ಕಲಬುರಗಿ| ತಂಬಾಕು ನಿಯಂತ್ರಣ ಕಾಯ್ದೆ-2003ರ ಕುರಿತು ಅರಿವು ಕಾರ್ಯಕ್ರಮ

Date:

Share post:

ಕಲಬುರಗಿ: ಕಲಬುರಗಿ ಜೇವರ್ಗಿ ಕಾಲೋನಿಯಲ್ಲಿರುವ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜಿನ ಯುಥ ರೆಡಕ್ರಾಸ್ ಘಟಕದ ವತಿಯಿಂದ ತಂಬಾಕು ನಿಯಂತ್ರಣ ಕಾಯ್ದೆ-2003ರ ಕುರಿತು ಅರಿವು ಮೂಡಿಸಲು ವಿದ್ಯಾರ್ಥಿನಿಯರಿಗೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಕಾಲೇಜಿನ ಭೌತಶಾಸ್ತ್ರದ ಅಧ್ಯಾಪಕ ಡಾ. ಎಸ್. ವಿ. ನಿಷ್ಠಿ ಅವರು ತಂಬಾಕಿನಿಂದಾಗುವ ಕ್ಯಾನ್ಸರ್ ಮುಂತಾದ ಕಾಯಿಲೆಗಳ ಬಗ್ಗೆ ಅರಿವು ಮೂಡಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ. ಮೊರಗೆ ಪ್ರಕಾಶ ವಿ. ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು. ಡಾ. ಹಾಜರಾ ಬೇಗಂ ಅವರು ಪರಿಸರ ಕಾಳಜಿ ಕುರಿತು ಮಾತನಾಡಿದರು.

ಕಾರ್ಯಕ್ರಮದಲ್ಲಿ ಡಾ. ವಿಜಯಕುಮಾರ, ಡಾ. ದಯಾಸಾಗರ, ಪ್ರೊ. ನಾಗಣ್ಣ, ಡಾ. ಶರಣಬಸಪ್ಪ ಚಿಕ್ಕಳಿ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು. ಯುಥ ರೆಡ್‍ಕ್ರಾಸ್ ಸಂಚಾಲಕ ಡಾ. ಪದ್ಮಣ ರಾಸಣಗಿ ಸ್ವಾಗತಿಸಿದರು. ಕು. ಸುಷ್ಮಾ ಬಿರಾದಾರ ಕಾರ್ಯಕ್ರಮ ನಿರ್ವಹಿಸಿದರು. ಕು. ನಾಗೀಣಿ ಎಂ.ಎ ಅವರು ಕೊನೆಯಲ್ಲಿ ವಂದಿಸಿದರು.

Share post:

spot_imgspot_img

Popular

More like this
Related

ಕಲಬುರಗಿ| ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳ ವಿತರಣೆ

ಕಲಬುರಗಿ: ಹೌಸಿಂಗ್ ಆಂಡ್ ಅರ್ಬನ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ...

ಕಲಬುರಗಿ| ಲಾರಿ – ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು; ಇನ್ನೋರ್ವ ಗಂಭೀರ ಗಾಯ

ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್...

ಕಲಬುರಗಿ| ರಾಮನವಮಿ ಆಚರಣೆ; ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ

ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ...

ಕಲಬುರಗಿ| ಬೇಸಿಗೆಯ ಸವಾಲುಗಳ ಎದುರಿಸಲು ಸಿದ್ಧ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

ಕಲಬುರಗಿ: ಕಲಬುರಗಿ ಜಿಲ್ಲಾಡಳಿತವು ಬೇಸಿಗೆಯ ಸವಾಲುಗಳನ್ನು ಎದುರಿಸಲು ಸಂಪೂರ್ಣ ಸನ್ನದ್ಧವಾಗಿದ್ದು, ಸಾರ್ವಜನಿಕರು...