ಕಲಬುರಗಿ| ಶಾಸಕ ಬಸವರಾಜ ಮತ್ತಿಮಡು ವಿರುದ್ಧ ದ್ವೇಷಕಾರಿ ಹೇಳಿಕೆ ಆರೋಪ; ಸವಿತಾನಂದ ಸ್ವಾಮೀಜಿ ವಿರುದ್ಧ ಜಾತಿ ನಿಂದನಾ ಪ್ರಕರಣ ದಾಖಲು

Date:

Share post:

ಕಲಬುರಗಿ: ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಮತ್ತು ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ಕೊಂಚೂರಿನ ಸವಿತಾ ಸಮಾಜ ಮಠದ ಧರಯ್ಯನಂದಾ ಸ್ವಾಮೀಜಿ( ಸವಿತಾನಂದ ಸ್ವಾಮೀಜಿ) ವಿರುದ್ದ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಶ್ರೀನಿವಾಸ ಸರಡಗಿಯ ಮಲ್ಲಿಕಾ ರ್ಜುನ ಕಿಳ್ಳಿ ಎಂಬುವವರು ಸಲ್ಲಿಸಿದ ದೂರಿನ ಮೇರೆಗೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

ನಂದಿಕೂರ ತಾಂಡಾದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವರ ವಿರುದ್ಧ ಪೋಕ್ಸ್ ಕಾಯ್ದೆ ಅನುಸಾರ ಕ್ರಮ ಕೈಗೊಳ್ಳಬೇಕು ಮತ್ತು ಸಂತ್ರಸ್ತ ಬಾಲಕಿಯ ಕುಟುಂಬಕ್ಕೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿ ಜೂ.24ರಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ನಡೆಸಿದ ಪ್ರತಿಭಟನೆ ನಡೆಸಲಾಗಿತ್ತು.

ಈ ವೇಳೆ ಮಾತನಾಡಿದ ಧರಯ್ಯಾನಂದ ಸ್ವಾ ಮೀಜಿ, ಶಾಸಕ ಬಸವರಾಜ ಮತ್ತಿಮಡು ಅವರಿಗೆ ಜಾತಿ ನಿಂದನೆ ಮಾಡಿ, ಬಿಜೆಪಿ ನಾಯಕರೇ ನೀವು ಎಲ್ಲಿದ್ದೀರಿ? ನಿಮ್ಮ ಮನೆಯ ಹೆಣ್ಣು ಮಕ್ಕಳಿಗೆ ಅನ್ಯಾಯ ಆಗುವವರೆಗೂ ಮಾತನಾಡುವುದಿಲ್ಲವೇ ಎನ್ನುತ್ತಾ ಏಕವಚನದಲ್ಲೇ ನೀನು ಎಲ್ಲಿದ್ದಿ? ಬೆಟ್ಟಿಂಗ್ ನಲ್ಲಿ ಬ್ಯುಸಿ ಆಗಿರುವೆಯೇ ಎಂದು ಹೇಳಿದ್ದಾರೆ. ಶಾಸಕರು ದಲಿತ ಸಮಾಜದವರು ಎಂದು ಗೊತ್ತಿದ್ದರೂ ಜಾತಿ ನಿಂದನೆ ಮಾಡಿ ಮಾತನಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ ಎಂದು ತಿಳಿದುಬಂದಿದೆ.

Share post:

spot_imgspot_img

Popular

More like this
Related

ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳ ಪರಾರಿ; ತೀವ್ರ ಶೋಧ ಆರಂಭ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಿಂದ ಕೊಲೆ ಪ್ರಕರಣಗಳಲ್ಲಿ ಶಿಕ್ಷೆ...

ಕಲಬುರಗಿ| ಎಸ್ಐಆರ್: ಶೇ.100ರಷ್ಟು ಗಣತಿ ನಮೂನೆ ವಿತರಣೆ ಮಾಡಿ: ವಿ.ಅನ್ಬುಕುಮಾರ್

ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಿ.ಎಲ್.ಓ.ಗಳು ತಮ್ಮ ಬಳಿ...

ಕಲಬುರಗಿಗೆ ನಿರಂತರ ನೀರು ಪೂರೈಕೆ ಯೋಜನೆಯ ಕಾಮಗಾರಿ ಮುಗಿಸಿ: ಸಚಿವ ಯತೀಂದ್ರ ಸಿದ್ಧರಾಮಯ್ಯ ವಾರ್ನಿಂಗ್

ಕಲಬುರಗಿ: ಕಲಬುರಗಿ ಮಹಾನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ 24x7 ಯೋಜನೆಯ...

Kalaburagi| ಊಟ ಸೇವನೆಯಿಂದ ಮಕ್ಕಳ ಅಸ್ವಸ್ಥ ಪ್ರಕರಣ: ಶಾಲೆಯ ಪ್ರಭಾರಿ ಪ್ರಾಂಶುಪಾಲ, ವಾರ್ಡನ್ ಅಮಾನತ್ತು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ...