ಕಲಬುರಗಿ| ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ್ ಅವರ ಕಲಬುರಗಿ ಪ್ರವಾಸ

Date:

Share post:

ಕಲಬುರಗಿ: ರಾಜ್ಯದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ಜುಲೈ 25 ರಂದು ಶುಕ್ರವಾರ ಬೆಳಿಗ್ಗೆ 11.45 ಗಂಟೆಗೆ ಕಲಬುರಗಿಗೆ ಆಗಮಿಸುವರು.

ನಂತರ ಅಂದು ರಾತ್ರಿ 8 ಗಂಟೆಗೆ ಕಲಬುರಗಿಯ ಸೇಡಂ ರಸ್ತೆಯ ಬಸವೇಶ್ವರ ಆಸ್ಪತ್ರೆಯ ಎದುರುಗಡೆಯ ವಿದ್ಯಾನಗರದಲ್ಲಿ ವಿದ್ಯಾನಗರ ವೆಲ್‍ಫೇರ್ ಸೊಸೈಟಿ (ರಿ) ಇವರು ಆಯೋಜಿಸಿರುವ ಹಾನಗಲ್ಲ ಶ್ರೀ ಕುಮಾರ ಮಹಾಶಿವಯೋಗಿಗಳ ಪುರಾಣ ಪ್ರವಚನ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸುವರು. ನಂತರ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.

ಜುಲೈ 26 ರಂದು ಶನಿವಾರ ಬೆಳಿಗ್ಗೆ 11.30 ಗಂಟೆಗೆ ಬೆಡಗಪಳ್ಳಿ ಗ್ರಾಮದಲ್ಲಿ ಕೆ.ಕೆ.ಆರ್.ಡಿ.ಬಿ. ವತಿಯಿಂದ 2022-23ನೇ ಸಾಲಿನ ಮೆಗಾ ಮ್ಯಾಕ್ರೋ ಯೋಜನೆಯಡಿ ಸೇಡಂ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಚಿಂಚೋಳಿ ತಾಲೂಕಿನ ಪಂಚನಪಳ್ಳಿ ಗ್ರಾಮದಿಂದ ಬೆಡಗಪಳ್ಳಿ ಗ್ರಾಮದವರೆಗೆ ರಸ್ತೆ ನಿರ್ಮಾಣ ಕಾಮಗಾರಿಯ ಅಡಿಗಲ್ಲು ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ 1 ಗಂಟೆಗೆ ಸುಲೇಪೇಟ್‍ದ ಕಾಂಗ್ರೆಸ್ ಪಕ್ಷದ ಕಚೇರಿಗೆ ಹಾಗೂ ಮಧ್ಯಾಹ್ನ 3 ಗಂಟೆಗೆ ನಿಡಗುಂದಾ ಗ್ರಾಮಕ್ಕೆ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಕಲಬುರಗಿಗೆ ಆಗಮಿಸಿ ವಾಸ್ತವ್ಯ ಮಾಡುವರು.

 

ಜುಲೈ 27 ರಂದು ಭಾನುವಾರ ಬೆಳಿಗ್ಗೆ 8 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ಲಿಂಗಸೂರಿಗೆ ಪ್ರಯಾಣಿಸಿ, ನಿಗದಿತ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಅಂದು ಸಂಜೆ 5.30 ಗಂಟೆಗೆ ಲಿಂಗಸೂರಿನಿಂದ ಮರಳಿ ಕಲಬುರಗಿಗೆ ಆಗಮಿಸಿ ವಾಸ್ತವ್ಯ ಮಾಡುವರು. ಜುಲೈ 28 ರಂದು ಸೋಮವಾರ ಕಲಬುರಗಿ ಹಾಗೂ ಸೇಡಂದಲ್ಲಿ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.

 

ಜುಲೈ 29 ರಂದು ಮಂಗಳವಾರ ಬೆಳಿಗ್ಗೆ 11.30 ಗಂಟೆಗೆ ಶ್ರೀ ಶರಣಬಸವ ವಿಶ್ವವಿದ್ಯಾಲಯದ 8ನೇ ಸಂಸ್ಥಾಪನಾ ದಿನಾಚರಣೆ ಹಾಗೂ international conference on multidisciplinary research 2025 (ICMR-2025) ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ, ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು. ಜುಲೈ 30 ರಂದು ಬುಧವಾರ ಮಧ್ಯಾಹ್ನ 12.10 ಗಂಟೆಗೆ ಕಲಬುರಗಿಯಿಂದ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.

Share post:

spot_imgspot_img

Popular

More like this
Related

ಕಲಬುರಗಿ| ಜಿಲ್ಲೆಯಾದ್ಯಂತ ಮತದಾರರ ವಿಶೇಷ ಮಿಂಚಿನ ನೋಂದಣಿ ಅಭಿಯಾನ: ಬಿ.ಫೌಜಿಯಾ ತರನ್ನುಮ್

ಕಲಬುರಗಿ: ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಈಗಾಗಲೇ...

ಕಲಬುರಗಿ| ಸಿಲಿಂಡರ್ ಸ್ಫೋಟ; ಅದೃಷ್ಟವಶಾತ್ ನಾಲ್ವರು ಪಾರು

ಕಲಬುರಗಿ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯಲ್ಲಿದ್ದ ಚಿನ್ನಾಭರಣ, ನಗದು ಹಣ ಸೇರಿದಂತೆ...

ಕಲಬುರಗಿ| ದಾರಿದ್ರ್ಯ ರಹಿತ ಸಮಾಜ ನಮ್ಮೆಲ್ಲರ ಕನಸು: ಡಾ.ಜ್ಯೋತಿ.ಕೆ.ಎಸ್

ಕಲಬುರಗಿ: ನಗರದ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ...

ಕಲಬುರಗಿ| ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ

ಕಲಬುರಗಿ: ನೈಸರ್ಗಿಕ ಸಂಪತನ್ನು ಹಿತ-ಮಿತವಾಗಿ ಬಳಕೆ ಮಾಡದೆ ಮಾನವ ದುರಾಸೆಯಿಂದ ಅವ್ಯಾಹತವಾಗಿ...