ಕಲಬುರಗಿ| ಆಗಸ್ಟ್ 7 ರಂದು ಮೇಯರ್, ಉಪ ಮೇಯರ್ ಸ್ಥಾನಕ್ಕೆ ಚುನಾವಣೆ: ಜಹೀರಾ ನಸೀಮ್

Date:

Share post:

ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್ ಮತ್ತು ಉಪಮೇಯರ್ ಸ್ಥಾನಗಳಿಗೆ ಹಾಗೂ ನಾಲ್ಕು ಸ್ಥಾಯಿ ಸಮಿತಿಗಳಿಗೆ ಚುನಾವಣೆಯು 2025ರ ಆಗಸ್ಟ್ 7 ರಂದು ಮಧ್ಯಾಹ್ನ 12.30 ಗಂಟೆಗೆ ಕಲಬುರಗಿ ಮಹಾನಗರಪಾಲಿಕೆಯ ಇಂದಿರಾ ಸ್ಮಾರಕ ಭವನ (ಟೌನ್‍ಹಾಲ್)ದಲ್ಲಿ ಜರುಗಲಿದೆ ಎಂದು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಜಹೀರಾ ನಸೀಮ್ ಅವರು ತಿಳಿಸಿದ್ದಾರೆ.

ಮಹಾನಗರ ಪಾಲಿಕೆಯ ಮೇಯರ್ ಸ್ಥಾನವು “ಸಾಮಾನ್ಯ (ಮಹಿಳೆ)” ವರ್ಗಕ್ಕೆ ಹಾಗೂ ಉಪ ಮೇಯರ್ ಸ್ಥಾನವು “ಹಿಂದುಳಿದ ವರ್ಗ (ಬ)”ಕ್ಕೆ ಮೀಸಲಿಡಲಾಗಿದೆ. ನಾಲ್ಕು ಸ್ಥಾಯಿ ಸಮಿತಿಗಳಾದ ತೆರಿಗೆ ನಿರ್ಧರಣೆ ಹಣಕಾಸು ಮತ್ತು ಅಪೀಲುಗಳ ಸ್ಥಾಯಿ ಸಮಿತಿ, ಸಾರ್ವಜನಿಕ ಆರೋಗ್ಯ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ, ನಗರ ಯೋಜನೆ ಮತ್ತು ಸುಧಾರಣೆ ಸ್ಥಾಯಿ ಸಮಿತಿ ಹಾಗೂ ಲೆಕ್ಕಪತ್ರ ಸ್ಥಾಯಿ ಸಮಿತಿ ಸದಸ್ಯರ ಆಯ್ಕೆಗಾಗಿಯೂ ಇದೇ ಸಂದರ್ಭದಲ್ಲಿ ಚುನಾವಣೆ ಜರುಗಲಿದೆ.

Share post:

spot_imgspot_img

Popular

More like this
Related

ಕಲಬುರಗಿ| ನುಡಿದಂತೆ ನಡೆಯುವ ಸರ್ಕಾರ‌ ನಮ್ಮದು, ಇದೂವರೆಗೆ 243 ಭರವಸೆ ಈಡೇರಿಸಿದ್ದೇವೆ: ಸಿದ್ದರಾಮಯ್ಯ

ಕಲಬುರಗಿ: ಚುನಾವಣೆ ಪೂರ್ವ ನೀಡಿದ ಭರವಸೆಯಂತೆ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆ...

ಕಲಬುರಗಿ| ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಕಲಬುರಗಿ: "ನಮ್ಮ ಪಕ್ಷ ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನ...

ಕಲಬುರಗಿ| ಸುಗಮ ಆಡಳಿತಕ್ಕಾಗಿ ಪ್ರಜಾಸೌಧಗಳ ನಿರ್ಮಾಣ: ಡಾ.ಅಜಯ್ ಧರ್ಮಸಿಂಗ್

ಕಲಬುರಗಿ: ಸುಗಮ ಆಡಳಿತಕ್ಕಾಗಿ ಹೊಸ ತಾಲ್ಲೂಕುಗಳನ್ನು ಘೋಷಣೆ ಮಾಡಲಾಗಿದೆ. ಈ ಭಾಗದ...

ಕಲಬುರಗಿ| ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ನೇಮಕಾತಿ ಮಾಡಿ: ಮಲ್ಲಿಕಾರ್ಜುನ ಖರ್ಗೆ  

ಕಲಬುರಗಿ: ಕಲ್ಯಾಣ ಕರ್ನಾಟಕ ಶೈಕ್ಷಣಿಕವಾಗಿ ಹಿಂದುಳಿಯಲು ಮುಖ್ಯ ಕಾರಣ ಈ ಭಾಗದಲ್ಲಿ...