ಜೂ.29ಕ್ಕೆ ‘ಹೃದಯವಂತ’ ಅಭಿನಂದನಾ ಗ್ರಂಥ ಬಿಡುಗಡೆ: ಬಿ.ಎಚ್ ನಿರಗುಡಿ 

Date:

Share post:

ಕಲಬುರಗಿ: ಇದೇ ಜೂನ್ 29 ರಂದು ನಗರದ ಕೂಸನೂರ್ ರಸ್ತೆಯ ಜಯನಗರದಲ್ಲಿರುವ ಅನುಭವ ಮಂಟಪದಲ್ಲಿ ಬೆಳಗ್ಗೆ 10.45ಗಂಟೆಗೆ ವೈದ್ಯಕೀಯ ಕ್ಷೇತ್ರದಲ್ಲಿ ತಮ್ಮದೇಯಾದ ಛಾಪು ಮೂಡಿಸಿದ ಡಾ.ಎಸ್.ಎಸ್.ಗುಬ್ಬಿ ಅವರ ಜೀವನ, ಸಾಧನೆಗಳ ಕುರಿತಾಗಿ ರಚಿಸಿರುವ ‘ಹೃದಯವಂತ’ ಎಂಬ ಅಭಿನಂದನಾ ಗ್ರಂಥದ ಬಿಡುಗಡೆಯ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಲೇಖಕ, ಅಭಿನಂದನಾ ಗ್ರಂಥದ ಸಂಪಾದಕ ಬಿ.ಎಚ್ ನಿರಗುಡಿ ತಿಳಿಸಿದ್ದಾರೆ.

 

ಅಂದು ನಡೆಯಲಿರುವ ಸಮಾರಂಭದಲ್ಲಿ ಜೇವರ್ಗಿಯ ಸೊನ್ನ ವಿರಕ್ತ ಮಠದ ಡಾ. ಶಿವಾನಂದ ಮಹಾಸ್ವಾಮಿಗಳು ಸಾನಿಧ್ಯ ವಹಿಸಲಿದ್ದು, ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅವರು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. ಇದೇ ವೇಳೆಯಲ್ಲೇ 336 ಪುಟದ ಅಭಿನಂದನಾ ಗ್ರಂಥವನ್ನು ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ, ಶಾಸಕ ಬಿ.ಆರ್.ಪಾಟೀಲ್ ಅವರು ಬಿಡುಗಡೆ ಮಾಡಲಿದ್ದಾರೆ. ರೆಡ್ಡಿ ಸಮಾಜದ ಜಿಲ್ಲಾಧ್ಯಕ್ಷ ಡಾ.ಎಸ್.ಬಿ.ಕಾಮರೆಡ್ಡಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ ಎಂದರು.

 

ಮುಖ್ಯ ಅತಿಥಿಗಳಾಗಿ ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಶರಣಬಸಪ್ಪ ಪಪ್ಪಾ, ಡಾ.ಕೆ.ಜಿ. ಬಿರಾದಾರ, ಎಸ್.ಎಲ್ ಪಾಟೀಲ್ ಸೇರಿದಂತೆ ಮತ್ತಿತರರು ಉಪಸ್ಥಿತರಿರಲಿದ್ದಾರೆ ಎಂದು ನಿರಗುಡಿ ತಿಳಿಸಿದರು.

ಕಾರ್ಯಕ್ರಮಕ್ಕೂ ಮುಂಚೆ ಕಿರಣ್ ಪಾಟೀಲ್, ಚಾಮರಾಜ ದೊಡ್ಡಮನಿ, ಬಾಬು ಜಾಧವ್ ಮತ್ತು ಡಾ. ರಾಜಶೇಖರ್ ಮಾಂಗ್ ಅವರು ಕನ್ನಡ ಗೀತ ಗಾಯನ ನೆರವೇರಿಸಿ ಕೊಡಲಿದ್ದಾರೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಡಾ.ಎಸ್.ಬಿ.ಕಾಮರೆಡ್ಡಿ, ಎಸ್.ಎಸ್.ಹಿರೇಮಠ್, ಸಂಗಮೇಶ್ ಹಿರೇಮಠ್, ಗುರುಬಸಪ್ಪ ಪಾಟೀಲ್ ಮತ್ತಿತರರು ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳ ಪರಾರಿ; ತೀವ್ರ ಶೋಧ ಆರಂಭ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಿಂದ ಕೊಲೆ ಪ್ರಕರಣಗಳಲ್ಲಿ ಶಿಕ್ಷೆ...

ಕಲಬುರಗಿ| ಎಸ್ಐಆರ್: ಶೇ.100ರಷ್ಟು ಗಣತಿ ನಮೂನೆ ವಿತರಣೆ ಮಾಡಿ: ವಿ.ಅನ್ಬುಕುಮಾರ್

ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಿ.ಎಲ್.ಓ.ಗಳು ತಮ್ಮ ಬಳಿ...

ಕಲಬುರಗಿಗೆ ನಿರಂತರ ನೀರು ಪೂರೈಕೆ ಯೋಜನೆಯ ಕಾಮಗಾರಿ ಮುಗಿಸಿ: ಸಚಿವ ಯತೀಂದ್ರ ಸಿದ್ಧರಾಮಯ್ಯ ವಾರ್ನಿಂಗ್

ಕಲಬುರಗಿ: ಕಲಬುರಗಿ ಮಹಾನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ 24x7 ಯೋಜನೆಯ...

Kalaburagi| ಊಟ ಸೇವನೆಯಿಂದ ಮಕ್ಕಳ ಅಸ್ವಸ್ಥ ಪ್ರಕರಣ: ಶಾಲೆಯ ಪ್ರಭಾರಿ ಪ್ರಾಂಶುಪಾಲ, ವಾರ್ಡನ್ ಅಮಾನತ್ತು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ...