ಕಲಬುರಗಿ: ರಾಜ್ಯದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ಜುಲೈ 12 ರಂದು ಶನಿವಾರ ಮಧ್ಯಾಹ್ನ 12 ಗಂಟೆಗೆ ಕಲಬುರಗಿಗೆ ಆಗಮಿಸಿ, ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಸ್ತವ್ಯ ಮಾಡುವರು.
ಜುಲೈ 13 ರಂದು ಭಾನುವಾರ ಮಧ್ಯಾಹ್ನ 11.30 ಗಂಟೆಗೆ ಸೇಡಂ ತಾಲೂಕಿನ ಶಂಕರರಾಜಪುರ ಗ್ರಾಮದಲ್ಲಿ ಶ್ರೀ ರೇಣುಕಾ ಯಲ್ಲಮ್ಮ ದೇವಿ ಮೂರ್ತಿ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 12.30 ಗಂಟೆಗೆ ಸೇಡಂ ತಾಲೂಕಿನ ಟಿ. ಅರಬೊಮ್ಮನಳ್ಳಿ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆಯ ಎರಡು ಶಾಲಾ ಕೋಣೆಗಳ ಉದ್ಘಾಟನೆ ಹಾಗೂ ಸಿ.ಸಿ. ರಸ್ತೆ ಅಡಿಗಲ್ಲು ಸಮಾರಂಭದಲ್ಲಿ ಭಾಗವಹಿಸುವರು.
ಅಂದು ಮಧ್ಯಾಹ್ನ 3 ಗಂಟೆಗೆ ಶಿಲಾರಕೋಟ್ ಗ್ರಾಮದ ಸಾರ್ವಜನಿಕರ ಅಹವಾಲು ಸ್ವೀಕರಿಸುವರು. ಸಂಜೆ 4 ಗಂಟೆಗೆ ಮೇದಕ ಗ್ರಾಮದಲ್ಲಿ ಶ್ರೀ ಛತ್ರಪತಿ ಶಿವಾಜಿ ಮೂರ್ತಿ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಲಬುರಗಿಗೆ ಆಗಮಿಸಿ ವಾಸ್ತವ್ಯ ಮಾಡುವರು. ನಂತರ ಜುಲೈ 14 ರಂದು ಸೋಮವಾರ ಮಧ್ಯಾಹ್ನ 12.30 ಗಂಟೆಗೆ ಕಲಬುರಗಿಯಿಂದ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.


