ಕಲಬುರಗಿ| ಪ್ರಾದೇಶಿಕ ಆಯುಕ್ತರಾಗಿ ಜಹೀರಾ ನಸೀಮ್ ಅಧಿಕಾರ ಸ್ವೀಕಾರ

Date:

Share post:

ಕಲಬುರಗಿ: ಕಲಬುರಗಿ ಕಂದಾಯ ವಿಭಾಗದ ನೂತನ ಪ್ರಾದೇಶಿಕ ಆಯುಕ್ತರಾಗಿ 2013ರ ಕರ್ನಾಟಕ ಕೇಡರ್ ಐ.ಎ.ಎಸ್ ಅಧಿಕಾರಿ ಜಹೀರಾ ನಸೀಮ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು.

ಪ್ರಾದೇಶಿಕ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ಕೃಷ್ಣ ಭಾಜಪೇಯಿ ಸ್ಥಾನಕ್ಕೆ ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಜಹೀರಾ ನಸೀಮ್ ಅವರನ್ನು ಸರ್ಕಾರ ಮಂಗಳವಾರ ವರ್ಗಾಯಿಸಿ ಆದೇಶ ಹೊರಡಿಸಿತ್ತು.

ಮೂಲತ ರಾಜ್ಯದ ಧಾರವಾಡ ಜಿಲ್ಲೆಯವರಾಗಿರುವ ಜಹೀರಾ ನಸೀಮ್ ಅವರು ಎಂ.ಎಸ್ಸಿ(ಎಂ.ಫಿಲ್) ಪದವೀಧರರಾಗಿದ್ದಾರೆ. ಧಾರವಾದ, ತರಿಕೆರೆ ಸಹಾಯಕ ಅಯುಕ್ತರಾಗಿ, ಹಾವೇರಿ ಅಪರ ಜಿಲ್ಲಾಧಿಕಾರಿಯಾಗಿ, ಬೀದರ ಜಿಲ್ಲಾ ಪಂಚಾಯತ್ ಸಿ.ಇ.ಓ, ನಗರ ಭೂ ಸಾರಿಗೆ ಇಲಾಖೆಯ ಜಂಟಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿರುವ ಇವರು, ಈ ಹಿಂದೆ ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕರ ನಿರ್ದೇಶಕರಾಗಿ ಮತ್ತು ಅಪರ ಪ್ರಾದೇಶಿಕ ಅಯುಕ್ತರಾಗಿ ಕಾರ್ಯನಿರ್ವಹಿಸಿದ್ದು, ಇದೀಗ ಮತ್ತೆ ತೊಗರಿ ನಾಡಿನ ಸೇವೆಗೆ ಮರಳಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...

ಕಲಬುರಗಿ| ಸರಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕಲಬುರಗಿ: ನಗರದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಫೌಜಿಯಾ...

ಕಲಬುರಗಿ| ಜಿಲ್ಲಾಧಿಕಾರಿಗಳಿಂದ ಸಿಟಿ ರೌಂಡ್: ರಸ್ತೆ ದುರಸ್ತಿ,‌ ಗುಂಡಿ ಮುಚ್ಚುವ ಕಾರ್ಯ ಪರಿಶೀಲನೆ

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮತ್ತು ಮಹಾನಗರ ಪಾಲಿಕೆ ಆಯುಕ್ತ ಅವಿನಾಶ...

ಕಲಬುರಗಿ| ಬಾಲ್ಯ ವಿವಾಹ, ಫೋಕ್ಸೋ ಪ್ರಕರಣಗಳ ಬಗ್ಗೆ ನಿಗಾವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ಸೂಚನೆ

ಕಲಬುರಗಿ: ಬಾಲ್ಯವಿವಾಹ ಮತ್ತು ಫೋಕ್ಸೋ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು...