ಕಲಬುರಗಿ| ಆಕರ್ಷಕ ಯೋಜನೆ ರೂಪಿಸಿ 800ಕ್ಕೂ ಹೆಚ್ಚು ಹೂಡಿಕೆದಾರರಿಗೆ ವಂಚಿಸಿದ ವ್ಯಕ್ತಿಯ ಬಂಧನ: ಪೊಲೀಸ್ ಕಮಿಷನರ್

Date:

Share post:

ಕಲಬುರಗಿ: ಸಾರ್ವಜನಿಕರಿಗಾಗಿ ವಿವಿಧ ಆಕರ್ಷಕ ಹೂಡಿಕೆಗಳ ಯೋಜನೆಗಳನ್ನು ರೂಪಿಸಿ, 800ಕ್ಕೂ ಹೆಚ್ಚು ಹೂಡಿಕೆದಾರರಿಗೆ ವಂಚಿಸಿ ತನ್ನ ರಾಜ್ಯಕ್ಕೆ ಪರಾರಿಯಾಗಿದ್ದ ಅಂತರ್ ರಾಜ್ಯ ವಂಚಕನ್ನು ಸಿ.ಇ.ಎನ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ ತಿಳಿಸಿದ್ದಾರೆ.

ನಗರದ ಪೊಲೀಸ್ ಆಯುಕ್ತಾಲಯದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತೆಲಂಗಾಣದ ರಂಗಾರೆಡ್ಡಿ ಮೂಲದ ನಿವಾಸಿಯಾಗಿರುವ ಎಮ್.ಡಿ ರಾಮಚಂದ್ರ ಚಾರಿ ಅಕುಲ್ ಅಲಿಯಾಸ್ ರಾಮು ಅಕುಲ್ ಚಾರಿ(58) ಎಂಬಾತನೆ ಬಂಧಿತ ಆರೋಪಿಯಾಗಿದ್ದು, ಈತ ಕಲಬುರಗಿ ನಗರದ ಅಕ್ಕಮಹಾದೇವಿ ಕಾಲೋನಿಯಲ್ಲಿನ ಆರ್ಕೆಡ್ ಬಿಲ್ಡಿಂಗ್‌ನಲ್ಲಿ ‘ವಿನಸ್ ಎಂಟರ್ ಪ್ರೈಜಸ್’ ಎಂಬ ಹೆಸರಿನ ಕಚೇರಿ ತೆರೆದು ವಿವಿಧ ಆಕರ್ಷಕ ಆನ್‌ಲೈನ್ ಹೂಡಿಕೆಗಳಿಂದ ಪ್ರತಿಶತ 15 ರಿಂದ 20 ರವರೆಗೆ ಲಾಭಾಂಶ ನೀಡುವುದಾಗಿ ಹೇಳಿ ವಂಚಿಸಿದ್ದಾನೆ ಎಂದರು.

ಆರೋಪಿ
ಬಂಧಿತ ಆರೋಪಿ

ಕಳೆದ ಮೇ 23 ರಂದು ಇಲ್ಲಿನ ಕೆ.ಹೆಚ್.ಬಿ ಅಕ್ಕಮಹಾದೇವಿ ಕಾಲೋನಿಯ ನಿವಾಸಿ ಉಲ್ಲಾಸ ಅಶೋಕ ನೇಲ್ಲಗಿ ಅವರು ನಗರದ ಸಿ.ಇ.ಎನ್ ಪೊಲೀಸ್ ಠಾಣೆಗೆ ನೀಡಿದ ದೂರಿನನ್ವಯ ಈ ಕುರಿತಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಈ ಕುರಿತು ತನಿಖೆ ಪ್ರಾರಂಭಿಸಿದಾಗ ರಾಮು ಅಕುಲ್ ಚಾರಿಯು ಮೂರು ಸ್ಕೀಮ್ ಗಳ ಯೋಜನೆ ತೋರಿಸಿ, ಕಲಬುರಗಿ, ಬೀದರ್, ವಿಜಯಪುರ ಜಿಲ್ಲೆಗಳಲ್ಲಿ ಒಟ್ಟು 800ಕ್ಕೂ ಹೆಚ್ಚು ಗ್ರಾಹಕರಿಗೆ ಅಧಿಕ ಲಾಭಾಂಶದ(ಅಧಿಕ ಬಡ್ಡಿದರ) ಆಸೆ ತೋರಿಸಿ ಮೋಸ ಮಾಡಿ ಪಕ್ಕದ ತೆಲಂಗಾಣದ ಹೈದರಾಬಾದ್ ನಲ್ಲಿ ತಲೆ ಮೆರೆಸಿಕೊಂಡಿದ್ದನು. ವಿಶೇಷ ತನಿಖಾ ತಂಡದಿಂದ ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಡಿಸಿಪಿ ಕನಿಕಾ ಸಿಕ್ರಿವಾಲ್ ಇದ್ದರು.

ಯಾವುದೇ ವ್ಯಕ್ತಿಗಳು ಅತ್ಯಂತ ಕಡಿಮೆ ಅವಧಿಯಲ್ಲಿ ಹಣ ಹೂಡಿಕೆ ಮಾಡಿಕೊಂಡು ಅತ್ಯಂತ ಕಡಿಮೆ ಸಮಯದಲ್ಲಿ ಹೆಚ್ಚಿನ ಹೆಚ್ಚಿನ ಲಾಭವನ್ನು (ಶೇ.15 ರಿಂದ 20 ರಷ್ಟು) ನೀಡಲು ಸಾಧ್ಯವಿಲ್ಲ. ಸಾರ್ವಜನಿಕರು ದುರಾಸೆ ಹಾಗೂ ಆಮೀಷಗಳಿಗೆ ಒಳಗಾಗದೇ, ಜಾಗೃತರಾಗಿರಬೇಕು. ಈ ರೀತಿಯ ಹೂಡಿಕೆ ಹಣದಿಂದ ಬರುವ ಲಾಭಾಂಶದಿಂದ ಹಣ ದುಪ್ಪಟ್ಟು ಮಾಡುವ ಹಾಗೂ ವಿವಿಧ ಸ್ಟೀಮ್ಗಳ ಹೆಸರಿನಲ್ಲಿ ಹೆಚ್ಚಿನ ಹಣ ಗಳಿಸುವ ಹಾಗೂ ಈ ರೀತಿಯ ಅಪರಾಧಗಳಲ್ಲಿ ಭಾಗಿಯಾಗುವಂತೆ ಪ್ರೇರೆಪಿಸುವ ವ್ಯಕ್ತಿಗಳು ಕಂಡು ಬಂದಲ್ಲಿ ಸ್ಥಳಿಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು.

_ಡಾ. ಶರಣಪ್ಪ ಎಸ್.ಡಿ. (ಕಮೀಷನ‌ರ್, ಕಲಬುರಗಿ)

Share post:

spot_imgspot_img

Popular

More like this
Related

ಕಲಬುರಗಿ| ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳ ವಿತರಣೆ

ಕಲಬುರಗಿ: ಹೌಸಿಂಗ್ ಆಂಡ್ ಅರ್ಬನ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ...

ಕಲಬುರಗಿ| ಲಾರಿ – ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು; ಇನ್ನೋರ್ವ ಗಂಭೀರ ಗಾಯ

ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್...

ಕಲಬುರಗಿ| ರಾಮನವಮಿ ಆಚರಣೆ; ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ

ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ...

ಕಲಬುರಗಿ| ಬೇಸಿಗೆಯ ಸವಾಲುಗಳ ಎದುರಿಸಲು ಸಿದ್ಧ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

ಕಲಬುರಗಿ: ಕಲಬುರಗಿ ಜಿಲ್ಲಾಡಳಿತವು ಬೇಸಿಗೆಯ ಸವಾಲುಗಳನ್ನು ಎದುರಿಸಲು ಸಂಪೂರ್ಣ ಸನ್ನದ್ಧವಾಗಿದ್ದು, ಸಾರ್ವಜನಿಕರು...