ಕಲಬುರಗಿ| ಗುಲ್ಬರ್ಗ ವಿವಿಯಲ್ಲಿ ಜೈವಿಕ ತಂತ್ರಜ್ಞಾನ ಪ್ರದರ್ಶನ ಮೇಳ 

Date:

Share post:

ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ಜೈವಿಕ ತಂತ್ರಜ್ಞಾನ ವಿಭಾಗದಲ್ಲಿ ಜೈವಿಕ ತಂತ್ರಜ್ಞಾನ ಮೇಳ ಪ್ರದರ್ಶನ ಹಮ್ಮಿಕೊಂಡಿತ್ತು. ಈ ಪ್ರದರ್ಶನ ಮೇಳಕ್ಕೆ ನಗರದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಎಂಟನೂರು ವಿದ್ಯಾರ್ಥಿಗಳು ಬೇಟಿ ಕೊಟ್ಟು ಪ್ರದರ್ಶನ ಮೇಳವನ್ನು ವಿಕ್ಷಣೆ ಮಾಡಿದರು.

ಪ್ರಸ್ತುತ ದಿನಗಳಲ್ಲಿ ಜೈವಿಕ ಇಂಧನವು ಪರಿಸರ ಸ್ನೇಹಿ ಮತ್ತು ನವೀಕರಿಸಬಹುದಾದ ಇಂಧನ ಮೂಲವಾಗಿದೆ. ಇದು ಪಳೆಯುಳಿಕೆ ಇಂಧನಗಳಿಗೆ ಪರ್ಯಾಯವಾಗಿ ಸಸ್ಯಜನ್ಯ ವಸ್ತುಗಳು ಮತ್ತು ಜೈವಿಕ ತ್ಯಾಜ್ಯಗಳಿಂದ ತಯಾರಿಸಲಾಗುತ್ತದೆ. ಜೈವಿಕ ಇಂಧನಗಳು ಇಂಗಾಲದ ಡೈಆಕ್ಸೈಡ್ ಹೊರಸೂಸುವಿಕೆಯನ್ನು ಕಡಿಮೆ ಮಾಡುವುದಲ್ಲದೆ, ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಗೆ ಹೊಸ ಅವಕಾಶಗಳನ್ನು ಸೃಷ್ಟಿಸುತ್ತದೆ. ಹೀಗೆ ಹಲವು ಮೋಡೆಲ್ ಬಗ್ಗೆ ಶಾಲಾ ವಿದ್ಯಾರ್ಥಿಗಳಿಗೆ ಇಲ್ಲಿ ಮಾಹಿತಿ ಹೇಳಿಕೊಡಲಾಯಿತು.

ಈ ಪ್ರದರ್ಶನದ ಮೂಲ ಉದ್ದೇಶ ಎಂದರೆ ಭವಿಷ್ಯತ್ತಿನಲ್ಲಿ ಮಕ್ಕಳಿಗೆ ಪ್ರಯೋಗಾತ್ಮಕವಾಗಿ ತಿಳಿಸುವ ಉದ್ದೇಶದಿಂದ ಈ ಪ್ರದರ್ಶನ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಜೈವಿಕ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ. ಚಂದ್ರಕಾಂತ ಕೆಳಮನಿ ಮಾಹಿತಿ ತಿಳಿಸಿದರು. ಗುಲ್ಬರ್ಗ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ, ರಮೇಶ್ ಲಂಡನಕರ್ ಪ್ರದರ್ಶನ ಮೇಳ ಉದ್ಘಾಟಿಸಿದರು.

ಡಾ. ಎಂ. ಬಿ. ಸುಲೋಚನಾ, ಡಾ. ತಥಾಗಥ್ ವಾಗ್ಮೋರೆ, ಡಾ. ಪ್ರಥ್ವಿರಾಜ್ ಬಂಢಾರೆ, ಡಾ. ರಶ್ಮಿ ಮುಂತಾದವರು ಭಾಗವಹಿಸಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಜಿಲ್ಲೆಯಾದ್ಯಂತ ಮತದಾರರ ವಿಶೇಷ ಮಿಂಚಿನ ನೋಂದಣಿ ಅಭಿಯಾನ: ಬಿ.ಫೌಜಿಯಾ ತರನ್ನುಮ್

ಕಲಬುರಗಿ: ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಈಗಾಗಲೇ...

ಕಲಬುರಗಿ| ಸಿಲಿಂಡರ್ ಸ್ಫೋಟ; ಅದೃಷ್ಟವಶಾತ್ ನಾಲ್ವರು ಪಾರು

ಕಲಬುರಗಿ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯಲ್ಲಿದ್ದ ಚಿನ್ನಾಭರಣ, ನಗದು ಹಣ ಸೇರಿದಂತೆ...

ಕಲಬುರಗಿ| ದಾರಿದ್ರ್ಯ ರಹಿತ ಸಮಾಜ ನಮ್ಮೆಲ್ಲರ ಕನಸು: ಡಾ.ಜ್ಯೋತಿ.ಕೆ.ಎಸ್

ಕಲಬುರಗಿ: ನಗರದ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ...

ಕಲಬುರಗಿ| ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ

ಕಲಬುರಗಿ: ನೈಸರ್ಗಿಕ ಸಂಪತನ್ನು ಹಿತ-ಮಿತವಾಗಿ ಬಳಕೆ ಮಾಡದೆ ಮಾನವ ದುರಾಸೆಯಿಂದ ಅವ್ಯಾಹತವಾಗಿ...