ಕಲಬುರಗಿ| ಬಿ.ಇಡಿ ಪದವಿ ಹೊಂದದ ಉಪನ್ಯಾಸಕರಿಗೆ ವೇತನ ಸಹಿತ ಬಿ.ಇಡಿ ವ್ಯಾಸಂಗಕ್ಕೆ ಸರ್ಕಾರ ಅನುಮತಿ: ನಮೋಶಿ ಹರ್ಷ

Date:

Share post:

ಕಲಬುರಗಿ: ರಾಜ್ಯದ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ 04-02-2008ರ ನಂತರ ನೇಮಕಗೊಂಡು ಅನುದಾನಕ್ಕೆ ಒಳಪಟ್ಟ 364 ಬಿ.ಇಡಿ ಪದವಿ ಹೊಂದದ್ದ ಉಪನ್ಯಾಸಕರು ವೇತನ ಸಹಿತ ವ್ಯಾಸಂಗ ಕೈಗೊಳ್ಳಲು ಶಾಲಾ ಶಿಕ್ಷಣ ಇಲಾಖೆ ಅನುಮತಿ ನೀಡಿ ಆದೇಶ ಹೊರಡಿಸಿದೆ ಎಂದು ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ. ನಮೋಶಿ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಈ ಒಂದು ಆದೇಶದಿಂದ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಬಿ.ಇಡಿ ರಹಿತವಾಗಿ ಕಾರ್ಯನಿರ್ವಹಿಸುತ್ತಿರುವ 364 ಉಪನ್ಯಾಸಕರು ನಿಟ್ಟುಸಿರು ಬಿಡುವಂತಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಉಪನ್ಯಾಸಕರಾಗಿ ಸುಮಾರು 15 ವರ್ಷ ಸೇವೆ ಸಲ್ಲಿಸಿ ತದನಂತರ ವೇತನ ರಹಿತವಾಗಿ 2 ವರ್ಷ ಬಿ.ಇಡಿ ಪದವಿ ವ್ಯಾಸಂಗಕ್ಕೆ ಹೋಗುವುದೆಂದರೆ ಅವರ ಇಡೀ ಕುಟುಂಬವನ್ನು ಅರ್ಥಿಕ ದುಸ್ಥಿತಿಗೆ ತಳ್ಳಿದಂತಾಗುತ್ತಿತ್ತು. ಅಲ್ಲದೆ, ಇದು ಅಸಾಧ್ಯದ ಮಾತಾಗಿತ್ತು. ಈ ಎಲ್ಲ ಸಮಸ್ಯೆಗಳನ್ನು ಪದವೀಧರ ಮತಕ್ಷೇತ್ರ ಮತ್ತು ಶಿಕ್ಷಕರ ಮತಕ್ಷೇತ್ರಗಳಿಂದ ಆಯ್ಕೆಯಾದ ಎಲ್ಲಾ ವಿಧಾನ ಪರಿಷತ್ ಸದಸ್ಯರು ಹಾಗೂ ಉಪನ್ಯಾಸಕರ ಸಂಘಟನೆಯವರು ಮುಖ್ಯಮಂತ್ರಿಗಳ ಹಾಗೂ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಣ ಇಲಾಖೆ ಸಚಿವರ ಗಮನಕ್ಕೆ ತಂದು ಒತ್ತಡ ಹೇರಿದ ಪರಿಣಾಮವಾಗಿ ಸರ್ಕಾರ ಈ ಒಳ್ಳೆಯ ನಿರ್ಣಯ ಕೈಗೊಂಡಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಈ ಹಿಂದೆ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಬಿ.ಇಡಿ. ಪದವಿ ಹೊಂದದೆ ನೇಮಕಗೊಂಡ ಉಪನ್ಯಾಸಕರಿಗೆ 2 ಬ್ಯಾಚುಗಳಲ್ಲಿ ವೇತನ ಸಹಿತ ಬಿ.ಇಡಿ ವ್ಯಾಸಂಗ ಕೈಗೊಳ್ಳಲು ಅನುಮತಿ ನೀಡಿತ್ತು. ಆದಾದ ನಂತರ ಜೆ.ಓ.ಸಿ. ಕೋರ್ಸ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಿ.ಇಡಿ ರಹಿತ ಉಪನ್ಯಾಸಕರಿಗೂ ಕೂಡ ವೇತನ ಸಹಿತ ವ್ಯಾಸಂಗ ಮಾಡಿಕೊಂಡು ಬರಲು ಅನುಮತಿ ನೀಡಿದ ಮಾದರಿಯಲ್ಲಿಯೇ ಈಗ ಸರ್ಕಾರ ಆದೇಶ ಹೊರಡಿಸಿರುವುದು ಉಪನ್ಯಾಸಕರಿಗೆ ಸಂತಸ ತಂದಿದೆ ಎಂದಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳ ವಿತರಣೆ

ಕಲಬುರಗಿ: ಹೌಸಿಂಗ್ ಆಂಡ್ ಅರ್ಬನ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ...

ಕಲಬುರಗಿ| ಲಾರಿ – ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು; ಇನ್ನೋರ್ವ ಗಂಭೀರ ಗಾಯ

ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್...

ಕಲಬುರಗಿ| ರಾಮನವಮಿ ಆಚರಣೆ; ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ

ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ...

ಕಲಬುರಗಿ| ಬೇಸಿಗೆಯ ಸವಾಲುಗಳ ಎದುರಿಸಲು ಸಿದ್ಧ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

ಕಲಬುರಗಿ: ಕಲಬುರಗಿ ಜಿಲ್ಲಾಡಳಿತವು ಬೇಸಿಗೆಯ ಸವಾಲುಗಳನ್ನು ಎದುರಿಸಲು ಸಂಪೂರ್ಣ ಸನ್ನದ್ಧವಾಗಿದ್ದು, ಸಾರ್ವಜನಿಕರು...