ಕಲಬುರಗಿ| ಜನ್ಮ ನೀಡಿದ ಕ್ಷಣದಲ್ಲೇ ತಾಯಿ ಸಾವು; ವೈದ್ಯರ ನಿರ್ಲಕ್ಷ್ಯ ಆರೋಪ

Date:

Share post:

ಕಲಬುರಗಿ: ಗಂಡು ಮಗು ಜನಿಸಿದ ಕೆಲವೇ ಕ್ಷಣಗಳಲ್ಲಿ ತಾಯಿ ಮೃತಪಟ್ಟಿರುವ ಘಟನೆ ರವಿವಾರ ಜಿಮ್ಸ್ ಆಸ್ಪತ್ರೆಯಲ್ಲಿ ನಡೆದಿದ್ದು, ವೈದ್ಯರ ನಿರ್ಲಕ್ಷ್ಯವೇ ತಾಯಿ ಮೃತಪಟ್ಟಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಜೇವರ್ಗಿ ತಾಲ್ಲೂಕಿನ ನರಿಬೋಳ ಗ್ರಾಮದ ಶ್ರಿದೇವಿ (22) ಮೃತ ದುರ್ದೈವಿ ಎಂದು ತಿಳಿದುಬಂದಿದೆ.

ನಿನ್ನೆ(ಶನಿವಾರ) ರಾತ್ರಿ ಹೆರಿಗೆಗೆಂದು ಜಿಮ್ಸ್ ದಾಖಲಾಗಿದ್ದ ಶ್ರಿದೇವಿ ಅವರಿಗೆ ರವಿವಾರ ಬೆಳಗ್ಗೆ ಸರಳ ಹೆರಿಗೆಯಾಗಿ ಗಂಡು ಮಗು ಜನಿಸಿತ್ತು. ಆದರೆ ಮಗು ಜನಿಸಿದ ಕೆಲವೇ ಕ್ಷಣಗಳಲ್ಲಿ ಲೋ ಬಿಪಿಯಾಗುತ್ತಿದೆ ಎಂದು ವೈದ್ಯರು ಹೇಳಿದ್ದರು ಎನ್ನಲಾಗಿದೆ.

ವೈದ್ಯರ ನಿರ್ಲಕ್ಷ್ಯಕ್ಕೆ ನನ್ನ ಪತ್ನಿ ಸಾವನ್ನಪ್ಪಿದ್ದಾಳೆ, ಸರಿಯಾದ ಚಿಕಿತ್ಸೆ ನೀಡಿದರೆ ಪತ್ನಿ ಬದುಕಿರುತ್ತಿದ್ದಳು ಎಂದು ಪತಿ ಹಾಗೂ ಮೃತಳ ಕುಟುಂಬಸ್ಥರು ಜಿಮ್ಸ್ ವೈದ್ಯರ ವಿರುದ್ದ ಆರೋಪ ಮಾಡಿದ್ದಾರೆ.

Share post:

spot_imgspot_img

Popular

More like this
Related

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...

ಕಲಬುರಗಿ| ಐರಾವತ – ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ; ಇಬ್ಬರು ಚಾಲಕರ ಮೃತ್ಯು

ಕಲಬುರಗಿ: ಐರಾವತ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ ಸಂಭವಿಸಿ...