ಕಲಬುರಗಿ| ರೈತರು, ತಂತ್ರಜ್ಞರಿಗೆ ವಿಶೇಷ ತರಬೇತಿ; ಹೆಸರು ನೋಂದಣಿಗೆ ಜೂ.26 ಕೊನೆಯ ದಿನ

Date:

Share post:

ಕಲಬುರಗಿ: ಪ್ರಸಕ್ತ 2025-26ನೇ ಸಾಲಿನಲ್ಲಿ ರೈತರು ಮತ್ತು ಕೃಷಿ ಪಂಪ್ ಉಪಕರಣಗಳ ತಂತ್ರಜ್ಞರಿಗೆ ಬಿಇಇ ಸ್ಟಾರ್ ಲೇಬಲ್‍ವುಳ್ಳ ಇಂಧನ ದಕ್ಷ ಪಂಪಸೆಟ್ ಮತ್ತು ನೀರಿನ ಸಂರಕ್ಷಣೆ ಕುರಿತು ಇದೇ ಜೂನ್ 27 ರಂದು ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಕೋಟನೂರ (ಡಿ) ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾಗಿದೆ ಎಂದು ಕಲಬುರಗಿ ಕೋಟನೂರ (ಡಿ) ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಕಲಬುರಗಿ ಜಿಲ್ಲೆಯ ಆಸಕ್ತಿಯುಳ್ಳ ರೈತರು, ಸಿ.ಹೆಚ್.ಸಿ. ಟೆಕ್ನಿಶಿಯನ್ಸ್/ ಮ್ಯಾನೇಜರ್ಸ್ (CHC Technicians /Managers) ಹಾಗೂ ಕೃಷಿ ಉಪಕರಣಗಳು/ಕೃಷಿ ಪಂಪಸೆಟ್ ತಂತ್ರಜ್ಞರು 2025ರ ಜೂನ್ 26 ರೊಳಗಾಗಿ ತಮ್ಮ ಹೆಸರನ್ನು ಕೃಷಿ ಅಧಿಕಾರಿಗಳಾದ ಸುಜಾತಾ.ಆರ್.ರಾಜನಾಳಕರ- 94486512021 ಹಾಗೂ ಯಾಸ್ಮೀನ್ ಇವರ ಮೊಬೈಲ್ ಸಂಖ್ಯೆ 9901604822 ಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು.

ಎಫ್.ಐ.ಡಿ. ಹೊಂದಿರುವ ಆಸಕ್ತಿಯುಳ್ಳ ರೈತರು ನೊಂದಾಯಿಸಿಕೊಳ್ಳಬೇಕು. ಎಫ್.ಐ.ಡಿ. ಆಧಾರ ಸಂಖ್ಯೆ ಹಾಗೂ ಮೊಬೈಲ್ ಸಂಖ್ಯೆ ಕಡ್ಡಾಯವಾಗಿ ತರಬೇಕು. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಕೋಟನೂರ (ಡಿ) ಜಿಲ್ಲಾ ಕೃಷಿ ತರಬೇತಿ ಕೇಂದ್ರಕ್ಕೆ ಸಂಪರ್ಕಿಸಲು ಕೋರಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...