಹಾಗೂ ಆಡಳಿತ ಮಂಡಳಿ ಸದಸ್ಯರು ಆಸ್ಪತ್ರೆಯು ಪೋಲಿಸ್ ಸಿಬ್ಬಂದಿಗಳಿಗೆ ಇಂತಹ ತರಭೇತಿ ನೀಡುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.

ಈ ತರಭೇತಿಯ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯಕೀಯ ಅಧಿಕ್ಷಕರಾದ ಡಾ ಆನಂದ ಗಾರಂಪಳ್ಳಿ, ರಜೀಸ್ಟ್ರರರ್ ಶರಣು ಪಾಟೀಲ್, ಆಸ್ಪತ್ರೆಯ ಕಾರ್ಯಕ್ರಮದ ಸಂಯೋಜಕಿ ಪ್ರೀಯದರ್ಶೀನಿ ಬೆಂಗಾಳಿ ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...