ಕಲಬುರಗಿ| ಹಾವು ಕಚ್ಚಿ ಯುವ ರೈತ ಸಾವು

Date:

Share post:

ಕಲಬುರಗಿ: ಹಾವು ಕಚ್ಚಿ ಯುವ ರೈತನೋರ್ವ ಮೃತಪಟ್ಟಿರುವ ಘಟನೆ ಜೇವರ್ಗಿ ತಾಲ್ಲೂಕಿನ ನೆಲೋಗಿ ಗ್ರಾಮದಲ್ಲಿ ನಡೆದಿದೆ.

ಯಲ್ಲಾಲಿಂಗ ಬಸಪ್ಪ ಮಂದೇವಾಲ (22) ಮೃತ ರೈತ ಎಂದು ಗುರುತಿಸಲಾಗಿದೆ.

ಯುವ ರೈತ ಯಲ್ಲಾಲಿಂಗ, ಹೊಲದಲ್ಲಿ ಗದ್ದೆಗೆ ನೀರುಣಿಸುವುದನ್ನು ಮುಗಿದ ಬಳಿಕ ವಿಶ್ರಾಂತಿಗೆಂದು ಮಲಗಿದ್ದಾಗ ಹಾವು ಕಚ್ಚಿದೆ ಎಂದು ತಿಳಿದುಬಂದಿದೆ.

ಮೃತ ರೈತ ಯಲ್ಲಾಲಿಂಗನಿಗೆ ತಂದೆ ಇಲ್ಲದ ಕಾರಣ ಕುಟುಂಬಕ್ಕೆ 20 ಲಕ್ಷ ಪರಿಹಾರ ಘೋಷಣೆ ಮಾಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ನೆಲೋಗಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Share post:

spot_imgspot_img

Popular

More like this
Related

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...

ಕಲಬುರಗಿ| ಐರಾವತ – ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ; ಇಬ್ಬರು ಚಾಲಕರ ಮೃತ್ಯು

ಕಲಬುರಗಿ: ಐರಾವತ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ ಸಂಭವಿಸಿ...