ಕಲಬುರಗಿ| ವಿಷ ಸೇವಿಸಿ ರೈತ ಆತ್ಮಹತ್ಯೆ

Date:

Share post:

ಕಲಬುರಗಿ: ಕೃಷಿಗಾಗಿ ಮಾಡಿದ ಸಾಲ ತೀರಿಸಲಾಗದೆ ವಿಷ ಸೇವಿಸಿ ಆತ್ಮ ಹತ್ಯೆಗೆ ಶರಣಾದ ಘಟನೆ ಜೇವರ್ಗಿ ತಾಲ್ಲೂಕಿನ ನೆಲೋಗಿ ಪೊಲೀಸ್ ಠಾಣೆ ವ್ಯಾಪ್ತಿಯ ಅಂಕಲಗಾ ಗ್ರಾಮದ ತಾಂಡಾದಲ್ಲಿ ನಡೆದಿದೆ.

ಅಂಕಲಗಾ ತಾಂಡಾದ ನಿವಾಸಿ ಲಕ್ಷ್ಮಣ ಸೋಮುಲು ರಾಠೋಡ (65) ಮೃತ ರೈತರೆಂದು ಎಂದು ಗುರುತಿಸಲಾಗಿದೆ.

ಮೂರು ದಿನಗಳ ಹಿಂದೆ ವಿಷ ಸೇವನೆ ಮಾಡಿದ ರೈತನನ್ನು ಕಲಬುರ್ಗಿಯ ಜಿಮ್ಸ್ ಆಸ್ಪತ್ರೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

2ಎಕರೆ 10 ಗುಂಟೆ ಹೊಂದಿದ ಮೃತ ರೈತನ ಹೆಸರಿನಲ್ಲಿ ಪ್ರಗತಿ ಕೃಷ್ಣಾ ಬ್ಯಾಂಕ್‌ನಲ್ಲಿ 2 ಲಕ್ಷ, ಇಟಗಾ ಸಹಕಾರಿ ಬ್ಯಾಂಕ್ ನಲ್ಲಿ 50 ಸಾವಿರ ರೂ. ಸೇರಿದಂತೆ ಖಾಸಗಿಯಾಗಿ 6 ಲಕ್ಷ ರೂ. ಸಾಲವಿತ್ತು ಎಂದು ಮೂಲಗಳು ತಿಳಿಸಿವೆ.

ಈ ಕುರಿತು ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...

ಕಲಬುರಗಿ| ಐರಾವತ – ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ; ಇಬ್ಬರು ಚಾಲಕರ ಮೃತ್ಯು

ಕಲಬುರಗಿ: ಐರಾವತ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ ಸಂಭವಿಸಿ...

ಕಲಬುರಗಿ–ಮೈಸೂರು, ಕಲಬುರಗಿ–ಶಿವಮೊಗ್ಗ ಎಸಿ ಸ್ಲೀಪರ್ ಬಸ್ ಕಾರ್ಯಾಚರಣೆಗೆ ಚಾಲನೆ

ಮೂರು ತಿಂಗಳಲ್ಲಿ‌ 120 ಹೊಸ ಬಸ್ ಸೇರ್ಪಡೆ: ಅರುಣಕುಮಾರ ಪಾಟೀಲ ಕಲಬುರಗಿ: ಕಲ್ಯಾಣ...