ಕಲಬುರಗಿ| ಕೇಂದ್ರ ಕಾರಾಗೃಹದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Date:

Share post:

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಹಮಿಕೊಳ್ಳಲಾಗಿದ್ದ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಕಲಬುರಗಿ ಆರ್ಟ್ ಆಫ್ ಲಿವೀಂಗ್ ಸಂಸ್ಥೆಯ ಯೋಗ ಶಿಕ್ಷಕರಾದ ಎಲ್.ವಿ ಕುಲಕರ್ಣಿ ಅವರು ಶನಿವಾರ ಅವರು ಉದ್ಘಾಟಿಸಿದರು.

ನಂತರ ಅವರು ಮಾತನಾಡಿ, ಯೋಗದಿಂದ ಆರೋಗ್ಯಕರ ಜೀವನ ಸಾಧ್ಯವಾಗಲಿದ್ದು, ಯೋಗ ನಮ್ಮ ಒಳಗಿನ ಆತ್ಮ ಶಕ್ತಿಯನ್ನು ಪ್ರಜ್ವಲಿಸುವಂತೆ ಮಾಡುತ್ತದೆ. ದೇಹ, ಮನಸ್ಸು, ಆತ್ಮದ ವಿಕಸನಕ್ಕೆ ಯೋಗ ಸಹಾಯಕವಾಗಿದೆ ಎಂದು ಹೇಳಿದರು.

ಈ ಸಂಸ್ಥೆಯ ಮುಖ್ಯಸ್ಥರಾದ ಡಾ|| ಅನಿತಾ ಆರ್. ಮಾತನಾಡಿ, ಭಾರತ ದೇಶವು ಜಗತ್ತಿಗೆ ನೀಡಿದ ಅದ್ಭುತ ಕೊಡುಗೆಗಳಲ್ಲಿ ಯೋಗ ಶಾಸ್ತ್ರವು ಒಂದು. ಎಲ್ಲಾ ರೋಗಗಳಿಗೆ ಯೋಗ ರಾಮಬಾಣವಾಗಿದೆ. 2025ರ ಥೀಮ್ “ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ” ಆಗಿದೆ.” ಎಲ್ಲರೂ ಪ್ರತಿನಿತ್ಯ ಯೋಗ ಮಾಡಿ ಉತ್ತಮ ಆರೋಗ್ಯವನ್ನು ಹೊಂದಬೇಕು ಎಂದು ಕರೆ ನೀಡಿದರು.

ಆರ್ಟ್ ಆಫ್ ಲಿವೀಂಗ್ ಸಂಸ್ಥೆಯ ಯೋಗ ಗುರುಗಳಾದ ಎಲ್.ವಿ ಕುಲಕರ್ಣಿ ಹಾಗೂ ಶ್ರೀನಿವಾಸ ಅವರು 110 ಅಧಿಕಾರಿ/ಸಿಬ್ಬಂದಿಗಳು ಹಾಗೂ 250 ಜನ ಬಂದಿಗಳು ಸೇರಿದಂತೆ ಒಟ್ಟು 360 ಜನರಿಗೆ ಯೋಗವನ್ನು ಮಾಡಿಸಿದರು.

ಈ ಸಂದರ್ಭದಲ್ಲಿ ಈ ಸಂಸ್ಥೆಯ ಸಹಾಯಕ ಅಧೀಕ್ಷಕ ಚನ್ನಪ್ಪ, ಸಹಾಯಕ ಆಡಳಿತಾಧಿಕಾರಿ ಭೀಮಾಶಂಕರ ಡಾಂಗೆ, ಜೈಲರ್‍ಗಳಾದ ಸುನಂದ ವಿ., ಸಾಗರ ಪಾಟೀಲ್. ಶ್ರೀಮಂತಗೌಡ ಪಾಟೀಲ್, ಶಾಮರಾವ ಬಿದ್ರಿ ಸೇರಿದಂತೆ ಇನ್ನಿತರ ಅಧಿಕಾರಿ/ಸಿಬ್ಬಂದಿಗಳು ಉಪಸ್ಥಿತರಿದ್ದರು.

ಈ ಸಂಸ್ಥೆ ಶಿಕ್ಷಕರಾದ ನಾಗರಾಜ ಮೂಲಗೆ ಕಾರ್ಯಕ್ರಮ ನಿರ್ವಹಿಸಿದರು. ಕೊನೆಯಲ್ಲಿ ಸಂಸ್ಥೆಯ ಅಧೀಕ್ಷಕ ಎಂ.ಹೆಚ್. ಆಶೇಖಾನ್ ಅವರು ವಂದಿಸಿದರು.

Share post:

spot_imgspot_img

Popular

More like this
Related

ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳ ಪರಾರಿ; ತೀವ್ರ ಶೋಧ ಆರಂಭ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಿಂದ ಕೊಲೆ ಪ್ರಕರಣಗಳಲ್ಲಿ ಶಿಕ್ಷೆ...

ಕಲಬುರಗಿ| ಎಸ್ಐಆರ್: ಶೇ.100ರಷ್ಟು ಗಣತಿ ನಮೂನೆ ವಿತರಣೆ ಮಾಡಿ: ವಿ.ಅನ್ಬುಕುಮಾರ್

ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಿ.ಎಲ್.ಓ.ಗಳು ತಮ್ಮ ಬಳಿ...

ಕಲಬುರಗಿಗೆ ನಿರಂತರ ನೀರು ಪೂರೈಕೆ ಯೋಜನೆಯ ಕಾಮಗಾರಿ ಮುಗಿಸಿ: ಸಚಿವ ಯತೀಂದ್ರ ಸಿದ್ಧರಾಮಯ್ಯ ವಾರ್ನಿಂಗ್

ಕಲಬುರಗಿ: ಕಲಬುರಗಿ ಮಹಾನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ 24x7 ಯೋಜನೆಯ...

Kalaburagi| ಊಟ ಸೇವನೆಯಿಂದ ಮಕ್ಕಳ ಅಸ್ವಸ್ಥ ಪ್ರಕರಣ: ಶಾಲೆಯ ಪ್ರಭಾರಿ ಪ್ರಾಂಶುಪಾಲ, ವಾರ್ಡನ್ ಅಮಾನತ್ತು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ...