ಸೇಡಂ| ಬಿ.ಮಹಾದೇವಪ್ಪ ಪ್ರಶಸ್ತಿಗೆ ಬಣಗಾರ, ಶಿವಾನಂದನ್ ಆಯ್ಕೆ

Date:

Share post:

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಸೇಡಂ ತಾಲೂಕು ಘಟಕದಿಂದ ಆಚರಿಸುವ ಪತ್ರಿಕಾ ದಿನಾಚರಣೆಯಲ್ಲಿ ಹಿರಿಯ ಪತ್ರಕರ್ತ ಲಿಂ.ಬಿ.ಮಹಾದೇವಪ್ಪ ಅವರ ಹೆಸರಿನಲ್ಲಿ ಕೊಡಮಾಡುವ ಪ್ರಶಸ್ತಿಗೆ ಹಿರಿಯ ಪತ್ರಕರ್ತರಾದ ಟಿ.ವಿ.ಶಿವಾನಂದನ್ ಹಾಗೂ ಸುಭಾಷ ಬಣಗಾರ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಘದ ಅಧ್ಯಕ್ಷ ಶರಣು ಮಹಾಗಾಂವ ಹಾಗೂ ಪ್ರಧಾನ ಕಾರ್ಯದರ್ಶಿ ಸಿದ್ದಯ್ಯಸ್ವಾಮಿ ಆಡಕಿ ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಾಡಿನ ಹಿರಿಯ ಪತ್ರಕರ್ತರಲ್ಲಿ ಒಬ್ಬರಾದ ತಾಲೂಕಿನ ಬೆನಕನಹಳ್ಳಿಯ ಮಹಾದೇವಪ್ಪನವರ ಹೆಸರಿನಲ್ಲಿ ಕಳೆದ ವರ್ಷದಿಂದ ಪ್ರಶಸ್ತಿ ಕೊಡಮಾಡಲಾಗುತ್ತಿದೆ. ಅನೇಕ ವರ್ಷಗಳ ಕಾಲ ಪತ್ರಿಕೋದ್ಯಮದಲ್ಲಿ ಸೇವೆಗೈದು ಇದೀಗ ಶರಣಬಸವೇಶ್ವರ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾಗಿ ಕರ‍್ಯನಿರ್ವಹಿಸುತ್ತಿರುವ ಟಿ.ವಿ.ಶಿವಾನಂದನ್, ಸಂಯುಕ್ತ ಕರ್ನಾಟಕ ಪತ್ರಿಕೆಯ ಕಲಬುರಗಿ ಅವೃತ್ತಿಯ ಸ್ಥಾನಿಕ ಸಂಪಾದಕ ಸುಭಾಷ ಬಣಗಾರ ಪ್ರಶಸ್ತಿಗೆ ಆಯ್ಕೆಗೊಂಡಿದ್ದಾರೆ. ಇವರಿಗೆ ಪ್ರಶಸ್ತಿ ಪತ್ರ, ಫಲಕ ಮತ್ತು 5,000/- ನಗದು ನೀಡಿ ಗೌರವಿಸಲಾಗುತ್ತದೆ. ಇದೇ ವೇಳೆಯಲ್ಲಿ ಪತ್ರಿಕೆ ವಿತರಕ ಇಮಡಾಪೂರದ ರಜಾಕ್ ಅವರನ್ನು ವಿಶೇಷವಾಗಿ ಸತ್ಕರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಏ.15 ರಿಂದ 17ರ ವರೆಗೆ ಹೀಟ್ ವೇವ್ ಆರೆಂಜ್ ಅಲರ್ಟ್: ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ 

ಕಲಬುರಗಿ: ಕಲಬುರಗಿ ಜಿಲ್ಲೆಯಾದ್ಯಂತ ಇದೇ ಏಪ್ರೀಲ್ 15 ರಿಂದ 17ರ ವರೆಗೆ...

ಕಲಬುರಗಿ| ಅಂಬೇಡ್ಕರ್ ಜಯಂತಿ: ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ: ಡಿಸಿ ಆದೇಶ

ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಯಾವುದೇ ಅಹಿತಕರ...

ಕಲಬುರಗಿ| ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಡಾ.ಅಂಬೇಡ್ಕರ್ ಜಯಂತಿ

ಕಲಬುರಗಿ: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಾಬಾ ಸಾಹೇಬ ಅಂಬೇಡ್ಕರ್...

ಕಲಬುರಗಿ| ಕಲಾ ವಿಭಾಗದಲ್ಲಿ ಸೃಷ್ಟಿ ಮಲ್ಲಿನಾಥ ರಾಜ್ಯಕ್ಕೆ ಪ್ರಥಮ

ಕಲಬುರಗಿ: ಪ್ರಸಕ್ತ ದ್ವಿತೀಯ ಪಿ.ಯು.ಸಿ-1 ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಕಲಬುರಗಿಯ...