ಕಲಬುರಗಿ | ಕೇಂದ್ರ ಕಾರಾಗೃಹದಲ್ಲಿ ನಶಾಮುಕ್ತ ಭಾರತ ಅಭಿಯಾನದ ಸಾಮೂಹಿಕ ಪ್ರತಿಜ್ಞೆ

Date:

Share post:

ಕಲಬುರಗಿ: ಕೇಂದ್ರ ಕಾರಾಗೃಹದ ಒಳಾವರಣದಲ್ಲಿ ನಶಾಮುಕ್ತ ಭಾರತ ಅಭಿಯಾನದ ಅಡಿಯಲ್ಲಿ ಮಾದಕ ವಸ್ತುಗಳನ್ನು ಸೇವನೆ ಮಾಡದೇ ಇರುವುದರ ಕುರಿತಂತೆ ಸರ್ಕಾರ ಹಾಗೂ ಪ್ರಧಾನ ಕಛೇರಿಯ ಆದೇಶದಂತೆ ಈ ಸಂಸ್ಥೆಯ ಮುಖ್ಯಸ್ಥರಾದ ಡಾ. ಅನಿತಾ ಆರ್. ರವರು ಕಾರಾಗೃಹದ ಎಲ್ಲಾ ಅಧಿಕಾರಿ/ಸಿಬ್ಬಂದಿಗಳೊಂದಿಗೆ ಮತ್ತು ಬಂದಿಗಳೊಂದಿಗೆ ಸೇರಿ ಮಾದಕ ವಸ್ತುಗಳನ್ನು ಸೇವನೆ ಮಾಡದೇ ಇರುವುದರ ಕುರಿತು ಸಾಮೂಹಿಕ ಪ್ರತಿಜ್ಞೆಯ ಪ್ರಮಾಣ ವಚನ ಸ್ವೀಕರಿಸಿದ್ದರು.

ನಂತರ ಮಾತನಾಡಿದ ಅವರು, ನಶಾಮುಕ್ತ ಭಾರತ ಅಭಿಯಾನದ ಅಡಿಯಲ್ಲಿ ಒಂದಾಗುತ್ತಿದ್ದೇವೆ ಮತ್ತು ಸಮುದಾಯ, ಕುಟುಂಬ, ಸ್ನೇಹಿತರು, ಸ್ವತಃ ನಾವೆಲ್ಲರೂ ಮಾದಕ ವ್ಯಸನದಿಂದ ದೂರವಾಗಿ ಉಳಿದವರನ್ನು ಅದರಿಂದ ಅಗುವ ಪರಿಣಾಮಗಳ ಬಗ್ಗೆ ಅರಿವು ಮೂಡಿಸುವುದು ನಮ್ಮೇಲ್ಲರ ಕರ್ತವ್ಯವಾಗಿದೆ. ಆದುದರಿಂದ, ನಾವೇಲ್ಲೂರು ಒಟ್ಟಾಗಿ ಸೇರಿ ನಮ್ಮ ಜಿಲ್ಲೆಯಾದ ಕಲಬುರಗಿ ಜಿಲ್ಲೆಯನ್ನು ಮಾದಕ ವ್ಯಸನ ಮುಕ್ತವಾಗಿಸಲು ದೃಡಸಂಕಲ್ಪ ಮಾಡಿ ಅದರಂತೆ ಪ್ರಮಾಣಿಕವಾಗಿ ಪ್ರಯತ್ನ ಮಾಡೋಣ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕಛೇರಿಯ ಅಧೀಕ್ಷಕ ಎಂ.ಹೆಚ್. ಆಶೇಖಾನ್, ಸಂಸ್ಥೆಯ ಸಹಾಯಕ ಆಡಳಿತಾಧಿಕಾರಿ ಭೀಮಾಶಂಕರ ಡಾಂಗೆ, ಜೈಲರ್‍ಗಳಾದ ಸುನಂದ.ವಿ., ಶ್ರೀಮಂತಗೌಡ ಪಾಟೀಲ್, ಶಾಮ ಬಿದ್ರಿ ಹಾಗೂ ಸಂಸ್ಥೆಯ ಶಿಕ್ಷಕ ನಾಗರಾಜ ಮುಲಗೆ ಹಾಗೂ ಸಂಸ್ಥೆಯ ಎಲ್ಲಾ ಅಧಿಕಾರಿ/ ಸಿಬ್ಬಂದಿಗಳು ಭಾಗವಹಿಸಿದರು.

Share post:

spot_imgspot_img

Popular

More like this
Related

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...

ಕಲಬುರಗಿ| ಸರಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕಲಬುರಗಿ: ನಗರದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಫೌಜಿಯಾ...

ಕಲಬುರಗಿ| ಜಿಲ್ಲಾಧಿಕಾರಿಗಳಿಂದ ಸಿಟಿ ರೌಂಡ್: ರಸ್ತೆ ದುರಸ್ತಿ,‌ ಗುಂಡಿ ಮುಚ್ಚುವ ಕಾರ್ಯ ಪರಿಶೀಲನೆ

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮತ್ತು ಮಹಾನಗರ ಪಾಲಿಕೆ ಆಯುಕ್ತ ಅವಿನಾಶ...

ಕಲಬುರಗಿ| ಬಾಲ್ಯ ವಿವಾಹ, ಫೋಕ್ಸೋ ಪ್ರಕರಣಗಳ ಬಗ್ಗೆ ನಿಗಾವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ಸೂಚನೆ

ಕಲಬುರಗಿ: ಬಾಲ್ಯವಿವಾಹ ಮತ್ತು ಫೋಕ್ಸೋ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು...