ಕಲಬುರಗಿ| ಪಿ.ಇ.ಟಿ.ಸಿ ತರಬೇತಿ ಕೇಂದ್ರಕ್ಕೆ ಡಿ.ಸಿ. ಬಿ.ಫೌಜಿಯಾ ಭೇಟಿ

Date:

Share post:

ಕಲಬುರಗಿ: ಕಲಬುರಗಿ ನಗರದ ಅಟಲ್‌ ಬಿಹಾರಿ ವಾಜಪೇಯಿ ಬಡಾವಣೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ನಿರ್ಮಿಸಲಾಗುತ್ತಿರುವ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿ ಕೇಂದ್ರಕ್ಕೆ (ನೈಸ್ ಅಕಾಡೆಮಿ)ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಮಂಗಳವಾರ ಭೇಟಿ ನೀಡಿ, ಕಾಮಗಾರಿಯ ಅಂತಿಮ‌ ಹಂತದ ಕೆಲಸ ಕಾರ್ಯಗಳನ್ನು ಪರಿಶೀಲಿಸಿದರು.

ಉಳಿದ ಕಾಮಗಾರಿಗಳನ್ನು ಬೇಗ ಮುಗಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಕಾಮಗಾರಿ ಪೂರ್ಣಗೊಂಡಲ್ಲಿ ಇದನ್ನು ಲೋಕಾರ್ಪಣೆಗೊಳಿಸಿ ಪ್ರದೇಶದ ಯುವಕರಿಗೆ ಪರೀಕ್ಷಾ ಪೂರ್ವ ತರಬೇತಿ ಪಡೆಯಲು ಸಹಾಯವಾಗಲಿದೆ ಎಂದರು.

ಸುಮಾರು 10 ಕೋಟಿ ರೂ.‌ ವೆಚ್ಚದಲ್ಲಿ ತರಬೇತಿ ಕೇಂದ್ರ ನಿರ್ಮಾಣವಾಗುತ್ತಿದೆ. ತರಬೇತಿ ಕೇಂದ್ರದಲ್ಲಿ ಪ್ರಾರಂಭಿಕ 500 ರಿಂದ ಆರಂಭಿಸಿ ಗರಿಷ್ಠ ವಾರ್ಷಿಕ 2,000 ಜನ ವಿದ್ಯಾರ್ಥಿಗಳಿಗೆ ಐ.ಎ.ಎಸ್, ಐ.ಪಿ.ಎಸ್, ಕೆ.ಎ.ಎಸ್, ಬ್ಯಾಂಕಿಂಗ್ ಸೇರಿದಂತೆ ಇತರೆ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿ ಇಲ್ಲಿ ನೀಡಲಾಗುತ್ತಿದೆ. ಸಕಲ ಸೌಲಭ್ಯವುಳ್ಳ ಉತ್ತಮ‌ ಬೋಧನಾ ಕೊಠಡಿ, ಕಂಪ್ಯೂಟರ್ ಕೋಣೆ, ವಸತಿ ನಿಲಯಗಳನ್ನು ಇದು ಒಳಗೊಂಡಿದೆ.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೀತಿ ದೊಡ್ಡಮನಿ, ಕಲಬುರಗಿ ತಹಶೀಲ್ದಾರ ಕೆ. ಆನಂದಶೀಲ ಸೇರಿದಂತೆ ಮತ್ತಿತರ ಅಧಿಕಾರಿಗಳು ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಏ.15 ರಿಂದ 17ರ ವರೆಗೆ ಹೀಟ್ ವೇವ್ ಆರೆಂಜ್ ಅಲರ್ಟ್: ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ 

ಕಲಬುರಗಿ: ಕಲಬುರಗಿ ಜಿಲ್ಲೆಯಾದ್ಯಂತ ಇದೇ ಏಪ್ರೀಲ್ 15 ರಿಂದ 17ರ ವರೆಗೆ...

ಕಲಬುರಗಿ| ಅಂಬೇಡ್ಕರ್ ಜಯಂತಿ: ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ: ಡಿಸಿ ಆದೇಶ

ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಯಾವುದೇ ಅಹಿತಕರ...

ಕಲಬುರಗಿ| ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಡಾ.ಅಂಬೇಡ್ಕರ್ ಜಯಂತಿ

ಕಲಬುರಗಿ: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಾಬಾ ಸಾಹೇಬ ಅಂಬೇಡ್ಕರ್...

ಕಲಬುರಗಿ| ಕಲಾ ವಿಭಾಗದಲ್ಲಿ ಸೃಷ್ಟಿ ಮಲ್ಲಿನಾಥ ರಾಜ್ಯಕ್ಕೆ ಪ್ರಥಮ

ಕಲಬುರಗಿ: ಪ್ರಸಕ್ತ ದ್ವಿತೀಯ ಪಿ.ಯು.ಸಿ-1 ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಕಲಬುರಗಿಯ...