ಕಲಬುರಗಿ| ಚಿನ್ನದಂಗಡಿ ದರೋಡೆ ಪ್ರಕರಣ; ಮೂವರು ಅಂತರ್ ರಾಜ್ಯ ದರೋಡೆಕೋರರ ಬಂಧನ: ಪೊಲೀಸ್ ಕಮಿಷನರ್ 

Date:

Share post:

ಕಲಬುರಗಿ: ನಗರದ ಸರಾಫ್ ಬಝಾರ್ ಪ್ರದೇಶದಲ್ಲಿನ ಚಿನ್ನದಂಗಡಿಯೊಂದರಲ್ಲಿ ಅಂದಾಜು 3 ಕೋಟಿ ಮೌಲ್ಯದ ಬಂಗಾರದ ಆಭರಣಗಳನ್ನು ದರೋಡೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೂವರು ಅಂತರ್ ರಾಜ್ಯ ಆರೋಪಿಗಳನ್ನು ಬಂಧಿಸಿ, ಅವರ ಬಳಿ 2.865 ಕೆ.ಜಿ ಬಂಗಾರ ಹಾಗೂ 4.80 ಲಕ್ಷ ನಗದು ಹಣ ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ ಅವರು ತಿಳಿಸಿದ್ದಾರೆ.

ಸೋಮವಾರ ನಗರದ ಪೊಲೀಸ್ ಆಯುಕ್ತಾಲಯದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಶ್ಚಿಮ ಬಂಗಾಳದ ಗೋಪಾಲ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯ ನಿವಾಸಿ ಅಯೋಧ್ಯಾ ಪ್ರಸಾದ್ ಚವ್ಹಾಣ್ (48), ಇನ್ನೋರ್ವ ಅದೇ ರಾಜ್ಯದ ದಡಪೂರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ವಾಸವಿದ್ದು, ಬಂಗಾರ ವ್ಯಾಪಾರಿಯಾಗಿದ್ದ ಫಾರುಕ್ ಅಹಮದ್ ಮಲ್ಲಿಕ್(40) ಹಾಗೂ ಮಹಾರಾಷ್ಟ್ರದ ಮುಂಬೈ ನಗರದಲ್ಲಿ ಟೇಲರ್ ಆಗಿ ಕೆಲಸ ಮಾಡುತ್ತಿದ್ದ ಸೊಹೆಲ್ ಶೇಖ್ ಅಲಿಯಾಸ್ ಬಾದಶಾ(30) ಬಂಧಿತ ಆರೋಪಿಗಳಾಗಿದ್ದಾರೆ ಎಂದು ತಿಳಿಸಿದರು.

ಜುಲೈ 11 ರಂದು ನಗರದಲ್ಲಿ ಮಲ್ಲಿಕ್ ಜ್ಯುವೆಲ್ಸ್ ಮಳಿಗೆಯಲ್ಲಿ ಅಂದಾಜು 3 ಕೋಟಿ ಮೌಲ್ಯದ ಬಂಗಾರದ ಆಭರಣಗಳನ್ನು ದರೋಡೆ ಮಾಡಿರುವ ಪ್ರಕರಣ ರಾಜ್ಯದೆಲ್ಲೆಡೆ ಭಾರೀ ಸಂಚಲನ ಮೂಡಿಸಿತ್ತು. ಈ ಪ್ರಕರಣವನ್ನು ಬೇಧಿಸಲು ವಿವಿಧ ಠಾಣೆಗಳ ಪೊಲೀಸ್ ಅಧಿಕಾರಿ, ಸಿಬ್ಬಂದಿಯನ್ನು ಒಳಗೊಂಡ ಐದು ತನಿಖಾ ತಂಡಗಳನ್ನು ರಚಿಸಿ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ಮಹಾರಾಷ್ಟ್ರ, ತೆಲಂಗಾಣ ರಾಜ್ಯಗಳಲ್ಲಿ ಕಾರ್ಯಾಚರಣೆ ನಡೆಸಿ, ಇದಕ್ಕೂ ಮುನ್ನ ಹಲವು ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ದರೋಡೆಕೋರರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ, ಇನ್ನುಳಿದ ಕೆಲ ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದರು.

ಚೌಕ್ ಪೊಲೀಸ್ ಠಾಣೆಯ ಪಿಐ ರಾಘವೇಂದ್ರ, ಬ್ರಹ್ಮಪುರ ಪಿಐ ಸೋಮಲಿಂಗ, ಸಿಬಂದಿಯರಾದ ಶಿವಾನಂದ ವಾಲೀಕಾರ, ಬಂದೇ ನವಾಜ್ ಮತ್ತಿತರ ಒಳಗೊಂಡ ತನಿಖಾ ತಂಡ ಪಶ್ಚಿಮ ಬಂಗಾಳ ಹಾಗೂ ಉತ್ತರ ಪ್ರದೇಶಕ್ಕೆ ತೆರಳಿತ್ತು. ಈ ತಂಡ ಸೇರಿದಂತೆ ವಿವಿಧ 5 ತಂಡಗಳ ಶ್ರಮದಿಂದ ಆರೋಪಿಗಳನ್ನು ಹೆಡೆ ಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಪೊಲೀಸ್ ಕಮಿಷನರ್ ವಿವರಿಸಿದರು.

ಸುದ್ದಿಗೋಷ್ಟಿಯಲ್ಲಿ ಡಿಸಿಗಳಾದ ಕನಿಕಾ ಸಿಕ್ರಿವಾಲ್, ಪ್ರವೀಣ್ ನಾಯಕ್ ಸೇರಿದಂತೆ ತನಿಖಾ ತಂಡಗಳ ನೇತೃತ್ವ ವಹಿಸಿದ್ದ ಪೊಲೀಸ್ ಅಧಿಕಾರಿಗಳು ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ| ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳ ವಿತರಣೆ

ಕಲಬುರಗಿ: ಹೌಸಿಂಗ್ ಆಂಡ್ ಅರ್ಬನ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ...

ಕಲಬುರಗಿ| ಲಾರಿ – ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು; ಇನ್ನೋರ್ವ ಗಂಭೀರ ಗಾಯ

ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್...

ಕಲಬುರಗಿ| ರಾಮನವಮಿ ಆಚರಣೆ; ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ

ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ...

ಕಲಬುರಗಿ| ಬೇಸಿಗೆಯ ಸವಾಲುಗಳ ಎದುರಿಸಲು ಸಿದ್ಧ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

ಕಲಬುರಗಿ: ಕಲಬುರಗಿ ಜಿಲ್ಲಾಡಳಿತವು ಬೇಸಿಗೆಯ ಸವಾಲುಗಳನ್ನು ಎದುರಿಸಲು ಸಂಪೂರ್ಣ ಸನ್ನದ್ಧವಾಗಿದ್ದು, ಸಾರ್ವಜನಿಕರು...