ಕಲಬುರಗಿ| ಪ್ರಾಥಮಿಕ ಶಾಲೆಯಲ್ಲಿ ತಲೆಕೆಳಗಾಗಿ ಹಾರಿದ ರಾಷ್ಟ್ರಧ್ವಜ

Date:

Share post:

ಕಲಬುರಗಿ: ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಹಾರಿಸಲಾಗುತ್ತಿದ್ದ ರಾಷ್ಟ್ರ ಧ್ವಜವು ತಲೆ ಕೆಳಗಾಗಿ ಹಾರಿರುವ ಘಟನೆ ಚಿಂಚೋಳಿ ತಾಲ್ಲೂಕಿನ ಬೆನಕನಹಳ್ಳಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿರುವುದು ವರದಿಯಾಗಿದೆ.

ಶುಕ್ರವಾರ ಬೆಳಗ್ಗೆ ರಾಷ್ಟ್ರಧ್ವಜವನ್ನು ಹಾರಿಸುತ್ತಿದ್ದ ವೇಳೆ ಏಕಾಏಕಿ ತಲೆ ಕೆಳಗಾಗಿ ಹಾರಿದೆ, ಈ ಕುರಿತು ಸ್ಥಳೀಯರು ಚಿತ್ರವನ್ನು ತೆಗೆದು ಅಲ್ಲಿನ ತಹಸೀಲ್ದಾರ್ ಅವರಿಗೆ ಕಳುಹಿಸಿದ್ದಾರೆ. ಅಲ್ಲದೆ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಘಟನೆ ಕುರಿತಾಗಿ ಮಾಹಿತಿ ಚಿಂಚೋಳಿ ತಹಸೀಲ್ದಾರ್ ಅವರಿಗೆ ತಲುಪಿದ ಬೆನ್ನಲ್ಲೇ ಅವರು ಕ್ಷೇತ್ರ ಶಿಕ್ಷಣಾಧಿಕಾರಿಗೆ ಕರೆ ಮಾಡಿ, ಕಾರಣ ಕೇಳಿ ನೋಟಿಸ್ ನೀಡುವಂತೆ ತಿಳಿಸಿದ್ದಾರೆ. ಅದರಂತೆಯೇ ಅಲ್ಲಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಬೆನಕನಹಳ್ಳಿಯ ನಮ್ಮೂರು ಕಿರಿಯ ಪ್ರಾಥಮಿಕ ಶಾಲೆಯ ಪ್ರಭಾವಿ ಮುಖ್ಯ ಶಿಕ್ಷಕರಿಗೆ ಕಾರಣ ಕೇಳಿ ನೋಟಿಸ್ ಕೊಟ್ಟಿದ್ದು, ಮೂರು ದಿನಗಳ ಒಳಗಾಗಿ ಉತ್ತರಿಸುವಂತೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

Share post:

spot_imgspot_img

Popular

More like this
Related

ಕಲಬುರಗಿ: ಮಿಣಜಗಿಯಲ್ಲಿ ಹೊಸ ಕಟ್ಟಡಗಳ ಲೋಕಾರ್ಪಣೆ

ಕಲಬುರಗಿ ತಾಲೂಕಿನ ಮಿಣಜಗಿ ಗ್ರಾಮದಲ್ಲಿ 2023–24ನೇ ಸಾಲಿನ ವಿವಿಧ ಅಭಿವೃದ್ಧಿ ಯೋಜನೆಗಳ...

ಕಲಬುರಗಿ| ಫೆ.12 ರಿಂದ ಡಿ.ಇ.ಸಿ. ಸಾಮೂಹಿಕ ಗುಳಿಗೆ ನುಂಗಿಸುವ ಕಾರ್ಯಕ್ರಮ: ಡಿ.ಸಿ. ಬಿ.ಫೌಜಿಯಾ ತರನ್ನುಮ್ ಸೂಚನೆ

ಕಲಬುರಗಿ: ಆನೆಕಾಲು ರೋಗ ಬಾರದಂತೆ ತಡೆಗಟ್ಟುವ ನಿಟ್ಟಿನಲ್ಲಿ ಇದೇ ಫೆಬ್ರವರಿ 12...

ಕಲಬುರಗಿ| ಚಾಂದ ಬೀಬೀ ಕಾಲೇಜಿನಲ್ಲಿ ಗಣರಾಜ್ಯೋತ್ಸವ ದಿನಾಚರಣೆ

ಕಲಬುರಗಿ: ಚಾಂದ ಬೀ ಬೀ ಮಹಿಳಾ ಶಿಕ್ಷಣ ಮಹಾವಿದ್ಯಾಲಯದಲ್ಲಿ 77ನೆಯ ಗಣರಾಜ್ಯೋತ್ಸವ...

ಕಲಬುರಗಿ| ಹಾಸ್ಟೆಲ್ ಸಿಬ್ಬಂದಿಗಳಿಗೆ ಐದು ತಿಂಗಳಿಂದ ಸಿಗದ ವೇತನ; ಪ್ರತಿಭಟನೆ

ಕಲಬುರಗಿ: ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ಕಳೆದ 16-20...