ಕಲಬುರಗಿ| ಭೀಮಾ ನದಿಯಲ್ಲಿ ಕೊಚ್ಚಿ ಹೋದ ಬಾಲಕ ಶವವಾಗಿ ಪತ್ತೆ

Date:

Share post:

ಕಲಬುರಗಿ: ಭೀಮಾ ನದಿಯಲ್ಲಿ ಪುಣ್ಯ ಸ್ನಾನ ಮಾಡುವಾಗ ಕೊಚ್ಚಿ ಹೋದ ಬಾಲಕನೋರ್ವ ಕೊನೆಗೆ ಶವವಾಗಿ ಪತ್ತೆಯಾಗಿರುವ ಘಟನೆ ಅಫಜಲಪುರ ತಾಲೂಕಿನ ಗಾಣಗಾಪುರದಲ್ಲಿ ನಡೆದಿದೆ.

ಆಳಂದ ತಾಲ್ಲೂಕಿನ ಖಜೂರಿ ಗ್ರಾಮದ ಲಕ್ಷ್ಮಿಕಾಂತ ರಾಜು ಹತ್ತಿಗಳೆ(17) ಮೃತ ಬಾಲಕ ಎಂದು ಗುರುತಿಸಲಾಗಿದೆ.

ಮೃತ ಲಕ್ಷ್ಮೀಕಾಂತ್, ಸೋಮವಾರ ತನ್ನ ಕುಟುಂಬದೊಂದಿಗೆ ಗಾಣಗಾಪುರದ ದತ್ತಾತ್ರೇಯ ಸ್ವಾಮಿಯ ದರ್ಶನಕ್ಕೆ ಬಂದಿದ್ದ. ಈ ವೇಳೆಯಲ್ಲಿ ಭೀಮಾ ನದಿಯಲ್ಲಿ ಪುಣ್ಯ ಸ್ನಾನ ಮಾಡಲು ಕುಟುಂಬದ ನಾಲ್ವರು ಸದಸ್ಯರು ಇಳಿದಿದ್ದಾರೆ ಎನ್ನಲಾಗಿದೆ. ಈ ವೇಳೆಯಲ್ಲಿ ಸ್ನಾನ ಮಾಡಲು ನದಿಗೆ ಇಳಿದಿದ್ದ ಲಕ್ಷ್ಮೀಕಾಂತ್ ನೀರಿನ ರಭಸಕ್ಕೆ ಸುಳಿಯಲ್ಲಿ ಸಿಲುಕಿ ಕೊಚ್ಚಿ ಹೋಗಿದ್ದಾನೆ, ಒಂದೇ ಕುಟುಂಬದ ನಾಲ್ವರ ಪೈಕಿ ಮೂವರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಆದರೆ ಲಕ್ಷ್ಮೀಕಾಂತ ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ಆತನ ಪತ್ತೆಗಾಗಿ ಶೋಧ ಕಾರ್ಯ ನಡೆಸಿದ್ದರು. ಕೊನೆಗೆ ಲಕ್ಷ್ಮೀಕಾಂತ ಶವವಾಗಿ ಪತ್ತೆಯಾಗಿರುವುದು ತಿಳಿದುಬಂದಿದೆ.

ದೇವಲ ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...