ಕಲಬುರಗಿ| ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ವ್ಯಕ್ತಿ ಆತ್ಮಹತ್ಯೆ

Date:

Share post:

ಕಲಬುರಗಿ: ಚಿಂಚೋಳಿ ತಾಲೂಕಿನ ಸುಲೇಪೆಟ್ ಪಟ್ಟಣದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಯ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರವಿವಾರ ವರದಿಯಾಗಿದೆ.

ಸುಲೇಪೆಟ್ ಪಟ್ಟಣದ ನಿವಾಸಿ ಸಯ್ಯದ್ ಸಲೀಂ(46) ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ ಎಂದು ತಿಳಿದುಬಂದಿದೆ.

ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ಸಲೀಂ, ಮನೆಯಲ್ಲಿ ಯಾರು ಇಲ್ಲದಿದ್ದಾಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಖಾಸಗಿ ಮತ್ತು ಬ್ಯಾಂಕ್ ನಲ್ಲಿ 20 ಲಕ್ಷ ಸಾಲ ಮಾಡಿದ್ದ. ಸಾಲ ವಾಪಸ್ ಕೊಡುವಂತೆ ಕಿರುಕುಳ ನೀಡಿದ್ದರಿಂದಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಸುಲೇಪೆಟ್ ಪಟ್ಟಣದ ಸರ್ಕಲ್ ನಲ್ಲಿ ಸಲೀಂ ಅವರ ಶವವಿಟ್ಟು ಪ್ರತಿಭಟಿಸಿರುವ ಘಟನೆ ಜರುಗಿದೆ.

ಈ ಕುರಿತು ಸುಲೇಪೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...

ಕಲಬುರಗಿ| ಐರಾವತ – ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ; ಇಬ್ಬರು ಚಾಲಕರ ಮೃತ್ಯು

ಕಲಬುರಗಿ: ಐರಾವತ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ ಸಂಭವಿಸಿ...

ಕಲಬುರಗಿ–ಮೈಸೂರು, ಕಲಬುರಗಿ–ಶಿವಮೊಗ್ಗ ಎಸಿ ಸ್ಲೀಪರ್ ಬಸ್ ಕಾರ್ಯಾಚರಣೆಗೆ ಚಾಲನೆ

ಮೂರು ತಿಂಗಳಲ್ಲಿ‌ 120 ಹೊಸ ಬಸ್ ಸೇರ್ಪಡೆ: ಅರುಣಕುಮಾರ ಪಾಟೀಲ ಕಲಬುರಗಿ: ಕಲ್ಯಾಣ...