ಕಲಬುರಗಿ| ಕ್ರೀಡಾಕೂಟದಲ್ಲಿ ಯತಿರಾಜ ಪ್ರೌಢಶಾಲೆ ಮಕ್ಕಳ ಅಪ್ರತಿಮ ಸಾಧನೆ

Date:

Share post:

ಕಲಬುರಗಿ: ಅಫಜಲಪುರ ತಾಲ್ಲೂಕಿನ ಶ್ರೀಕ್ಷೇತ್ರ ಗಾಣಗಾಪುರದ ಯತಿರಾಜ ಶಿಕ್ಷಣ ಸಂಸ್ಥೆಯ ಅಡಿಯಲ್ಲಿನ ಯತಿರಾಜ ಪ್ರೌಢಶಾಲೆಯ ಮಕ್ಕಳು 2025-26 ನೇ ಸಾಲಿನ ಅಫಜಲಪುರ ತಾಲ್ಲೂಕಿನ ಕ್ಲಸ್ಟರ್ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿವಿಧ ಕ್ರೀಡೆಯಲ್ಲಿ ವಿಜೇತರಾಗಿ ಸಾಧನೆಗೈದಿದ್ದಾರೆ.

ಅಫಜಲಪೂರದ ತಾಲೂಕ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಬಾಲಕರ ಮತ್ತು ಬಾಲಕಿಯರ ಖೋ ಖೋ ಆಟದಲ್ಲಿ ಪ್ರಥಮ ಸ್ಥಾನ, ಬಾಲಕರ 4×100ಮೀಟರ್ ರಿಲೆಯಲ್ಲಿ ಪ್ರಥಮ ಸ್ಥಾನ, ಬಾಲಕಿಯರು ದ್ವಿತೀಯ ಸ್ಥಾನ, ಬಾಲಕರ ವಾಲಿಬಾಲ್ ಆಟದಲ್ಲಿ ಪ್ರಥಮ, ಬಾಲಕಿಯರ ತ್ರೋ ಬಾಲ್ ಆಟದಲ್ಲಿ ಪ್ರಥಮ ಹಾಗೂ ವೈಯಕ್ತಿಕ ಕ್ರೀಡೆಯಲ್ಲಿ ಕುಮಾರಿ. ಅಕ್ಷತಾ ಸಿದ್ದಪ್ಪ 100, 200, 400 ಮೀಟರ್ ಓಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ವಿದ್ಯಾರ್ಥಿಗಳ ಸಾಧನೆಯನ್ನು ಕಂಡು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಭೀಮರಾವ್ ಚೌಡಾಪುರಕರ, ಸಂಸ್ಥೆಯ ಅಧ್ಯಕ್ಷರಾದ ಚಂದ್ರ ವಿಲಾಸ್‌ಭಟ್ ಪೂಜಾರಿ, ಕಾರ್ಯದರ್ಶಿ ಋಷಿಕೇಶ್ ಚೌಡಾಪುರಕರ, ಗೋವಿಂದ್ ರಾವ್ ಚೌಡಾಪುರಕರ, ಪ್ರೌಢಶಾಲೆಯ ಮುಖ್ಯ ಗುರುಗಳಾದ ಮಹೇಬೂಬ ಕಣ್ಣಿ, ದೈಹಿಕ ಶಿಕ್ಷಕಿ ಸುಜಾತ ವಾಗ್ಮೊಡೆ, ರಾಜು ವಾಗ್ಮೊರೆ, ಶಿಕ್ಷಕ ಸಂತೋಷ್ ಶಂಡಗೆ ಹಾಗೂ ಸಂಸ್ಥೆಯ ಎಲ್ಲಾ ಪದಾಧಿಕಾರಿಗಳು ಮತ್ತು ಶಿಕ್ಷಕ ವೃಂದದವರು ಹರ್ಷ ವ್ಯಕ್ತಪಡಿಸಿದರೆಂದು ವಿಕಾಸ್ ಜಿ.ಪಂಚಾಳವರು ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಏ.15 ರಿಂದ 17ರ ವರೆಗೆ ಹೀಟ್ ವೇವ್ ಆರೆಂಜ್ ಅಲರ್ಟ್: ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ 

ಕಲಬುರಗಿ: ಕಲಬುರಗಿ ಜಿಲ್ಲೆಯಾದ್ಯಂತ ಇದೇ ಏಪ್ರೀಲ್ 15 ರಿಂದ 17ರ ವರೆಗೆ...

ಕಲಬುರಗಿ| ಅಂಬೇಡ್ಕರ್ ಜಯಂತಿ: ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ: ಡಿಸಿ ಆದೇಶ

ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಯಾವುದೇ ಅಹಿತಕರ...

ಕಲಬುರಗಿ| ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಡಾ.ಅಂಬೇಡ್ಕರ್ ಜಯಂತಿ

ಕಲಬುರಗಿ: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಾಬಾ ಸಾಹೇಬ ಅಂಬೇಡ್ಕರ್...

ಕಲಬುರಗಿ| ಕಲಾ ವಿಭಾಗದಲ್ಲಿ ಸೃಷ್ಟಿ ಮಲ್ಲಿನಾಥ ರಾಜ್ಯಕ್ಕೆ ಪ್ರಥಮ

ಕಲಬುರಗಿ: ಪ್ರಸಕ್ತ ದ್ವಿತೀಯ ಪಿ.ಯು.ಸಿ-1 ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಕಲಬುರಗಿಯ...