ಕಲಬುರಗಿ| ಸಾರಿಗೆ ನೌಕರರ ಮುಷ್ಕರ: ಕಲಬುರಗಿಯಲ್ಲಿ ಪರದಾಡಿದ ಪ್ರಯಾಣಿಕರು

Date:

Share post:

ಕಲಬುರಗಿ: ವೇತನ ಪರಿಷ್ಕರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸಾರಿಗೆ ನೌಕರರು ಮಂಗಳವಾರ ಕರೆ ನೀಡಿದ್ದ ಮುಷ್ಕರದ ಹಿನ್ನೆಲೆ ಸಾರಿಗೆ ಬಸ್‌ಗಳ ಸಂಚಾರದಲ್ಲಿ ವ್ಯತ್ಯವಾಗಿದೆ. ಹಾಗಾಗಿ ಕಲಬುರಗಿ ನಗರ ಸೇರಿದಂತೆ ವಿವಿಧ ತಾಲೂಕುಗಳಲ್ಲಿ ಬಸ್ ಸಂಚಾರವಿಲ್ಲದೆ ಪ್ರಯಾಣಿಕರು ಪರದಾಡಿರುವ ದೃಶ್ಯಗಳು ಕಾಣಿಸಿವೆ.

ನಗರದ ಕೇಂದ್ರ ಬಸ್ ನಿಲ್ದಾಣ, ಶಹಾಬಝಾರ್ ನಾಕಾ, ಸೂಪರ್ ಮಾರ್ಕೆಟ್, ಗಂಜ್ ಪ್ರದೇಶ ಸೇರಿದಂತೆ ಇತರೆ ಕಡೆಗಳಲ್ಲಿ ಬಸ್ ಗಳು ರಸ್ತೆಗೆ ಇಳಿಯದೆ ಇರುವುದರಿಂದ ಪ್ರಯಾಣಿಕರು ಖಾಸಗಿ ಬಸ್, ಹಾಗೂ ನಗರ ಸಂಚಾರಕ್ಕೆ ಆಟೋಗಳನ್ನು ಅವಲಂಬಿಸಿರುವುದು ಎಲ್ಲೆಡೆ ಗಮನ ಸೆಳೆಯಿತು.

  ಬಸ್‌ಗಳ ಕೊರತೆಯಿಂದ ಕೇಂದ್ರ ಬಸ್ ನಿಲ್ದಾಣದಲ್ಲಿ ಪರದಾಡಿದ ಕೆಲ ಪ್ರಯಾಣಿಕರು ಖಾಸಗಿ ವಾಹನಗಳತ್ತ ಮೊರೆ ಹೋಗಿ ತಮ್ಮ ಊರುಗಳತ್ತ ಪ್ರಯಾಣ ಬೆಳೆಸಿದರು.

ಬೆಂಗಳೂರು, ಹೈದ್ರಾಬಾದ್, ಬಳ್ಳಾರಿ, ಹುಬ್ಬಳ್ಳಿ, ಸೇರಿದಂತೆ ವಿವಿಧ ಕಡೆಗಳಿಂದ ಬಸ್ ಹಾಗೂ ರೈಲುಗಳ ಮೂಲಕ ಬೆಳ್ಳಂಬೆಳಗ್ಗೆ ನಗರಕ್ಕೆ ಬಂದಿಳಿದ ಪ್ರಯಾಣಿಕರು ತಮ್ಮ ಊರುಗಳಿಗೆ ತೆರಳಲು ಹರಸಾಹಸಪಟ್ಟರು.

ಇಲ್ಲಿನ ಕೇಂದ್ರ ಬಸ್‌ ನಿಲ್ದಾಣಕ್ಕೆ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್‌.ಡಿ. ಅವರು ಭೇಟಿ ನೀಡಿ ಮುಷ್ಕರ ಹಾಗೂ ಪ್ರಯಾಣಿಕರ ಸಂಚಾರದ ಕುರಿತು ಮಾಹಿತಿ ಪಡೆದರು.

ಈ ಕುರಿತು ಪ್ರತಿಕ್ರಿಯಿಸಿದ ಸಾರಿಗೆ ಸಂಸ್ಥೆಯ ಕಲಬುರಗಿ ವಿಭಾಗ-2ರ ಅಧಿಕಾರಿಯಾದ ಎಸ್‌.ಜಿ.ಗಂಗಾಧರ, ‘ಮುಷ್ಕರ ನಿರತ ಸಿಬ್ಬಂದಿಗೆ ಕೆಲಸಕ್ಕೆ ಬರುವಂತೆ ಮನವಿ ಮಾಡಿದ್ದೆವು. ನಮ್ಮ ಕಲಬುರಗಿ ವಿಭಾಗದಲ್ಲಿ ಒಟ್ಟು ಐದು ಡಿಪೊಗಳಿದ್ದು, ನಿತ್ಯ ಬೆಳಿಗ್ಗೆ ಎಂಟು ಗಂಟೆವರೆಗೆ 250ಕ್ಕೂ ಹೆಚ್ಚು ಬಸ್‌ಗಳು ರಸ್ತೆಗೆ ಇಳಿಯುತ್ತಿದ್ದವು. ಆದರೆ ಮುಷ್ಕರದ ಬಿಸಿಯಲ್ಲಿ ಮಂಗಳವಾರ ಕೇವಲ 20ರಿಂದ 25 ಬಸ್‌ಗಳು ಮಾತ್ರವೇ ರಸ್ತೆಗಿಳಿದಿವೆ’ ಎಂದು ಹೇಳಿದರು.

Share post:

spot_imgspot_img

Popular

More like this
Related

ಕಲಬುರಗಿ| ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳ ವಿತರಣೆ

ಕಲಬುರಗಿ: ಹೌಸಿಂಗ್ ಆಂಡ್ ಅರ್ಬನ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ...

ಕಲಬುರಗಿ| ಲಾರಿ – ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು; ಇನ್ನೋರ್ವ ಗಂಭೀರ ಗಾಯ

ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್...

ಕಲಬುರಗಿ| ರಾಮನವಮಿ ಆಚರಣೆ; ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ

ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ...

ಕಲಬುರಗಿ| ಬೇಸಿಗೆಯ ಸವಾಲುಗಳ ಎದುರಿಸಲು ಸಿದ್ಧ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

ಕಲಬುರಗಿ: ಕಲಬುರಗಿ ಜಿಲ್ಲಾಡಳಿತವು ಬೇಸಿಗೆಯ ಸವಾಲುಗಳನ್ನು ಎದುರಿಸಲು ಸಂಪೂರ್ಣ ಸನ್ನದ್ಧವಾಗಿದ್ದು, ಸಾರ್ವಜನಿಕರು...