ಕಲಬುರಗಿ| ಗ್ರಾಮ ಪಂಚಾಯತಿ ಅಧಿಕಾರಿ, ಸಿಬ್ಬಂದಿ ಕೌನ್ಸಿಲ್ ಪ್ರಕ್ರಿಯೆ ಪೂರ್ಣ: ಸಚಿವ ಪ್ರಿಯಾಂಕ್ ಖರ್ಗೆ

Date:

Share post:

ಕಲಬುರಗಿ: 2024–25ನೇ ಸಾಲಿನ ಆಯವ್ಯಯ ಘೋಷಣೆಯಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆಯು ಮೊದಲ ಬಾರಿಗೆ ರಾಜ್ಯದ 31 ಜಿಲ್ಲೆಗಳಲ್ಲಿನ ಗ್ರಾಮ ಪಂಚಾಯತಿಗಳ ಕಾರ್ಯದರ್ಶಿ ಗ್ರೇಡ್- 1 ಮತ್ತು ಗ್ರೇಡ್-2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆ ಪ್ರಕ್ರಿಯೆಯನ್ನು ಆನ್‌ಲೈನ್‌ ಕೌನ್ಸಿಲಿಂಗ್ ಮೂಲಕ ಕೈಗೊಂಡು ಯಶಸ್ವಿಯಾಗಿ ಪೂರ್ಣಗೊಳಿಸಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿರುವ ಅವರು, ವರ್ಗಾವಣೆ ಪ್ರಕ್ರಿಯೆಯಲ್ಲಿ 31 ಜಿಲ್ಲೆಗಳಲ್ಲಿನ ಒಟ್ಟು 2,697 ನೌಕರರಿಂದ ವರ್ಗಾವಣೆಗಾಗಿ ಅರ್ಜಿಗಳು ಸ್ವೀಕೃತವಾಗಿದ್ದವು. ಇವುಗಳಲ್ಲಿ ನೌಕರರು ಸಲ್ಲಿಸಿದ ಅರ್ಜಿಗಳನ್ನು ಪರಿಶೀಲಿಸಿ ಅರ್ಹತೆ ಹೊಂದಿದ 1,300 ನೌಕರರಿಗೆ ಆನ್‌ಲೈನ್ ಮೂಲಕ ಕೌನ್ಸೆಲಿಂಗ್ ನಡೆಸಿದ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಡಿಜಿಟಲ್‌ ಸಹಿ ಮಾಡಿದ ವರ್ಗಾವಣೆ ಆದೇಶಗಳನ್ನು ಸ್ಥಳದಲ್ಲೇ ನೌಕರರಿಗೆ ನೀಡಲಾಗಿದೆ.

ಮೊದಲ ಸುತ್ತು ಹಾಗೂ ಎರಡನೇ ಸುತ್ತಿನಲ್ಲಿ ವಿಶೇಷ ಪ್ರಕರಣಗಳಾದ ಗಂಭೀರ ಅನಾರೋಗ್ಯ (Serious Ailments), ವಿಶೇಷಚೇತನರು ಹಾಗೂ ಪತಿ-ಪತ್ನಿ ಪ್ರಕರಣಗಳ ವರ್ಗಾವಣೆ ಕೌನ್ಸೆಲಿಂಗ್ ಅನ್ನು ಜುಲೈ 25ರಂದು ನಡೆಸಿ 161 ನೌಕರರಿಗೆ ಹಾಗೂ ಎರಡನೆಯ ಹಂತದಲ್ಲಿ ಸಾಮಾನ್ಯ ಕೋರಿಕೆ ಪ್ರಕರಣಗಳ 619 ನೌಕರರಿಗೆ ಜುಲೈ 28ರಂದು ಹಾಗೂ ಕೊನೆಯ ಹಂತದಲ್ಲಿ ಕಡ್ಡಾಯ ವರ್ಗಾವಣೆ ಕೌನ್ಸೆಲಿಂಗ್ ಅನ್ನು ಜುಲೈ 29 ಮತ್ತು 30ರಂದು ಕೈಗೊಂಡು 520 ನೌಕರರಿಗೆ ಡಿಜಿಟಲ್‌ ಸಹಿ ಇರುವ ವರ್ಗಾವಣೆ ಆದೇಶಗಳನ್ನು ವಿತರಿಸಲಾಯಿತು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆಯು ಮೊದಲ ಬಾರಿಗೆ ವರ್ಗಾವಣೆ ಪ್ರಕ್ರಿಯೆಯನ್ನು ಆನ್‌ಲೈನ್‌ ಕೌನ್ಸೆಲಿಂಗ್ ಮೂಲಕ ಯಶಸ್ವಿಯಾಗಿ ನಡೆಸಿ, ಆಡಳಿತದಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳುವ ಜೊತೆಗೆ ದಕ್ಷತೆ ಹೆಚ್ಚಿಸುವ ನಿಟ್ಟಿನಲ್ಲಿ ಹೆಜ್ಜೆ ಇರಿಸಿದೆ ಎಂದು ತಿಳಿಸಿದರು.

Share post:

spot_imgspot_img

Popular

More like this
Related

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...

ಕಲಬುರಗಿ| ಸರಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕಲಬುರಗಿ: ನಗರದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಫೌಜಿಯಾ...

ಕಲಬುರಗಿ| ಜಿಲ್ಲಾಧಿಕಾರಿಗಳಿಂದ ಸಿಟಿ ರೌಂಡ್: ರಸ್ತೆ ದುರಸ್ತಿ,‌ ಗುಂಡಿ ಮುಚ್ಚುವ ಕಾರ್ಯ ಪರಿಶೀಲನೆ

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮತ್ತು ಮಹಾನಗರ ಪಾಲಿಕೆ ಆಯುಕ್ತ ಅವಿನಾಶ...

ಕಲಬುರಗಿ| ಬಾಲ್ಯ ವಿವಾಹ, ಫೋಕ್ಸೋ ಪ್ರಕರಣಗಳ ಬಗ್ಗೆ ನಿಗಾವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ಸೂಚನೆ

ಕಲಬುರಗಿ: ಬಾಲ್ಯವಿವಾಹ ಮತ್ತು ಫೋಕ್ಸೋ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು...