ಕಲಬುರಗಿ| ಪ್ರವಾಸಿ ತಾಣಗಳಲ್ಲಿ ಮೂಲಸೌಕರ್ಯ ಕಲ್ಪಿಸಲು ಡಿ.ಪಿ.ಆರ್ ಸಿದ್ದಪಡಿಸುವಂತೆ ಡಿ.ಸಿ ಸೂಚನೆ

Date:

Share post:

ಕಲಬುರಗಿ: ಕರ್ನಾಟಕ ಪ್ರವಾಸೋದ್ಯಮ ನೀತಿಯಡಿ ಜಿಲ್ಲೆಯಾದ್ಯಂತ ಗುರುತಿಸಿರುವ 30 ಪ್ರವಾಸಿ ತಾಣಗಳಲ್ಲಿ ಕನಿಷ್ಟ ಮೂಲಸೌಕರ್ಯ ಕಲ್ಪಿಸಲು ಡಿ.ಪಿ.ಆರ್ ಸಿದ್ದಪಡಿಸಬೇಕು ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಶನಿವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರವಾಸೋದ್ಯಮ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರಾಚ್ಯವಸ್ತು ಸಂಗ್ರಹಾಲಯ ಮತ್ತು ಪ್ರವಾಸೋದ್ಯಮ ಇಲಾಖೆಯು ಜಂಟಿಯಾಗಿ ಪ್ರವಾಸಿ ತಾಣಗಳಿಗೆ ಭೇಟಿ ಕೊಟ್ಟು ಸ್ಥಳೀಯರ ಅಪೇಕ್ಷೆಯಂತೆ ಡಿ.ಪಿ.ಆರ್ ತಯಾರಿಸಬೇಕು. ತುರ್ತಾಗಿ ಪ್ರವಾಸಿ ತಾಣಗಳಲ್ಲಿ ಸೈನೇಜ್ ಬೋರ್ಡ್ ಅಳವಡಿಕೆ ಕಾರ್ಯ ಮಾಡಬೇಕು ಎಂದರು.

ಜಿಲ್ಲೆಯ ಪ್ರವಾಸಿ ತಾಣಗಳು ಕುರಿತು ಹೆದ್ದಾರಿ ಫಲಕಗಳ ಮೂಲಕ ವ್ಯಾಪಕ ಪ್ರವಾರ ನೀಡಿ ಪ್ರವಾಸೋದ್ಯಮ ಉತ್ತೇಜಿಸಬೇಕು. ಪ್ರವಾಸಿ ತಾಣಗಳ ಮಾಹಿತಿವುಳ್ಳ ಬ್ರೋಚರ್ ಮುದ್ರಿಸಿ ಹಂಚಬೇಕು. ಇದಲ್ಲದೆ ಜಿಲ್ಲೆಯ ಪ್ರವಾಸಿ ತಾಣಗಳು, ಕಲೆ, ಸಂಸ್ಕೃತಿ, ವೇಷಭೂಷಣ, ಅಹಾರ ಪದ್ದತಿ ಕುರಿತು ಕಾಫಿ ಟೇಬಲ್ ಪುಸ್ತಕ ಹೊರತರಬೇಕು ಎಂದು ಡಿ.ಸಿ. ತಿಳಿಸಿದರು.

ಕಲಬುರಗಿ ಸಚಿವ ಸಂಪುಟ ಸಭೆಯಲ್ಲಿ ಹಲವು ಪ್ರವಾಸಿ ತಾಣಗಳ ಮೂಲಸೌಕರ್ಯ ಬಲಪಡಿಸಲು ಕಾಮಗಾರಿಗಳಿಗೆ ಅನುಮೋದನೆ ನೀಡಿದ್ದರಿಂದ ಡಿ.ಪಿ.ಆರ್. ತಯ್ಯಾರಿಸಿ ಆಡಳಿತಾತ್ಮಕ ಅನುಮೋದನೆ ಪಡೆದು ಕೆಲಸ ಪ್ರಾರಂಭಿಸಬೇಕು ಎಂದು ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳಿಗೆ ಡಿ.ಸಿ. ಸೂಚಿಸಿದರು.

ಸಭೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕಿ ಬೇಬಿ ಮೊಗೆರಾ, ರಾಜ್ಯ ಪ್ರಾಚ್ಯವಸ್ತು ಸಂಗ್ರಹಾಲಯಗಳ ಇಲಾಖೆಯ ಸಹಾಯಕ ನಿರ್ದೇಶಕ ರಾಜಾರಾಮ, ತಾಂತ್ರಿಕ ಇಂಜಿನೀಯರ್ ಪ್ರೇಮಲತಾ, ಕೆ.ಆರ್.ಐ.ಡಿ.ಎಲ್ ಇ.ಇ. ರಾಹುಲ, ಪಿ.ಆರ್.ಇ.ಡಿ ಇ.ಇ. ಮಲ್ಲಿಕಾರ್ಜುನ ಸೇರಿದಂತೆ ಪ್ರವಾಸೋದ್ಯಮ ಇಲಾಖೆ ಸಿಬ್ಬಂದಿಗಳು ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...