ಕಲಬುರಗಿ| ಅಮಿಷದ ಒತ್ತಡಕ್ಕೆ ಒಳಗಾಗಿ ಮಾರಾಟಕ್ಕೆ ಬಲಿಯಾಗಬೇಡಿ: ನ್ಯಾ. ಸುಮನ್ ಚಿತ್ತರಗಿ 

Date:

Share post:

ಕಲಬುರಗಿ: ಅಮಿಷದ ಒತ್ತಡಕ್ಕೆ ಒಳಗಾಗಿ ಯಾವುದೇ ವ್ಯಕ್ತಿ ಮಾನವ ಕಳ್ಳ ಸಾಗಾಣಿಕೆಗೆ ಬಲಿಯಾಗಬಾರದು. ಕಾನೂನು ಅರಿವಿನ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸುವುದು ಅತೀ ಮುಖ್ಯವಾಗಿದೆ. ಈ ದಿಶೆಯಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು,” ಎಂದು ಸ್ಥಳೀಯ ಪ್ರಧಾನ ಸಿವಿಲ್ ನ್ಯಾಯಾಧೀಶೆ ಹಾಗೂ ಜೆಎಂಎಫ್‌ಸಿ ಸದಸ್ಯ ಕಾರ್ಯದರ್ಶಿ ಕುಮಾರಿ ಸುಮನ್ ಚಿತರಗಿ ಅವರು ಹೇಳಿದರು.

ಆಳಂದ ಪಟ್ಟಣದ ಸರ್ಕಾರಿ ಕನ್ಯಾ ಪ್ರೌಢಶಾಲೆಯಲ್ಲಿ ಬುಧವಾರ ಕರ್ನಾಟಕ ಸರ್ಕಾರದ “ನ್ಯಾಯ ನಿಮ್ಮದು, ನೆರವು ನಮ್ಮದು” ಯೋಜನೆಯಡಿ ತಾಲೂಕು ಕಾನೂನು ಸೇವಾ ಸಮಿತಿ, ಆಳಂದ ನ್ಯಾಯವಾದಿಗಳ ಸಂಘ, ಮತ್ತು ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ಮಾನವ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆಯ ಅಂಗವಾಗಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಮತ್ತು ಸ್ಥಳೀಯ ಸಮುದಾಯದಲ್ಲಿ ಕಾನೂನು ಅರಿವು ಮೂಡಿಸುವ ದಿಶೆಯಲ್ಲಿ ಮಹತ್ವದ ಹೆಜ್ಜೆಯಾಗಿದೆ. ಮಾನವ ಕಳ್ಳ ಸಾಗಾಣಿಕೆಯ ವಿರುದ್ಧ ಜಾಗೃತಿ ಮೂಡಿಸುವ ಈ ಪ್ರಯತ್ನವು ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ವಕೀಲ ಎಂ.ವಿ ಏಕೋಟೆ ಅವರು, ಮಾನವ ಕಳ್ಳ ಸಾಗಾಣಿಕೆಯ ಗಂಭೀರ ಸ್ವರೂಪ ಮತ್ತು ಅದನ್ನು ತಡೆಗಟ್ಟಲು ಕೈಗೊಳ್ಳಬಹುದಾದ ಕಾನೂನು ಕ್ರಮಗಳ ತಿಳಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ವಿದ್ಯಾರ್ಥಿಗಳಿಗೆ ಮತ್ತು ಉಪಸ್ಥಿತರಿಗೆ ವಿವರವಾಗಿ ಹೇಳಿದರು.

“ಮಾನವ ಕಳ್ಳ ಸಾಗಾಣಿಕೆಯು ಮಾನವ ಹಕ್ಕುಗಳ ಒಡ್ಡೋಲಗದ ಗಂಭೀರ ಉಲ್ಲಂಘನೆಯಾಗಿದೆ. ಇದನ್ನು ತಡೆಗಟ್ಟಲು ಸಮಾಜದ ಎಲ್ಲ ವರ್ಗಗಳು ಒಂದಾಗಿ ಕೆಲಸ ಮಾಡಬೇಕು,” ಎಂದು ಅವರು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯ ಶಿಕ್ಷಕ ಶ್ರೀಮಂತ ಹತ್ತರಕಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಕಮಲಾಕರ್ ವಿ. ರಾಥೋಡ್, ಸರ್ಕಾರಿ ವಕೀಲ ಇಸ್ಮಾಯಿಲ್ ಪಟೇಲ್ ಮತ್ತು ಜ್ಯೋತಿ ಬಂಡಿ, ನ್ಯಾಯವಾದಿ ಸಂಘದ ಕಾರ್ಯದರ್ಶಿ ಬಲಭೀಮ ಟಿ. ಸಿಂಧೆ, ನ್ಯಾಯವಾದಿ ದೇವಾನಂದ ಹೋದಲರಕರ್, ಸ್ವಾಮಿರಾವ್ ಚನ್ನಗುಂಡ, ಬಿ.ಐ ಶಿರೋಳೆ, ತಯಬ್ ಅಲಿ ಜರ್ದಿ ಮತ್ತು ಶಾಲೆಯ ಸಹ ಶಿಕ್ಷಕ ಬಸವರಾಜ ಪಾಟೀಲ, ಪದ್ಮಜಾ ಕಟಕೆ, ಶೈನಜ್ ಬೇಗಂ, ಆಸ್ಮಾ ಆಲಂ, ಆಸ್ಮಾ ಜೆಬೀನ್, ಮೇÀರುನಿಸಾ ಬೇಗಂ, ಶಾಹೀನ್ ಬೇಗಂ, ದಶರತ ಕಠಾರೆ, ದೇವಿಂದ್ರಪ್ಪ ಗೋಳಾ, ಮಹಾಂತಪ್ಪ ಬೊಪರೆಡ್ಡಿ, ಪ್ರಶಾಂತ ಪಾಟೀಲ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ನ್ಯಾಯವಾದಿ ಸುಧೀರ್ ಪಡಶೆಟ್ಟಿ ನಿರೂಪಿಸಿದರು. ಶಿಕ್ಷಕ ಮಲ್ಲಿನಾಥ್ ಖಜೂರಿ ಸ್ವಾಗತಿಸಿದರು, ನ್ಯಾಯವಾದಿ ಕಲ್ಯಾಣಿ ಶೇರಿಕಾರ ವಂದಿಸಿದರು.

Share post:

spot_imgspot_img

Popular

More like this
Related

ಕಲಬುರಗಿ| ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳ ವಿತರಣೆ

ಕಲಬುರಗಿ: ಹೌಸಿಂಗ್ ಆಂಡ್ ಅರ್ಬನ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ...

ಕಲಬುರಗಿ| ಲಾರಿ – ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು; ಇನ್ನೋರ್ವ ಗಂಭೀರ ಗಾಯ

ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್...

ಕಲಬುರಗಿ| ರಾಮನವಮಿ ಆಚರಣೆ; ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ

ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ...

ಕಲಬುರಗಿ| ಬೇಸಿಗೆಯ ಸವಾಲುಗಳ ಎದುರಿಸಲು ಸಿದ್ಧ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

ಕಲಬುರಗಿ: ಕಲಬುರಗಿ ಜಿಲ್ಲಾಡಳಿತವು ಬೇಸಿಗೆಯ ಸವಾಲುಗಳನ್ನು ಎದುರಿಸಲು ಸಂಪೂರ್ಣ ಸನ್ನದ್ಧವಾಗಿದ್ದು, ಸಾರ್ವಜನಿಕರು...