ಕಲಬುರಗಿ| ಮನ್ ಕಿ ಬಾತ್ ನಲ್ಲಿ ಪ್ರಧಾನಿ ಕಲಬುರಗಿಯ ಜೋಳದ ರೊಟ್ಟಿ ಬಗ್ಗೆ ಪ್ರಶಂಸೆ: ನಮೋಶಿ ಹರ್ಷ

Date:

Share post:

ಕಲಬುರಗಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ತಮ್ಮ 123ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಕಲಬುರಗಿ ಜಿಲ್ಲೆಯ ಜೋಳದ ರೊಟ್ಟಿಯ ಮಹತ್ವ ಕುರಿತು ಪ್ರಸ್ತಾಪಿಸುವ ಮೂಲಕ ಸಿರಿಧಾನ್ಯಗಳ ಪೈಕಿ ಒಂದಾಗಿರುವ ಜೋಳಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೇಡಿಕೆ ಸೃಷ್ಟಿಯಾಗುವಂತೆ ಮಾಡಿರುವುದು ನಿಜಕ್ಕೂ ಹೆಮ್ಮೆ ತರುವಂತಿದೆ ಎಂದು ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ ಹರ್ಷ ವ್ಯಕ್ತಪಡಿಸಿದ್ದಾರೆ.

ಕಲಬುರಗಿ ಜಿಲ್ಲೆಯ ಮಹಿಳೆಯರು ಸ್ವಸಹಾಯ ಸಂಘ ರಚಿಸಿಕೊಂಡು ಆ ಮೂಲಕ ನಿತ್ಯ 3000 ಜೋಳದ ರೊಟ್ಟಿಗಳನ್ನು ಸಿದ್ದಪಡಿಸಿ ಬೆಂಗಳೂರಿನಲ್ಲಿ ಮಾರುಕಟ್ಟೆ ಮಾಡುತ್ತಿರುವುದರ ಬಗ್ಗೆ ಮಾನ್ಯ ಪ್ರಧಾನಿಗಳು ಉಲ್ಲೇಖಿಸುವ ಮೂಲಕ ತಮ್ಮ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಸ್ತ್ರೀ ಸಬಲೀಕರಣದ ಕುರಿತು ಹೆಚ್ಚು ಕಾಳಜಿಯಿದೆ ಎಂಬುದನ್ನು ಸಾಬೀತುಪಡಿಸಿದ್ದಾರೆ ಎಂದರು.

ಜೋಳದ ರೊಟ್ಟಿಯ ಮಾತಿಗೆ ಬರುವುದಾದರೆ, ಹೆಚ್ಚು ಪೋಷಕಾಂಶಗಳನ್ನು ಹೊಂದಿರುವ ಜೋಳದಲ್ಲಿ ಯಥೇಚ್ಛವಾಗಿ ನಾರಿನ ಅಂಶ (ಫೈಬರ್) ಇರುವುದರಿಂದ ಸುಲಭವಾಗಿ ಜೀರ್ಣಗೊಳ್ಳುವ ಆಹಾರವಾಗಿದ್ದು, ಕರುಳಿನ ಆರೋಗ್ಯಕ್ಕೆ ಪೂರಕವಾಗಿದೆ. ಮೇಲಾಗಿ, ದೇಹದಲ್ಲಿ ಸಕ್ಕರೆ ಅಂಶವು ಸಮತೋಲನ ಪ್ರಮಾಣದಲ್ಲಿರುವಂತೆ ನೋಡಿಕೊಳ್ಳುತ್ತದೆ. ಇದರ ಜೊತೆಗೆ, ಮೆಗ್ನಿಷಿಯಂ, ಕ್ಯಾಲ್ಸಿಯಂ ಹಾಗೂ ಅಗತ್ಯ ಖನಿಜಾಂಶಗಳು ಇರುವುದರಿಂದ ಮೂಳೆಗಳ ಆರೋಗ್ಯಕ್ಕೂ ಜೋಳದ ರೊಟ್ಟಿ ಸಹಕಾರಿಯಾಗಿದೆ ಎಂಬುದು ಈಗಾಗಲೇ ಸಾಬೀತಾಗಿದೆ. ಈ ಕಾರಣಕ್ಕಾಗಿಯೇ ಬೆಂಗಳೂರಿನಲ್ಲಿ ಜೋಳದ ರೊಟ್ಟಿಯ ಕೌಂಟರ್ ಆರಂಭಿಸುವ ಮೂಲಕ ‘ಸಿರಿಧಾನ್ಯದ ಶಕ್ತಿ’ಯ ಮಹತ್ವ ಸಾಬೀತುಪಡಿಸಿರುವ ನಮ್ಮ ಮಹಿಳೆಯರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಮನಃಪೂರ್ವಕವಾಗಿ ಅಭಿನಂದಿಸಿದ್ದಾರೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಆದಿವಾಸಿ ತಾಂಡಾಗಳಲ್ಲಿ ಮೂಲಸೌಕರ್ಯ ಕೊರತೆ: ಲತಾ ಮೋಹನ್ ಪರಿಶೀಲನೆ

ಕಲಬುರಗಿ: ಜಿಲ್ಲೆಯ ವಿವಿಧ ಆದಿವಾಸಿ ತಾಂಡಾಗಳಿಗೆ ಭೇಟಿ ನೀಡಿದ ಕರ್ನಾಟಕ ರಾಜ್ಯ...

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...